ETV Bharat / state

ಅಬಕಾರಿ ಪರವಾನಗಿಗಳ ನವೀಕರಣದ ವೇಳೆ ಸನ್ನದುದಾರರಿಗೆ ಕಿರುಕುಳ ನೀಡಬಾರದು: ಸಿಎಂ ಸೂಚನೆ - c m siddaramaiah

author img

By ETV Bharat Karnataka Team

Published : Jun 11, 2024, 5:24 PM IST

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಅಬಕಾರಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.

ಅಬಕಾರಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ
ಅಬಕಾರಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ (ETV Bharat)

ಬೆಂಗಳೂರು: ಅಬಕಾರಿ ಪರವಾನಗಿಗಳ ನವೀಕರಣದ ಸಮಯದಲ್ಲಿ ಸನ್ನದುದಾರರಿಗೆ ಕಿರುಕುಳ ನೀಡಬಾರದು. ನೆರೆ ರಾಜ್ಯಗಳಿಂದ ಕರ್ನಾಟಕ ರಾಜ್ಯಕ್ಕೆ ಕಳ್ಳಸಾಗಾಣಿಕೆ ಮೂಲಕ ನುಸುಳುವ ಮದ್ಯವನ್ನು ಕಡ್ಡಾಯವಾಗಿ ತಡೆಗಟ್ಟಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಬಕಾರಿ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಅಬಕಾರಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, ಇಲಾಖೆಯ ತೆರಿಗೆ ಸಂಗ್ರಹ ಸಾಮರ್ಥ್ಯವನ್ನು ಆಧರಿಸಿಯೇ ನಿಗದಿ ಪಡಿಸುವ ಗುರಿ ತಲುಪಲು ಅಧಿಕಾರಿಗಳು ಗರಿಷ್ಠ ಪ್ರಯತ್ನ ಮಾಡಬೇಕು ಎಂದು ಸೂಚಿಸಿದರು. ಚುನಾವಣಾ ನೀತಿ ಸಂಹಿತೆ ಕಾರಣದಿಂದ ತೆರಿಗೆ ಸಂಗ್ರಹ ಬೆಳವಣಿಗೆ ದರ ನಿರೀಕ್ಷಿತ ಮಟ್ಟ ತಲುಪಿಲ್ಲ ಎಂದು ಸಿಎಂಗೆ ಅಧಿಕಾರಿಗಳು ಮಾಹಿತಿ ನೀಡಿದರು. ಬಳಿಕ ಸಿಎಂ, ಮುಂದಿನ ದಿನಗಳಲ್ಲಿ ಇದನ್ನು ಭರ್ತಿ ಮಾಡುವಂತೆ ಸೂಚಿಸಿದರು.

ಇಲಾಖೆಯಲ್ಲಿ ಕಾನ್ಸ್‌ಟೇಬಲ್‌, ಸಬ್‌ ಇನ್ಸ್‌ಪೆಕ್ಟರ್‌ಗಳ ನೇಮಕಾತಿ ಹಾಗೂ ವಾಹನಗಳ ಅಗತ್ಯತೆ ಕುರಿತಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಮುಖ್ಯಮಂತ್ರಿಗಳು ಸೂಚಿಸಿದರು. ಕರ ಸಮಾಧಾನ ಯೋಜನೆಯಡಿ 5.10 ಕೋಟಿ ರೂ. ವಸೂಲಾಗಿದ್ದು, ಯೋಜನೆಯನ್ನು ಇನ್ನಷ್ಟು ಕಾಲ ವಿಸ್ತರಿಸುವಂತೆ ಅಧಿಕಾರಿಗಳು ಕೋರಿದರು.

ಅಬಕಾರಿ ಇಲಾಖೆಯ ವ್ಯವಹಾರಗಳನ್ನು ಸರಳಗೊಳಿಸುವ ನೂತನ ತಂತ್ರಾಂಶವನ್ನು ಲೋಕಾರ್ಪಣೆ ಮಾಡಿದರು. ಆನ್‌ಲೈನ್‌ನಲ್ಲಿಯೇ ಇಲಾಖೆಯ ಸೇವೆಗಳನ್ನು ಒದಗಿಸುವ, ಅಬಕಾರಿ ಇಲಾಖೆಗೆ ಸಂಬಂಧಿಸಿದ ನಿಯಮ ಉಲ್ಲಂಘನೆ ಹಾಗೂ ಅಕ್ರಮದ ಪ್ರಕರಣಗಳು ಮತ್ತು ಅಧಿಕಾರಿಗಳ ತಪಾಸಣೆಯನ್ನೂ ಇದರಲ್ಲಿ ದಾಖಲಿಸಲು, ಅನುಸರಿಸಲು ಅವಕಾಶವನ್ನು ಇದರಲ್ಲಿ ಕಲ್ಪಿಸಲಾಗಿದೆ.

ಈ ವೇಳೆ ಅಬಕಾರಿ ಸಚಿವ ಆರ್. ಬಿ. ತಿಮ್ಮಾಪುರ, ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ, ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜು ಹಾಗೂ ನಸೀರ್ ಅಹ್ಮದ್, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್, ಆರ್ಥಿಕ ಇಲಾಖೆ ಕಾರ್ಯದರ್ಶಿ ಪಿ.ಸಿ. ಜಾಫರ್, ಅಬಕಾರಿ ಇಲಾಖೆಯ ಆಯುಕ್ತ ಡಾ. ರವಿಶಂಕರ್ ಉಪಸ್ಥಿತರಿದ್ದರು.

ಇದನ್ನೂ ಓದಿ: ವಾಣಿಜ್ಯ ತೆರಿಗೆ ಇಲಾಖೆ ಪ್ರಗತಿ ಪರಿಶೀಲನಾ ಸಭೆ: ತೆರಿಗೆ ಸಂಗ್ರಹದ ಗುರಿ ಸಾಧಿಸದಿದ್ದರೆ ಶಿಸ್ತು ಕ್ರಮ; ಸಿಎಂ ಖಡಕ್​ ಎಚ್ಚರಿಕೆ - Commercial Tax Department Meeting

ETV Bharat Logo

Copyright © 2024 Ushodaya Enterprises Pvt. Ltd., All Rights Reserved.