ಬೆಂಗಳೂರು: ಬಿಜೆಪಿ ಸಂಸದ ಡಾ.ಕೆ.ಸುಧಾಕರ್ ಅವರು ಕಾರ್ಯಕರ್ತರಿಗೆ ಮದ್ಯ ಹಂಚಿರುವ ಬಗ್ಗೆ ಆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಉತ್ತರಿಸಬೇಕು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು.
ವಿಧಾನಸೌಧದಲ್ಲಿ ಇಂದು ಮಾಧ್ಯಮಗಳಿಗೆ ಪ್ರತಿಕ್ರಿಯಿಸುತ್ತಾ, ನೆಲಮಂಗಲದಲ್ಲಿ ಬಿಜೆಪಿ ಕಾರ್ಯಕ್ರಮದಲ್ಲಿ ಮದ್ಯ ಹಂಚಿಕೆ ಮಾಡಿರುವ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸುವುದು ಬೇರೆ ವಿಚಾರ. ಆದರೆ ಬಿಜೆಪಿ ಪ್ರಮುಖ ನಾಯಕರು ಇದಕ್ಕೆ ಸ್ಪಷ್ಟನೆ ನೀಡಬೇಕು. ಬಿಜೆಪಿಯ ಇಂಥ ಸಂಸ್ಕೃತಿ ಬಗ್ಗೆ ಸ್ಥಳೀಯ ಬಿಜೆಪಿ ನಾಯಕರಿಗಿಂತ ರಾಷ್ಟ್ರೀಯ ನಾಯಕರು ಉತ್ತರಿಸಲಿ ಎಂದು ಆಗ್ರಹಿಸಿದರು.
ಬಾವಿಕೆರೆ ಗ್ರಾಮದ ಜಮೀನೊಂದರಲ್ಲಿ ಬಿಜೆಪಿ ಹಾಗೂ ಜೆಡಿಎಸ್ ನೇತೃತ್ವದಲ್ಲಿ ಆಯೋಜಿಸಿದ್ದ ನೂತನ ಸಂಸದ ಡಾ.ಕೆ.ಸುಧಾಕರ್ ಅಭಿನಂದನಾ ಸಮಾರಂಭದಲ್ಲಿ ಭರ್ಜರಿ ಬಾಡೂಟದೊಂದಿಗೆ ಮದ್ಯ ವಿತರಣೆ ಮಾಡಲಾಗಿತ್ತು. ಕಾರ್ಯಕರ್ತರು ಮತ್ತು ನಾಗರಿಕರು ಮದ್ಯದ ಬಾಟಲಿಗಳಿಗಾಗಿ ಮುಗಿಬಿದ್ದ ಘಟನೆಯ ವಿಡಿಯೋ ವೈರಲ್ ಆಗಿದೆ. ಹೆಚ್ಚಿನ ಸಂಖ್ಯೆಯ ಯುವಕರ ಜೊತೆಗೆ ಮಹಿಳೆಯರು, ವೃದ್ಧೆಯರೂ ಮದ್ಯದ ಬಾಟಲ್‌ಗಳನ್ನು ಪಡೆದು ಮೈದಾನದಲ್ಲೇ ಕುಳಿತಿರುವುದನ್ನು ವಿಡಿಯೋದಲ್ಲಿ ನೋಡಬಹುದು.
ಇದನ್ನೂ ಓದಿ: ಚಿಕ್ಕಬಳ್ಳಾಪುರ ಸಂಸದ ಡಾ.ಕೆ.ಸುಧಾಕರ್ ಅಭಿನಂದನಾ ಸಮಾರಂಭದಲ್ಲಿ ಮದ್ಯ ವಿತರಣೆ ಆರೋಪ - Liquor Distribution