ETV Bharat / state

ದೇಶದ ಇತರೆ ಹೈಕೋರ್ಟ್‌ಗಳಿಗೆ ಸಿಜೆಗಳನ್ನಾಗಿ ಕರ್ನಾಟಕದ ನ್ಯಾಯಮೂರ್ತಿಗಳ ನೇಮಕಕ್ಕೆ ಪತ್ರ - Letter To CJI

author img

By ETV Bharat Karnataka Team

Published : Jul 17, 2024, 11:12 AM IST

ದೇಶದ ಇತರೆ ಹೈಕೋರ್ಟ್‌ಗಳಲ್ಲಿ ಕರ್ನಾಟಕ ಹೈಕೋರ್ಟ್‌ನ ನ್ಯಾಯಮೂರ್ತಿಗಳ ಪ್ರಾತಿನಿಧ್ಯ ಅತ್ಯಂತ ಕಡಿಮೆ ಇದೆ. ಹೀಗಾಗಿ ಕರ್ನಾಟಕ ಬಿಟ್ಟು ಉಳಿದ ಹೈಕೋರ್ಟ್‌ಗಳ ಮುಖ್ಯ ನ್ಯಾಯಮೂರ್ತಿಗಳನ್ನಾಗಿ ಕರ್ನಾಟಕ ನ್ಯಾಯಮೂರ್ತಿಗಳನ್ನು ನೇಮಿಸುವಂತೆ ಸಿಜೆಐಗೆ ಪತ್ರ ಬರೆಯಲಾಗಿದೆ.

ಕರ್ನಾಟಕ ನ್ಯಾಯಮೂರ್ತಿಗಳ ನೇಮಕಕ್ಕೆ ಸಿಜೆಐಗೆ ಪತ್ರ
ಸಾಂದರ್ಭಿಕ ಚಿತ್ರ (ETV Bharat)

ಬೆಂಗಳೂರು: ರಾಜ್ಯ ಹೈಕೋರ್ಟ್‌ನ ನ್ಯಾಯಮೂರ್ತಿಗಳನ್ನು ನಿರ್ಲಕ್ಷಿಸದೇ ಇತರೆ ರಾಜ್ಯಗಳ ಹೈಕೋರ್ಟ್‌ಗಳ ಮುಖ್ಯ ನ್ಯಾಯಮೂರ್ತಿಗಳಾಗಿ(ಸಿಜೆ) ನೇಮಕ ಮಾಡಬೇಕು ಎಂದು ಕೋರಿ ಬೆಂಗಳೂರು ವಕೀಲರ ಸಂಘದ ಮಾಜಿ ಅಧ್ಯಕ್ಷ ಎ.ಪಿ.ರಂಗನಾಥ್​ ಅವರು ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ(ಸಿಜೆಐ) ಡಿ.ವೈ.ಚಂದ್ರಚೂಡ್ ಅವರಿಗೆ ಪತ್ರ ಬರೆದಿದ್ದಾರೆ.

ಪತ್ರದ ವಿವರ: ದೇಶದ ಇತರೆ ಹೈಕೋರ್ಟ್‌ಗಳಲ್ಲಿ ಮುಖ್ಯ ನ್ಯಾಯಮೂರ್ತಿಗಳನ್ನು ಪರಿಗಣಿಸಿದರೆ ಕರ್ನಾಟಕ ಹೈಕೋರ್ಟ್‌ನ ಪ್ರಾತಿನಿಧ್ಯ ಅತ್ಯಂತ ಕಡಿಮೆ. ಕರ್ನಾಟಕ ಹೈಕೋರ್ಟ್ ಹಲವು ವರ್ಷಗಳಿಂದ ಸಮರ್ಥ ಮತ್ತು ಅನುಭವಿ ನ್ಯಾಯಾಧೀಶರನ್ನು ಸೃಷ್ಟಿಸಿದೆ. ನ್ಯಾಯಾಂಗ ಮನೋಧರ್ಮ ಮತ್ತು ಸಂವಿಧಾನವನ್ನು ಎತ್ತಿ ಹಿಡಿಯುವ ಬದ್ಧತೆಯ ಮೂಲಕ ತಮ್ಮನ್ನು ತಾವು ಗುರುತಿಸಿಕೊಂಡಿದ್ದಾರೆ.

ಆದರೆ, ಇತ್ತೀಚಿನ ವರ್ಷಗಳಲ್ಲಿ ದೇಶದ ಇತರೆ ಹೈಕೋರ್ಟ್‌ಗಳಲ್ಲಿ ಮುಖ್ಯ ನ್ಯಾಯಮೂರ್ತಿಗಳ ನೇಮಕಾತಿಗಾಗಿ ಕರ್ನಾಟಕದ ನ್ಯಾಯಾಧೀಶರನ್ನು ಸತತವಾಗಿ ಕಡೆಗಣಿಸಲಾಗುತ್ತಿದೆ. ವೃತ್ತಿಯಲ್ಲಿ ಹಿರಿಯರಾಗಿದ್ದು, ಅರ್ಹತೆಗಳಿದ್ದರೂ ಸೂಕ್ತ ಸ್ಥಾನಮಾನ, ಅವಕಾಶ ನೀಡಲಾಗುತ್ತಿಲ್ಲ.

ನ್ಯಾಯಾಂಗ ನೇಮಕಾತಿಗಳ ಪ್ರಕ್ರಿಯೆಯು ಹಿರಿತನ, ಅರ್ಹತೆ ಮತ್ತು ಪ್ರಾದೇಶಿಕ ಸಮತೋಲನದ ಪರಿಗಣನೆಗಳನ್ನು ಒಳಗೊಂಡಿರುವ ಒಂದು ವ್ಯವಸ್ಥೆಯಾಗಿದೆ. ಆದಾಗ್ಯೂ, ಈ ಸಮಸ್ಯೆಯನ್ನು ಕೂಲಂಕುಷವಾಗಿ ಪರಿಶೀಲಿಸಿ ಅಸಮತೋಲನವನ್ನು ಕಾಯ್ದುಕೊಳ್ಳಬೇಕು. ಜತೆಗೆ, ಅತ್ಯಂತ ಹೆಚ್ಚು ಪಾರದರ್ಶಕ ಮತ್ತು ಅಂತರ್ಗತ ಆಯ್ಕೆ ಪ್ರಕ್ರಿಯೆ ಒಳಗೊಂಡಿರುತ್ತದೆ. ಕರ್ನಾಟಕ ಮತ್ತು ಇತರ ಕಡಿಮೆ ಪ್ರಾತಿನಿಧ್ಯದ ಪ್ರದೇಶಗಳಿಂದ ಅರ್ಹ ಅಭ್ಯರ್ಥಿಗಳನ್ನು ಗುರುತಿಸಲು ಮತ್ತು ಉತ್ತೇಜಿಸಲು ಸಂಘಟಿತ ಪ್ರಯತ್ನವನ್ನು ಒಳಗೊಂಡಿರಬೇಕು ಎಂದು ಅವರು ಪತ್ರದಲ್ಲಿ ಕೋರಿದ್ದಾರೆ.

ಇದನ್ನೂ ಓದಿ: ಸುಪ್ರಿಂ ಕೋರ್ಟ್​ಗೆ ಇಬ್ಬರು ಹೊಸ ನ್ಯಾಯಮೂರ್ತಿಗಳ ನೇಮಕಕ್ಕೆ ಕೇಂದ್ರದ ಅಸ್ತು - appointment of Justices

ETV Bharat Logo

Copyright © 2024 Ushodaya Enterprises Pvt. Ltd., All Rights Reserved.