ETV Bharat / state

ಪೊಲೀಸ್​, ಅರಣ್ಯ ಇಲಾಖೆಗಳಂತೆ ಇತರ ಇಲಾಖೆಗಳಲ್ಲೂ ಕ್ರೀಡಾಪಟುಗಳಿಗೆ ಶೇ.2ರಷ್ಟು ಹುದ್ದೆ ಮೀಸಲು - Karnataka Budget 2024

ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ ಪದಕ ಗೆಲ್ಲುವ ಕ್ರೀಡಾಪಟುಗಳಿಗೆ ಆಕರ್ಷಕ ಪ್ರೋತ್ಸಾಹಧನವನ್ನು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.

CM Siddaramaiah
ಬಜೆಟ್​ ಮಢಿಸುತ್ತಿರುವ ಸಿಎಂ ಸಿದ್ದರಾಮಯ್ಯ
author img

By ETV Bharat Karnataka Team

Published : Feb 16, 2024, 12:51 PM IST

Updated : Feb 16, 2024, 2:26 PM IST

ಬೆಂಗಳೂರು: ಬಿಜೆಪಿ ಸದಸ್ಯರ ಗದ್ದಲದ ಮಧ್ಯೆಯ ಯಶಸ್ವಿಯಾಗಿ ಬಜೆಟ್​ ಮಂಡನೆ ಮಾಡಿರುವ ಮುಖ್ಯಮಂತ್ರಿ, ಹಣಕಾಸು ಸಚಿವರೂ ಆಗಿರುವ ಸಿದ್ದರಾಮಯ್ಯ, ಕ್ರೀಡಾಪಟುಗಳಿಗೆ ಪೊಲೀಸ್​ ಮತ್ತು ಅರಣ್ಯ ಇಲಾಖೆಗಳಂತೆಯೇ ಪ್ರಸಕ್ತ ಸಾಲಿನಿಂದ ಇತರ ಇಲಾಖೆಗಳ ನೇಮಕಾತಿಯಲ್ಲಿಯೂ ಶೇ. 2ರಷ್ಟು ಹುದ್ದೆಗಳನ್ನು ಮೀಸಲಿಡಲಾಗುವುದು ಎಂದು ಘೋಷಿಸಿದ್ದಾರೆ. ಕಳೆದ ಸಾಲಿನ ಬಜೆಟ್‌ನಲ್ಲಿ ಕ್ರೀಡಾಪಟುಗಳಿಗೆ ಪೊಲೀಸ್ ಮತ್ತು ಅರಣ್ಯ ಇಲಾಖೆಯ ನೇಮಕಾತಿಯಲ್ಲಿ ಹುದ್ದೆಗಳನ್ನು ಮೀಸಲಿಡಲಾಗುವುದು ಎಂದು ಘೋಷಿಸಲಾಗಿತ್ತು.

ಬೆಂಗಳೂರಿನ ಉತ್ತರ ತಾಲೂಕಿನಲ್ಲಿ ಲಭ್ಯವಿರುವ ಅಂದಾಜು 70 ಎಕರೆ ನಿವೇಶನದಲ್ಲಿ ಅತ್ಯಾಧುನಿಕ ಮತ್ತು ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾ ಸಮುಚ್ಛಯವನ್ನು ಒಳಗೊಂಡ ಸ್ಪೋರ್ಟ್ಸ್ ಸಿಟಿಯನ್ನು ಖಾಸಗಿ ಸಹಭಾಗಿತ್ವದಲ್ಲಿ ಸ್ಥಾಪನೆ ಮಾಡಲಾಗುವುದು. ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಸೌಕರ್ಯ ಅಭಿವೃದ್ಧಿ ಉದ್ದೇಶದಿಂದ ಬೆಂಗಳೂರಿನ 4 ಸ್ಥಳಗಳಲ್ಲಿ ಬಹುಕ್ರೀಡಾ ಸೌಲಭ್ಯಗಳನ್ನೊಳಗೊಂಡ ಅತ್ಯಾಧುನಿಕ ಕ್ರೀಡಾ ಸಂಕೀರ್ಣಗಳ ನಿರ್ಮಾಣ ಮಾಡಲಾಗುವುದು ಎಂದು ತಿಳಿಸಿದರು.

ವಿವಿಧ ಕ್ರೀಡೆಗಳನ್ನು ಪ್ರೋತ್ಸಾಹಿಸಲು ಹಾಗೂ ಕ್ರೀಡಾಪಟುಗಳಿಗೆ ಉತ್ತೇಜನ ನೀಡಲು ರೈಫಲ್ ಶೂಟಿಂಗ್ ಅಸೋಸಿಯೇಷನ್, ಹಾಕಿ‌ ಕರ್ನಾಟಕ, ಅಮೆಚೂರ್ ಬಾಕ್ಸಿಂಗ್ ಅಸೋಸಿಯೇಷನ್, ಅರ್ಚರಿ ಅಸೋಸಿಯೇಷನ್, ಅಥ್ಲೆಟಿಕ್ಸ್ ಅಸೋಸಿಯೇಷನ್, ಕಯಾಯಿಂಗ್ ಹಾಗೂ ಕೆನೋಯಿಂಗ್ ಅಕಾಡೆಮಿ, ಸೈಕ್ಲಿಂಗ್ ಅಕಾಡೆಮಿ ವಿಜಯಪುರ, ಫೆನ್ಸಿಂಗ್ ಅಸೋಸಿಯೇಷನ್​ಗಳಿಗೆ ಒಟ್ಟು 12 ಕೋಟಿ ರೂ ಅನುದಾನವನ್ನು ಘೋಷಿಸಲಾಗಿದೆ.

ಒಲಿಂಪಿಕ್ಸ್​ ಪದಕ ವಿಜೇತರಿಗೆ ಆಕರ್ಷಕ ಪ್ರೋತ್ಸಾಧನ: ರಾಜ್ಯದ ಕ್ರೀಡಾಪಟುಗಳಿಗೆ ಅತ್ಯುನ್ನತ ಸ್ಪರ್ಧಾ ಅವಕಾಶ ಒದಗಿಸಲು ಪ್ರತಿ ವರ್ಷ ಒಂದು ರಾಜ್ಯ ಮಟ್ಟದ ಒಲಿಂಪಿಕ್ಸ್ ಮತ್ತು 14 ವರ್ಷ ವಯೋಮಾನದವರಿಗೆ ಮಿನಿ ಒಲಂಪಿಕ್ಸ್ ಆಯೋಜನೆ ಮಾಡಲಾಗುವುದು. ಮುಂಬರುವ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ಗಳಿಸುವ ರಾಜ್ಯದ ಕ್ರೀಡಾಪಟುಗಳಿಗೆ 6 ಕೋಟಿ ರೂ, ಬೆಳ್ಳಿ ಪದಕ ಪಡೆಯುವ ಕ್ರೀಡಾಪಟುಗಳಿಗೆ 4 ಕೋಟಿ ರೂ, ಹಾಗೂ ಕಂಚಿನ ಪದಕ ಪಡೆಯುವ ಕ್ರೀಡಾಪಟುಗಳಿಗೆ 3 ಕೋಟಿ ರೂ ಪ್ರೋತ್ಸಾಹಧನವನ್ನು ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.

ಏಷಿಯನ್ ಮತ್ತು ಕಾಮನ್‌ವೆಲ್ತ್ ಕ್ರೀಡಾಕೂಟಗಳಲ್ಲಿ ಚಿನ್ನದ ಪದಕ ವಿಜೇತ ಕ್ರೀಡಾಪಟುಗಳಿಗೆ 35 ಲಕ್ಷ ರೂ, ಬೆಳ್ಳಿ ಪದಕ ವಿಜೇತ ಕ್ರೀಡಾಪಟುಗಳಿಗೆ 25 ಲಕ್ಷ ರೂ ಹಾಗೂ ಕಂಚಿನ ಪದಕ ವಿಜೇತ ಕ್ರೀಡಾಪಟುಗಳಿಗೆ 15 ಲಕ್ಷ ರೂ ಪ್ರೋತ್ಸಾಹಧನ ನೀಡಲಾಗುವುದು. ಕರ್ನಾಟಕದ ಕ್ರೀಡಾಪಟುಗಳು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸುವ ಸಮಯದಲ್ಲಿ ಗಾಯಗೊಂಡಲ್ಲಿ ಅವರ ಚಿಕಿತ್ಸೆಗೆ ನೆರವಾಗಲು ಸರ್ಕಾರದಿಂದಲೇ ಆರೋಗ್ಯ ವಿಮೆ ಸೌಲಭ್ಯವನ್ನೂ ಬಜೆಟ್​ನಲ್ಲಿ ನೀಡಿದ್ದಾರೆ.

ರಾಜ್ಯದ 14 ಸ್ಥಳಗಳಲ್ಲಿ ಮುಂದಿನ 2 ವರ್ಷದೊಳಗೆ 35 ಕೋಟಿ ರೂ. ವೆಚ್ಚದಲ್ಲಿ ಮಹಿಳಾ ಕ್ರೀಡಾ ವಸತಿ ನಿಲಯಗಳ ನಿರ್ಮಾಣ ಮಾಡಲಾಗುವುದು. ಕೊಡಗು ಜಿಲ್ಲೆಯ ಪೊನ್ನಂಪೇಟೆಯಲ್ಲಿ 5 ಕೋಟಿ ರೂ. ವೆಚ್ಚದಲ್ಲಿ ಕ್ರೀಡಾ ವಸತಿ ನಿಲಯ ಕಟ್ಟಡವನ್ನು ನಿರ್ಮಾಣ ಮಾಡಲಾಗುವುದು. ಬಳ್ಳಾರಿಯಲ್ಲಿ ಕ್ರೀಡಾ ವಸತಿ ನಿಲಯದ ಉನ್ನತೀಕರಣ ಹಾಗೂ ಕ್ರೀಡಾ ಸೌಕರ್ಯಗಳ ಅಭಿವೃದ್ಧಿಗಾಗಿ ಜಿಲ್ಲಾ ಖನಿಜ ಪ್ರತಿಷ್ಠಾನದ ನಿಧಿಯಿಂದ 10 ಕೋಟಿ ರೂ ನೀಡಲಾಗುವುದು ಎಂದು ಸಿಎಂ ಹೇಳಿದರು.

ಇದನ್ನೂ ಓದಿ: ಕೃಷಿ ಸಂಬಂಧಿತ ಎಲ್ಲ ಇಲಾಖೆಗಳ ಸಮನ್ವಯಕ್ಕೆ 'ಕೃಷಿ ಅಭಿವೃದ್ಧಿ ಪ್ರಾಧಿಕಾರ' ರಚಿಸಿದ ಸಿಎಂ

Last Updated : Feb 16, 2024, 2:26 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.