ETV Bharat / state

ದೇಶದಲ್ಲಿ ಅಕ್ರಮವಾಗಿ ಮಾರಾಟವಾದ ಎಲ್ಲ ಅರಣ್ಯ ಭೂಮಿ ಹಿಂಪಡೆಯಲು ಕುಮಾರಸ್ವಾಮಿ ಕ್ರಮ ವಹಿಸಲಿ: ಸಚಿವ ಈಶ್ವರ್ ಖಂಡ್ರೆ - Ishwar Khandre - ISHWAR KHANDRE

''ದೇಶದಲ್ಲಿ ಅಕ್ರಮವಾಗಿ ಮಾರಾಟವಾದ ಎಲ್ಲ ಅರಣ್ಯ ಭೂಮಿ ಹಿಂಪಡೆಯಲು ಕುಮಾರಸ್ವಾಮಿ ಅವರು ಕ್ರಮ ವಹಿಸಬೇಕು'' ಎಂದು ಸಚಿವ ಈಶ್ವರ್ ಖಂಡ್ರೆ ತಿರುಗೇಟು ನೀಡಿದರು.

HD Kumaraswamy  Ishwar Khandre  Forest Department  Bengaluru
ಈಶ್ವರ್ ಖಂಡ್ರೆ (ETV Bharat)
author img

By ETV Bharat Karnataka Team

Published : Aug 14, 2024, 6:44 AM IST

ಬೆಂಗಳೂರು: ''ಅರಣ್ಯ ಭೂಮಿಯನ್ನು ಮಾರಾಟ, ದಾನ ಮಾಡಲು ಯಾರಿಗೂ ಅವಕಾಶವಿಲ್ಲ. ಹೆಚ್.ಎಂ.ಟಿ. ವಶದಲ್ಲಿರುವ ಅರಣ್ಯ ಭೂಮಿ ಮರು ವಶಕ್ಕೆ ಪಡೆದ ಬಳಿಕ ಅಲ್ಲಿ ವೃಕ್ಷೋಧ್ಯಾನ ನಿರ್ಮಿಸಲಾಗುವುದು'' ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ಸ್ಪಷ್ಟಪಡಿಸಿದ್ದಾರೆ.

ವಿಕಾಸಸೌಧದ ತಮ್ಮ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು, ''ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹೆಚ್​ಎಂಟಿ ವಶದಲ್ಲಿರುವ ಜಮೀನು ಪಡೆದು ಯಾರಿಗೆ ಮಾರುತ್ತೀರಿ ಎಂದು ಕೇಳಿದ್ದಾರೆ. ಅರಣ್ಯ ಭೂಮಿ ಮಾರಾಟ ಮಾಡಿರುವುದು ಈಗ ನಿಮ್ಮ ಇಲಾಖಾ ವ್ಯಾಪ್ತಿಯಲ್ಲಿರುವ ಹೆಚ್​ಎಂಟಿಯೇ ಹೊರತು ಅರಣ್ಯ ಇಲಾಖೆ ಅಲ್ಲ'' ಎಂದು ತಿರುಗೇಟು ನೀಡಿದರು.
ಬೆಂಗಳೂರಿನ ಪ್ರಮುಖ ಭಾಗದಲ್ಲಿರುವ ಪೀಣ್ಯ ಜಾಲಹಳ್ಳಿ ಅರಣ್ಯ ಜಮೀನು ಮರು ವಶಕ್ಕೆ ಪಡೆದು ಶುದ್ಧ ಉಸಿರಾಟಕ್ಕೊಂದು ತಾಣ (ಲಂಗ್ ಸ್ಪೇಸ್) ನಿರ್ಮಾಣ ಮಾಡಲು ತಾವು ಬಯಸಿರುವುದಾಗಿ ತಿಳಿಸಿದರು.

''ಕೇಂದ್ರ ಸರ್ಕಾರಿ ಸ್ವಾಮ್ಯದ ಹೆಚ್​ಎಂಟಿ ರಿಯಲ್ ಎಸ್ಟೇಟ್ ಸಂಸ್ಥೆಯಂತೆ ವರ್ತಿಸುತ್ತಿದೆ. 1997ರಿಂದ 2011ರವರೆಗೆ ಹೆಚ್​ಎಂಟಿ ಸಂಸ್ಥೆ ತನ್ನ ವಶದಲ್ಲಿದ್ದ ಅರಣ್ಯ ಭೂಮಿಯನ್ನು ಅಕ್ರಮವಾಗಿ ಡಾಲರ್ಸ್ ಕನ್ ಸ್ಟ್ರಕ್ಷನ್ಸ್ ಅಂಡ್ ಎಂಜಿನಿಯರ್ಸ್ ಪ್ರೈ.ಲಿ., ಯುಎಸ್ ಸ್ಟೀಲ್ ಕಂಪನಿ, ಸಿಲ್ವರ್ ಲೈನ್ ಎಸ್ಟೇಟ್ಸ್, ಮನೆ ಕನ್ ಸ್ಟ್ರಕ್ಷನ್ಸ್ ಲಿ, ಎಂ.ಎಂ.ಆರ್. ಕನ್ ಸ್ಟ್ರಕ್ಷನ್ಸ್, ಬ್ರಿಗೇಡ್ ಎಂಟರ್ ಪ್ರೈಸಸ್, ಬಾಗಮನೆ ಡೆವಲಪರ್ಸ್ ಪ್ರೈ.ಲಿ. ಸೇರಿದಂತೆ ಹಲವು ಖಾಸಗಿ ಮತ್ತು ಸರ್ಕಾರಿ ಸಂಸ್ಥೆಗಳಿಗೆ 165 ಎಕರೆ ಭೂಮಿಯನ್ನು 313 ಕೋಟಿಗೂ ಹೆಚ್ಚು ಹಣಕ್ಕೆ ಮಾರಾಟ ಮಾಡಿದೆ'' ಎಂದರು.

''ಪರಿಸರ ಹೋರಾಟಗಾರರೊಬ್ಬರು ಕಳೆದ ಜುಲೈ 11ರಂದು ತಮ್ಮ ಕಚೇರಿಗೆ ನೀಡಿದ ದೂರು ಆಧರಿಸಿ, ಅಧಿಕಾರಿಗಳ ಸಭೆ ಕರೆದು ಚರ್ಚಿಸಿದಾಗ ಸತ್ಯ ಹೊರಬಿತ್ತು. ಹೀಗಾಗಿ ಮೈಸೂರು ಮಹಾರಾಜರ ಆಳ್ವಿಕೆಯ ಕಾಲದಲ್ಲಿ ಅಂದರೆ 1896 ಜೂನ್ 11ರಲ್ಲೇ ಅಧಿಸೂಚಿತ ಅರಣ್ಯ ಗೆಜೆಟ್ ಆಗಿದೆ'' ಎಂದು ಹೇಳಿದರು.

''ಈ ಭೂಮಿಯನ್ನು 1963ರಲ್ಲಿ ಹೆಚ್​ಎಂಟಿಗೆ ದಾನ ನೀಡಿರುವುದಾಗಿ ಹೇಳಲಾಗಿದೆ. ಈಗ ಕುಮಾರಸ್ವಾಮಿ ಅವರು ಭೂಮಿಯನ್ನು ಹೆಚ್​ಎಂಟಿ ಸಂಸ್ಥೆ ಖರೀದಿಸಿರುವುದಾಗಿ ಹೇಳುತ್ತಿದ್ದಾರೆ. ಅರಣ್ಯ ಭೂಮಿಯನ್ನು ಅರಣ್ಯೇತರ ಉದ್ದೇಶಕ್ಕೆ ಡಿನೋಟಿಫೈ ಮಾಡದೆ, 1980ರ ಅರಣ್ಯ ಸಂರಕ್ಷಣಾ ಕಾಯ್ದೆ ಸೆಕ್ಷನ್ 2ರ ಅಡಿಯಲ್ಲಿ ಕೇಂದ್ರ ಸರ್ಕಾರದಿಂದ ಪೂರ್ವಾನುಮತಿ ಪಡೆಯದೆ ಮಾರಾಟ ಮಾಡಲು ಅಥವಾ ದಾನ ಮಾಡಲು ಕಾನೂನಿನಲ್ಲಿ ಅವಕಾಶವೇ ಇರುವುದಿಲ್ಲ. ರಾಜ್ಯಕ್ಕೆ ಬೆಳಕು ನೀಡಿ, ಪ್ರಸ್ತುತ ಕತ್ತಲಲ್ಲಿ ಬದುಕು ಕಳೆಯುವಂತಾಗಿರುವ ಶರಾವತಿ ಸಂತ್ರಸ್ತರಿಗೆ ಭೂಮಿ ನೀಡಿರುವ ಕುರಿತಂತೆ ರಾಜ್ಯ ಹೈಕೋರ್ಟ್​ನಲ್ಲಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಂಖ್ಯೆ 43037-2019ಕ್ಕೆ ಸಂಬಂಧಿಸಿದಂತೆ ಮಾರ್ಚ್ 4, 2021ರಂದು ಬಂದಿರುವ ತೀರ್ಪು ಇದನ್ನು ಸ್ಪಷ್ಟಪಡಿಸುತ್ತದೆ'' ಎಂದು ತಿಳಿಸಿದರು. ''ಇತ್ತೀಚೆಗೆ ಸರ್ವೋಚ್ಚ ನ್ಯಾಯಾಲಯ Once a Forest is Always a Forest – Environment is more important than civil rights ಎಂದು ಅಭಿಪ್ರಾಯಪಟ್ಟಿದೆ'' ಎಂದ ಅವರು, ''ಇದು ಅರಣ್ಯ ಅಲ್ಲದಿದ್ದರೆ ಏಕೆ ಮಧ್ಯಂತರ ಅರ್ಜಿ (IA) ಹಾಕುತ್ತಿದ್ದರು'' ಎಂದು ಪ್ರಶ್ನಿಸಿದರು.

ಕುಮಾರಸ್ವಾಮಿ ಜೊತೆ ಸಂಘರ್ಷ ಇಲ್ಲ: ''ತಮ್ಮ ಹಾಗೂ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ನಡುವೆ ಉತ್ತಮ ಸೌಹಾರ್ದ ಬಾಂಧವ್ಯವಿದೆ. ನಾನು ಹಿಂದೆಯೂ ದ್ವೇಷದ ರಾಜಕೀಯ ಮಾಡಿಲ್ಲ, ಮುಂದೆಯೂ ಮಾಡಲ್ಲ. ನಾನು ಯಾವುದೇ ಪೂರ್ವಾಗ್ರಹ ಪೀಡಿತನಾಗಿ ಹೆಚ್​ಎಂಟಿ ಭೂಮಿ ವಿಚಾರ ಪ್ರಸ್ತಾಪಿಸಿಲ್ಲ. ಬದಲಾಗಿ ತಮಗೆ ಬಂದ ದೂರಿನ ಮೇಲೆ ಸಚಿವನಾಗಿ ಕ್ರಮ ವಹಿಸಿದ್ದೇನೆ'' ಎಂದು ಸ್ಪಷ್ಟಪಡಿಸಿದರು.

ಬೆಂಗಳೂರಿನಲ್ಲಿ 1 ವರ್ಷದಲ್ಲಿ 101 ಎಕರೆ ಅರಣ್ಯ ಒತ್ತುವರಿ ತರವು: ''ತಾವು ಅರಣ್ಯ ಸಚಿವನಾಗಿ ಅಧಿಕಾರ ವಹಿಸಿಕೊಂಡ ಬಳಿಕ, ಅರಣ್ಯ ವಿಸ್ತರಣೆ ಮತ್ತು ಅರಣ್ಯ ಭೂಮಿ ಒತ್ತುವರಿ ತೆರವು ಮಾಡಿಸುವ ನಿಟ್ಟಿನಲ್ಲಿ ಶ್ರಮಿಸುತ್ತಿದ್ದೇನೆ'' ಎಂದು ತಿಳಿಸಿದ ಈಶ್ವರ ಖಂಡ್ರೆ, ''ಬೆಂಗಳೂರಿನ ಕೊತ್ತನೂರಿನಲ್ಲಿ ಸುಮಾರು 500 ಕೋಟಿ ರೂ. ಬೆಲೆ ಬಾಳುವ 17.34 ಎಕರೆ, ಬಿ.ಎಂ. ಕಾವಲಿನಲ್ಲಿ ಸುಮಾರು 100 ಕೋಟಿ ರೂ. ಮೌಲ್ಯದ 15 ಎಕರೆ, ಪೀಣ್ಯ ಪ್ಲಾಂಟೇಷನ್ ಮತ್ತು ಜಾರಕಬಂಡೆ ಕಾವಲಿನಲ್ಲಿ 200 ಕೋಟಿ ರೂ.ಮೌಲ್ಯದ 18 ಎಕರೆ, ತುರಹಳ್ಳಿ ಅರಣ್ಯ ವ್ಯಾಪ್ತಿಯಲ್ಲಿ ಸುಮಾರು 50 ಕೋಟಿ ರೂ. ಬೆಲೆ ಬಾಳುವ 7 ಎಕರೆ ಸೇರಿದಂತೆ ಒಟ್ಟು 101 ಎಕರೆ 20 ಗುಂಟೆ ಜಮೀನು ವಶಪಡಿಸಿಕೊಳ್ಳಲಾಗಿದೆ. ಉತ್ತರ ಕನ್ನಡದ ಶಿರೂರು ಮತ್ತು ವಯನಾಡಿನಲ್ಲಿ ಗುಡ್ಡ ಕುಸಿತ ಆದ ಬಳಿಕ ನೂರಾರು ಜನರು ಮೃತಪಟ್ಟಿರುವ ದಾರುಣ ಘಟನೆಯ ಬಳಿಕವೂ ನಾವು ಅರಣ್ಯ, ಪ್ರಕೃತಿ ಪರಿಸರ ಉಳಿಸದಿದ್ದರೆ ಮುಂದಿನ ಪೀಳಿಗೆ ನಮ್ಮನ್ನು ಖಂಡಿತಾ ಕ್ಷಮಿಸುವುದಿಲ್ಲ'' ಎಂದು ಸಚಿವರು ತಿಳಿಸಿದರು.

ಇದನ್ನೂ ಓದಿ: ನೋಡಲ್‌ ಜಿಲ್ಲೆಯಾಗಿ ವಿಜಯಪುರ ಆಯ್ಕೆ ಮಾಡಿದ ಸಂಸದೆ ಸುಧಾ ಮೂರ್ತಿ - Sudha Murthy

ETV Bharat Logo

Copyright © 2025 Ushodaya Enterprises Pvt. Ltd., All Rights Reserved.