ETV Bharat / state

ಕೊಪ್ಪಳ: ಜಾತಿ ಸಂಘರ್ಷ ಪ್ರಕರಣದಲ್ಲಿ 98 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

ಜಾತಿ ಸಂಘರ್ಷ ಪ್ರಕರಣದಲ್ಲಿ 98 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ಕೊಪ್ಪಳ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶ ನೀಡಿದೆ.

court
ಸಾಂದರ್ಭಿಕ ಚಿತ್ರ (ETV Bharat)
author img

By ETV Bharat Karnataka Team

Published : Oct 24, 2024, 10:36 PM IST

ಕೊಪ್ಪಳ: ಹತ್ತು ವರ್ಷದ ಹಿಂದೆ ಗಂಗಾವತಿ ತಾಲೂಕಿನ ಮರುಕುಂಬಿ ಗ್ರಾಮದಲ್ಲಿ ನಡೆದ ಜಾತಿ ಸಂಘರ್ಷ ಪ್ರಕರಣದಲ್ಲಿ 101 ಜನ ಅಪರಾಧಿಗಳಲ್ಲಿ 98 ಜನರಿಗೆ ಜೀವಾವಧಿ ಶಿಕ್ಷೆ, ತಲಾ ಐದು ಸಾವಿರ ರೂ. ದಂಡ ವಿಧಿಸಿ ಇಲ್ಲಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಗುರುವಾರ ಐತಿಹಾಸಿಕ ತೀರ್ಪು ನೀಡಿತು.

ಗಂಗಾವತಿ ತಾಲೂಕಿನ ಮರುಕುಂಬಿಯಲ್ಲಿ 2014ರ ಅಕ್ಟೋಬರ್​​ 28ರಂದು ನಡೆದ ಜಾತಿ ಸಂಘರ್ಷ ಪ್ರಕರಣ ಇದಾಗಿದೆ. ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಚಂದ್ರಶೇಖರ ಸಿ. ಈ ಆದೇಶ ನೀಡಿದ್ದಾರೆ. ಜಾತಿ ಸಂಘರ್ಷ ಪ್ರಕರಣದಲ್ಲಿ 101 ಜನರ ವಿರುದ್ಧ ತೀರ್ಪು ಬಂದ ದೇಶದ ಮೊದಲ ಪ್ರಕರಣ ಇದಾಗಿದೆ.

101 ಆರೋಪಿಗಳ ವಿರುದ್ಧ ಸೋಮವಾರ (ಅ.21) ನ್ಯಾಯಾಲಯದಲ್ಲಿ ಆರೋಪ ಸಾಬೀತಾಗಿತ್ತು. ಇವರಲ್ಲಿ ಮೂವರು ಅಪರಾಧಿಗಳು ಪರಿಶಿಷ್ಠ ಜಾತಿ, ಪಂಗಡಕ್ಕೆ ಸೇರಿದವರಾಗಿದ್ದರಿಂದ ಇವರಿಗೆ ಜಾತಿ ನಿಂದನೆ ಕೇಸ್ ಅನ್ವಯವಾಗಿಲ್ಲ. ಈ ಮೂವರು ಅಪರಾಧಿಗಳಿಗೆ ಐದು ವರ್ಷ ಜೈಲು ಹಾಗೂ 2 ಸಾವಿರ ರೂ. ದಂಡ ವಿಧಿಸಲಾಗಿದೆ. ಹೀಗಾಗಿ, ಶಿಕ್ಷೆ ಪ್ರಮಾಣ ಕಡಿಮೆಯಾಗಿದ್ದು, ಜೀವಾವಧಿ ಶಿಕ್ಷೆ ಆದೇಶದಿಂದ ವಿನಾಯಿತಿ ಸಿಕ್ಕಿದೆ. ಆದರೆ, ಗಲಬೆ ಹಬ್ಬಿಸಿದ ಕಾರಣ ನೀಡಿ ಐದು ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ.

ಪ್ರಕರಣದ ಹಿನ್ನೆಲೆ: ಕೊಪ್ಪಳ ಜಿಲ್ಲೆ ಮರುಕುಂಬಿ ಗ್ರಾಮದಲ್ಲಿ 2014ರಲ್ಲಿ ಕ್ಷೌರದಂಗಡಿಗೆ ಮತ್ತು ಹೋಟೆಲ್​ನಲ್ಲಿ ದಲಿತರಿಗೆ ಪ್ರವೇಶ ನೀಡದೆ ಇರುವ ಕುರಿತು ಜಾತಿ ಸಂರ್ಘರ್ಷ ನಡೆದಿತ್ತು. ಇದಾದ ಮೇಲೆ ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪ್ರಕರಣ ದಾಖಲು ಮಾಡಿಕೊಂಡು ತನಿಖೆ ನಡೆಸುತ್ತಿದ್ದರು. ಆದರೆ, ಬಳಿಕ ಮತ್ತೊಂದು ಪ್ರಕರಣ ಅಲ್ಲಿಯೇ ದಾಖಲಾಗಿತ್ತು.

'2014ರ ಆಗಸ್ಟ್‌ 28ರಂದು ಗಂಗಾವತಿಯಲ್ಲಿ ಮರಕುಂಬಿ ಗ್ರಾಮದ ಮಂಜುನಾಥ್ ಮತ್ತು ಅವರ ಗೆಳೆಯರು ಸಿನಿಮಾ ನೋಡಲು ಹೋದಾಗ ಟಿಕೆಟ್ ವಿಚಾರವಾಗಿ ಗಲಾಟೆ ನಡೆದಿತ್ತು. ಈ ವೇಳೆ ಅವರ ಮೇಲೆ ಅಪರಿಚಿತರಿಂದ ಹಲ್ಲೆ ನಡೆದಿತ್ತು. ಈ ಹಲ್ಲೆಯನ್ನು ಗ್ರಾಮದ ದಲಿತರೇ ಮಾಡಿಸಿದ್ದು ಅಂತಾ ಭಾವಿಸಿ ತಂಡದ ಜೊತೆ ಮಂಜುನಾಥ್ ಬಂದು ಹಲ್ಲೆ ಮಾಡಿದ್ದಲ್ಲದೇ ಜಾತಿ ನಿಂದನೆ ಮಾಡಿದ್ದರು. ಈ ವೇಳೆ ಗುಡಿಸಲುಗಳಿಗೆ ಬೆಂಕಿಯನ್ನೂ ಹಚ್ಚಿದ್ದರು' ಎಂದು ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಗ್ರಾಮದ ಭೀಮೇಶ ದೂರು ದಾಖಲಿಸಿದ್ದರು. ಈ ಸಂಬಂಧ ಅಂದು 101 ಜನರ ವಿರುದ್ಧ ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿ: ಬೇಲೆಕೇರಿ ಅದಿರು ನಾಪತ್ತೆ ಪ್ರಕರಣ: ಶಾಸಕ ಸತೀಶ್ ಸೈಲ್ ಸೇರಿ 7 ಮಂದಿ ದೋಷಿ, ನಾಳೆ ಶಿಕ್ಷೆ ಪ್ರಕಟ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.