ETV Bharat / state

ನೇಹಾ ಮನೆಗೆ ಮುಸ್ಲಿಂ ಮುಖಂಡರ ಭೇಟಿ: ಆರೋಪಿ ಪರ ಯಾರೂ ವಕಾಲತ್ತು ವಹಿಸದಂತೆ ಅಂಜುಮನ್ ಸಂಸ್ಥೆ ನಿರ್ಧಾರ - girl murder case

author img

By ETV Bharat Karnataka Team

Published : Apr 20, 2024, 9:02 PM IST

ನೇಹಾ ಹಿರೇಮಠ ಕೊಲೆ ಪ್ರಕರಣದ ಆರೋಪಿಯ ವಿರುದ್ಧ ಯಾರೂ ವಕಾಲತ್ತು ವಹಿಸದಂತೆ ಅಂಜುಮನ್ ಸಂಸ್ಥೆ ತೀರ್ಮಾನಿಸಿದೆ ಎಂದು ಅಂಜುಮನ್ ಸಂಸ್ಥೆಯ ಮುಖ್ಯಸ್ಥರು ತಿಳಿಸಿದ್ದಾರೆ.

Hubbali girl murder case
ಹುಬ್ಬಳ್ಳಿ ಯುವತಿ ಕೊಲೆ ಪ್ರಕರಣ

ಹುಬ್ಬಳ್ಳಿ: ಕಾಂಗ್ರೆಸ್ ಕಾರ್ಪೊರೇಟರ್ ನಿರಂಜನಯ್ಯ ಹಿರೇಮಠ ಅವರ ಮನೆಗೆ ಮುಸ್ಲಿಂ ಮುಖಂಡರ ಭೇಟಿ ನೀಡಿ, ಸಾಂತ್ವನ ಹೇಳಿದರು. ಅಂಜುಮನ್ ಸಂಸ್ಥೆಯಲ್ಲಿ ಮೀಟಿಂಗ್ ‌ಮಾಡಿ, ಆರೋಪಿ ಪರ ಯಾರೂ ವಕಾಲತ್ತು ವಹಿಸದಂತೆ ನಿರ್ಣಯ ಮಾಡಿದ್ದೇವೆ. ಆರೋಪಿಗೆ ಕಠಿಣ ಶಿಕ್ಷೆಯಾಗಬೇಕು. ಇಂತಹ ಪ್ರಕರಣಗಳಿಗೆ ಹೊಸ ಕಾನೂನು ತರಬೇಕು. ನಾವೆಲ್ಲ ನಿಮ್ಮ ಜೊತೆ ಇರುತ್ತೇವೆ ಎಂದು ನಿರಂಜನಯ್ಯ ಹಿರೇಮಠ ಅವರಿಗೆ ಮುಖಂಡರು ಧೈರ್ಯ ತುಂಬಿದರು.

ನಗರದ ಬಿಡನಾಳದಲ್ಲಿರುವ ನಿವಾಸಕ್ಕೆ ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಅಲ್ತಾಫ್ ಹಳ್ಳೂರ, ಪಾಲಿಕೆ ಸದಸ್ಯರಾದ ನಜೀರ್ ಅಹಮ್ಮದ್ ಹೊನ್ಯಾಳ, ಆರೀಪ್ ಭದ್ರಾಪೂರ, ಇಲಿಯಾಸ್ ಮನಿಯಾರ್ ಸೇರಿ ಹಲವು ಮುಖಂಡರು ಭೇಟಿ ನೀಡಿ ಸಾಂತ್ವನ ಹೇಳಿದರು.

ನೇಹಾ ಹಿರೇಮಠ ಕೊಲೆ ಆರೋಪಿ ಫಯಾಜ್​ಗೆ ಕಠಿಣ ಶಿಕ್ಷೆ ಕೊಡಬೇಕು. ಆರೋಪಿ ಯಾವುದೇ ಸಮುದಾಯದವನಿರಲಿ ಒಂದು ಜೀವ ತಗೆದುಕೊಂಡವ ಮನುಷ್ಯನೇ ಅಲ್ಲ. ನೇಹಾ ಕುಟುಂಬ ಮಾತ್ರವಲ್ಲ, ಇಡೀ ಹುಬ್ಬಳ್ಳಿ-ಧಾರವಾಡ ಜನ ದುಃಖದಲ್ಲಿದ್ದಾರೆ‌. ಯಾವುದೇ ಸರ್ಕಾರವಿರಲಿ, ವಿಶೇಷ ಕಾನೂನು ಮಾಡಿ ಗಲ್ಲು ಶಿಕ್ಷೆ ಕೊಡುವ ಕೆಲಸ ಆಗಬೇಕು. ಈ‌ ಸಂಬಂಧ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತರಿಗೆ ಅಂಜುಮನ್ ಸಂಸ್ಥೆಯಿಂದ ಮನವಿ ಸಲ್ಲಿಸಿ ಕಠಿಣವಾದ ಕ್ರಮ ತೆಗೆದುಕೊಳ್ಳಬೇಕೆಂದು ಒತ್ತಾಯ ಮಾಡಿದ್ದೇವೆ ಎಂದು ಅಂಜುಮನ್ ಸಂಸ್ಥೆಯ ಮುಖ್ಯಸ್ಥ ಹಾಗೂ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಲ್ತಾಫ್​ ಹಳ್ಳೂರ ಶನಿವಾರ ಪ್ರತಿಕ್ರಿಯೆ ನೀಡಿದರು.

ಇದನ್ನೂ ಓದಿ: ನೇಹಾ ಕೊಲೆ ಪ್ರಕರಣ ರಾಜಕೀಯ ಅಸ್ತ್ರವನ್ನಾಗಿ ಮಾಡಿಕೊಳ್ಳಬೇಡಿ: ಮಠಾಧೀಶರ ಆಗ್ರಹ - Neha murder case

ಹುಬ್ಬಳ್ಳಿಯ ಬಿವಿಬಿ ಕಾಲೇಜಿನಲ್ಲಿ ನಡೆದ ಎಂಸಿಎ ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಪ್ರಕರಣ ಖಂಡಿಸಿ ರಾಜ್ಯದ ಹಲವೆಡೆ ಇಂದು ಪ್ರತಿಭಟನೆಗಳು ನಡೆದಿವೆ. ಆರೋಪಿಗೆ ಕಠಿಣ ಶಿಕ್ಷೆಯಾಗಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ. ನಗರದ ಚೆನ್ನಮ್ಮ ವೃತ್ತದ ಬಳಿ ಜಯ ಕರ್ನಾಟಕ ಸಂಘಟನೆ ಪ್ರತಿಭಟನೆ ನಡೆಸಿ, ರಾಜ್ಯದಲ್ಲಿ ಹೆಣ್ಣುಮಕ್ಕಳಿಗೆ ಭದ್ರತೆ ನೀಡುವ ಕಾರ್ಯವನ್ನು ಮಾಡಬೇಕು ಎಂದು ಆಗ್ರಹಿಸಲಾಯಿತು. ಪ್ರತಿಭಟನೆಯಲ್ಲಿ ನೂರಾರು ಮಹಿಳೆಯರು ಹಾಗೂ ಜಯಕರ್ನಾಟಕ ಸಂಘಟನೆಯ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

'ನೇಹಾ ಹಿರೇಮಠ ಕೊಲೆ ಪ್ರಕರಣದ ತನಿಖೆಯನ್ನು ಎಲ್ಲಾ ಆಯಾಮಗಳಿಂದ ತನಿಖೆ ನಡೆಸಿ ಆದಷ್ಟು ಬೇಗ ಪೂರ್ಣಗೊಳಿಸುತ್ತೇವೆ. ಯಾವುದೇ ಸಂದರ್ಭದಲ್ಲಿ ಕೂಡ ಮಹಿಳೆಯರು ವಿಚಲಿತರಾಗದೇ ಧೈರ್ಯವಾಗಿರಬೇಕು. ಅವಳಿನಗರದಲ್ಲಿ ಮತ್ತಷ್ಟು ಕಟ್ಟುನಿಟ್ಟಿನ ಕ್ರಮಗಳನ್ನು ಜರುಗಿಸುವ ಮೂಲಕ ಭದ್ರತೆ ನೀಡಲಾಗುತ್ತದೆ ಎಂದು ನಗರ ಪೊಲೀಸ್ ಆಯುಕ್ತ ರೇಣುಕಾ ಸುಕುಮಾರ್​ ಹೇಳಿದ್ದರು.

ಇದನ್ನೂ ಓದಿ: ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್‌ ಬಂದಿದೆ, ಅದಕ್ಕೆ ಎಲೆಕ್ಷನ್​ಗೆ ಸ್ಪರ್ಧಿಸಿದ್ದಾರೆ: ಬಸನಗೌಡ ಪಾಟೀಲ್‌ ಯತ್ನಾಳ್‌ - basanagouda patil yatnal

ETV Bharat Logo

Copyright © 2024 Ushodaya Enterprises Pvt. Ltd., All Rights Reserved.