ETV Bharat / state

ಕರ್ನಾಟಕ ಏಳು ಕೋಟಿ ಜನರ ಉಸಿರಾಗಲಿ, ಕನ್ನಡ ಗಟ್ಟಿಗೊಳಿಸೋಣ: ಸಿಎಂ ಸಿದ್ದರಾಮಯ್ಯ ಕರೆ - CM siddaramaiah

ಕರ್ನಾಟಕ ಸರ್ವ ಜನಾಂಗದ ಶಾಂತಿಯ ತೋಟ. ಕನ್ನಡ ನಾಡು ಬಹುತ್ವದ ಬೀಡು. ಇಲ್ಲಿ ಮನುಷ್ಯ ಪ್ರೀತಿಯ ಬಹುತ್ವ ಆಚರಿಸಲ್ಪಡುತ್ತದೆ. ಆದರೆ, ವಿದ್ಯಾವಂತರೇ ಬಹುತ್ವ, ಜಾತ್ಯತೀತತೆ ಕೈಬಿಟ್ಟು ತಾರತಮ್ಯ, ಕಂದಾಚಾರ ಆಚರಿಸುತ್ತಿರುವುದು ದುರಂತ ಎಂದು ಸಿಎಂ ಸಿದ್ದರಾಮಯ್ಯ ವಿಷಾದ ವ್ಯಕ್ತಪಡಿಸಿದರು.

cm siddaramaiah
ಕರ್ನಾಟಕ ಸಾಂಸ್ಕೃತಿಕ ಮುನ್ನೋಟ: ಚಿಂತನಾ ಸಮಾವೇಶ (ETV Bharat)
author img

By ETV Bharat Karnataka Team

Published : Sep 20, 2024, 5:31 PM IST

ಮೈಸೂರು: ''ಕನ್ನಡದ ವಾತಾವರಣ ವಿಸ್ತರಿಸಲು, ಗಟ್ಟಿಗೊಳಿಸಲು ನಾವೆಲ್ಲಾ ಹೆಚ್ಚೆಚ್ಚು ಶ್ರಮಿಸೋಣ. ಕರ್ನಾಟಕ ಬಹುತ್ವದ ಬೀಡು. ಬಹುತ್ವದ ನಾಡು ಕಟ್ಟುವ ವಿಚಾರದಲ್ಲಿ ರಾಜಿಯೇ ಇಲ್ಲ‌'' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ರಾಷ್ಟ್ರೀಯ ಸಂತಕವಿ ಕನಕದಾಸ ಅಧ್ಯಯನ ಮತ್ತು ಸಂಶೋಧನಾ ಕೇಂದ್ರ ಜಂಟಿಯಾಗಿ ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕಾವೇರಿ ಸಭಾಂಗಣದಲ್ಲಿ ಆಯೋಜಿಸಿದ್ದ "ಕರ್ನಾಟಕ ಸಾಂಸ್ಕೃತಿಕ ಮುನ್ನೋಟ: ಚಿಂತನಾ ಸಮಾವೇಶ" ಉದ್ಘಾಟಿಸಿ ಅವರು ಮಾತನಾಡಿದರು.

CM siddaramaiah
ಸಿಎಂ ಸಿದ್ದರಾಮಯ್ಯ, ಸಾಹಿತಿ ಹಂ.ಪಾ.ನಾಗರಾಜಯ್ಯ (ETV Bharat)

ಸುವರ್ಣ ಸಂಭ್ರಮ: ''ದೇವರಾಜ ಅರಸರು 1973ರಲ್ಲಿ ಕರ್ನಾಟಕ ಎಂದು ನಾಮಕರಣ ಮಾಡಿದರು. ನಾಮಕರಣಗೊಂಡು 50 ವರ್ಷದ ಸುವರ್ಣ ಸಂಭ್ರಮವನ್ನು ಬಿಜೆಪಿ ಸರ್ಕಾರ ಮಾಡಬೇಕಿತ್ತು. ಅವರು ಮಾಡಲಿಲ್ಲ. ಹೀಗಾಗಿ, ನಾನು ಸುವರ್ಣ ಸಂಭ್ರಮವನ್ನು ಬಜೆಟ್​​ನಲ್ಲೇ ಘೋಷಿಸಿ, ಇದನ್ನು ಕನ್ನಡ ಜನೋತ್ಸವವನ್ನಾಗಿ ಆಚರಿಸಲಾಗುತ್ತಿದೆ'' ಎಂದರು.

CM siddaramaiah
ಚಿಂತನಾ ಸಮಾವೇಶ ಉದ್ಘಾಟನೆ (ETV Bharat)

''ಕರ್ನಾಟಕ ಮತ್ತು ಕನ್ನಡ 7 ಕೋಟಿ ಜನರ ಉಸಿರಾಗಲಿ. ಇಲ್ಲಿ ಬದುಕನ್ನು ಕಟ್ಟಿಕೊಂಡಿರುವ ಇತರ ಭಾಷಿಕರು ಕನ್ನಡ ಮಾತಾಡುವಂತಾದರೆ ಒಳ್ಳೆಯದು. ನಾವು ಯಾವ ಭಾಷೆಗೂ ದ್ವೇಷಿಗಳಲ್ಲ. ಸಾಧ್ಯವಿರುವಷ್ಟು ಭಾಷೆಗಳನ್ನೆಲ್ಲಾ ಕಲಿತರೆ ಒಳ್ಳೆಯದೇ. ಆದರೆ, ಕರ್ನಾಟಕದಲ್ಲಿ ಕನ್ನಡದ ವಾತಾವರಣ ನಿರ್ಮಿಸಿ, ಕನ್ನಡವನ್ನು ಪೂರ್ತಿಯಾಗಿ ಬಳಸಬೇಕು. ಇದು ಪ್ರತಿಯೊಬ್ಬ ಕನ್ನಡಿಗರ ಜವಾಬ್ದಾರಿ'' ಎಂದು ಕರೆ ನೀಡಿದರು.

ಕನ್ನಡದ ವಾತಾವರಣ ಗಟ್ಟಿಗೊಳಿಸಬೇಕು: ''ತಮಿಳುನಾಡಿನಲ್ಲಿ ತಮಿಳಿನಲ್ಲಿ, ಕೇರಳದಲ್ಲಿ ಮಲಯಾಳಂನಲ್ಲಿ, ಆಂಧ್ರದಲ್ಲಿ ತೆಲುಗಿನಲ್ಲಿ, ಮಹಾರಾಷ್ಟ್ರದಲ್ಲಿ ಮರಾಠಿಯಲ್ಲೇ ವ್ಯವಹರಿಸುತ್ತಾರೆ. ಆದರೆ, ನಮ್ಮಲ್ಲಿ ಕನ್ನಡ ಬಿಟ್ಟು ಅವರವರ ಭಾಷೆಯಲ್ಲೇ ಹೆಚ್ಚು ವ್ಯವಹರಿಸಲು ಉತ್ಸುಕರಾಗಿ ಉದಾರಿ ಅನ್ನಿಸಿಕೊಂಡಿದ್ದೇವೆ. ಇದು ಅಷ್ಟು ಸರಿಯಲ್ಲ. ಕನ್ನಡದ ವಾತಾವರಣವನ್ನು ಗಟ್ಟಿಗೊಳಿಸಬೇಕು'' ಎಂದು ತಿಳಿಸಿದರು.

''ಬಸವಣ್ಣನವರನ್ನು ನಾವು ಸಾಂಸ್ಕೃತಿಕ ನಾಯಕನನ್ನಾಗಿ ಘೋಷಿಸಿದ್ದು ಬಸವಣ್ಣನವರ ವೈಚಾರಿಕ ನಿಲುವುಗಳನ್ನು ನಾವು ಪಾಲಿಸಬೇಕು ಎನ್ನುವ ಉದ್ದೇಶದಿಂದ. ಸರ್ಕಾರಕ್ಕೆ ಕಿರೀಟ ಸಿಗುತ್ತದೆ ಎನ್ನುವ ಕಾರಣಕ್ಕೆ ಘೋಷಣೆ ಮಾಡಿದ್ದಲ್ಲ. ಬಸವಣ್ಣನ ಆಶಯಗಳು, ವಿಚಾರಗಳು, ವೈಚಾರಿಕತೆ ಯುವ ಪೀಳಿಗೆಗೆ ಹೆಚ್ಚೆಚ್ಚು ಗೊತ್ತಾಗಬೇಕು'' ಎಂದರು.

CM siddaramaiah
ಕರ್ನಾಟಕ ಸಾಂಸ್ಕೃತಿಕ ಮುನ್ನೋಟ: ಚಿಂತನಾ ಸಮಾವೇಶದಲ್ಲಿ ನೆರೆದ ಜನರು (ETV Bharat)

''ಈ ಮಣ್ಣಿನ ಕನ್ನಡ-ಕರ್ನಾಟಕ-ಬಹುತ್ವ-ವೈಚಾರಿಕತೆ ಎಲ್ಲವೂ ಸೇರಿ ಆಗಿರುವ ಕನ್ನಡತನ ರೂಪುಗೊಂಡಿದೆ. ಈ ಕನ್ನಡತನವನ್ನು, ಇದು ರೂಪುಗೊಂಡ ಚರಿತ್ರೆಯನ್ನು ನಾವು ಈ ತಲೆಮಾರಿಗೆ ದಾಟಿಸುವ ಕೆಲಸವನ್ನು ಪರಿಣಾಮಕಾರಿಯಾಗಿ ತಲುಪಿಸುವ ಉದ್ದೇಶದಿಂದ ಈ ಚಿಂತನಾ ಸಮಾವೇಶವನ್ನು ಆಯೋಜಿಸಲಾಗಿದೆ. ನಿಮ್ಮಂಥ ವಿಚಾರವಾದಿಗಳು ಒಟ್ಟಾಗಿ ಸೂಕ್ತವಾದ ಸಾಂಸ್ಕೃತಿಕ‌ ಮುನ್ನೋಟವನ್ನು ನೀಡುತ್ತೀರಿ ಎನ್ನುವ ವಿಶ್ವಾಸವಿದೆ'' ಎಂದು ಹೇಳಿದರು.

ಇದನ್ನೂ ಓದಿ: ಹಿರಿಯ ಸಾಹಿತಿ ಹಂ.ಪಾ.ನಾಗರಾಜಯ್ಯರಿಂದ ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ ಘೋಷಣೆ - Mysuru Dasara 2024

ETV Bharat Logo

Copyright © 2024 Ushodaya Enterprises Pvt. Ltd., All Rights Reserved.