ETV Bharat / state

ಉಪ ಚುನಾವಣೆ: ಚನ್ನಪಟ್ಟಣದಲ್ಲಿ ಅತಿ ಹೆಚ್ಚು ಅಕ್ರಮ - 30.25 ಕೋಟಿ ಮದ್ಯ, ನಗದು, ಉಡುಗೊರೆ ವಶ - CHANNAPATNA BYELECTION

ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ನಗದು, ಮದ್ಯ, ಉಡುಗೊರೆ ಸೇರಿದಂತೆ ಕೋಟ್ಯಂತರ ರೂ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.

ಕರ್ನಾಟಕ ಚುನಾವಣಾ ಆಯೋಗ
ಕರ್ನಾಟಕ ಚುನಾವಣಾ ಆಯೋಗ (ಚುನಾವಣಾ ಆಯೋಗ)
author img

By ETV Bharat Karnataka Team

Published : Nov 12, 2024, 8:36 PM IST

ಬೆಂಗಳೂರು: ರಾಜ್ಯದ ಮೂರು ಕ್ಷೇತ್ರಗಳ ಉಪಚುನಾವಣೆ ಬುಧವಾರ ನಡೆಯಲಿದೆ. ಚುನಾವಣಾ ಆಯೋಗ ಮತದಾನಕ್ಕೆ ಸಕಲ ಸಿದ್ಧತೆ ನಡೆಸಿದೆ. ಉಪಸಮರದಲ್ಲೂ ಕುರುಡು ಕಾಂಚಾಣದ ಅಬ್ಬರ ಜೋರಾಗಿದ್ದು, ಚನ್ನಪಟ್ಟಣ ಅಖಾಡದಲ್ಲಿ ಬರೋಬ್ಬರಿ 29 ಕೋಟಿ ರೂ. ಮೌಲ್ಯದ ಅಕ್ರಮ ಮದ್ಯ ವಶಕ್ಕೆ ಪಡೆಯಲಾಗಿದೆ.

ಶಿಗ್ಗಾಂವ್, ಸಂಡೂರು ಹಾಗೂ ಚನ್ನಪಟ್ಟಣದಲ್ಲಿ ಬುಧವಾರ ಉಪಚುನಾವಣೆ ನಡೆಯಲಿದೆ. ಮೂರು ಕ್ಷೇತ್ರಗಳಲ್ಲಿ ಜಿದ್ದಾಜಿದ್ದಿನ ಹೋರಾಟ ಏರ್ಪಟ್ಟಿದೆ. ಚುನಾವಣಾ ಆಯೋಗ ಉಪಸಮರದ ಪೂರ್ವ ಸಿದ್ಧತೆ ನಡೆಸಿದ್ದು, ವ್ಯಾಪಕ ಬಂದೋಬಸ್ತ್ ಮಾಡಿದ್ದಾರೆ. ಮೂರೂ ಕ್ಷೇತ್ರಗಳ ಮೇಲೆ ಕಟ್ಟುನಿಟ್ಟಿನ ನಿಗಾ ಇಟ್ಟಿದ್ದು, ನೀತಿ ಸಂಹಿತೆ ಉಲ್ಲಂಘನೆ ಮೇಲೆ ಹದ್ದಿನ ಕಣ್ಣಿಟ್ಟಿದ್ದಾರೆ.

ಮೂರು ಕ್ಷೇತ್ರಗಳಲ್ಲಿ ಚುನಾವಣಾ ಅಕ್ರಮದ ಮೇಲೆ ನಿಗಾ ಇಡಲು ವಿಚಕ್ಷಣಾ ದಳ ನಿಯೋಜಿಸಿದೆ. ಆ ಮೂಲಕ ನ.16 ರಿಂದ ನ‌.11ರ ವರೆಗೆ ಕಾರ್ಯಾಚರಣೆ ನಡೆಸಿ ಮೂರು ಕ್ಷೇತ್ರಗಳಿಂದ ಅಪಾರ ಪ್ರಮಾಣದಲ್ಲಿ ಮದ್ಯ, ನಗದು, ಉಡುಗೊರೆ ಸಾಮಗ್ರಿಗಳನ್ನು ವಶಕ್ಕೆ ಪಡೆದಿದೆ‌. ಮೂರು ಕ್ಷೇತ್ರಗಳಲ್ಲಿ ಸುಮಾರು 33.33 ಕೋಟಿ ರೂ‌. ಮೌಲ್ಯದ ಅಕ್ರಮ ಮದ್ಯ, ನಗದು, ಉಡುಗೊರೆಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ.

ಚನ್ನಪಟ್ಟಣದಲ್ಲಿ ಅಧಿಕ ಅಕ್ರಮ: ಉಪಚುನಾವಣೆ ನಡೆಯುತ್ತಿರುವ ಮೂರೂ ಕ್ಷೇತ್ರಗಳ ಪೈಕಿ ಜಿದ್ದಾಜಿದ್ದಿನ ಕಣವಾದ ಚನ್ನಪಟ್ಟಣದಲ್ಲಿ ಕರುಡು ಕಾಂಚಾಣದ ಅಬ್ಬರ ಜೋರಾಗಿದೆ. 'ಚನ್ನಪಟ್ಟಣದಲ್ಲಿ ನ.16 ರಿಂದ ನ.11ವರೆಗೆ ಸುಮಾರು 29 ಕೋಟಿ ರೂ. ಮೌಲ್ಯದ ಮದ್ಯ ವಶಕ್ಕೆ ಪಡೆಯಲಾಗಿದೆ. 2.95 ಲಕ್ಷ ಲೀಟರ್ ಅಕ್ರಮ ಮದ್ಯ ವಶಕ್ಕೆ ಪಡೆಯಲಾಗಿದೆ. 35 ಲಕ್ಷ ನಗದು ಜಪ್ತಿ ಮಾಡಲಾಗಿದೆ. ಅಕ್ರಮ ಮದ್ಯ, ನಗದು, ಉಡುಗೊರೆ ಸಾಮಗ್ರಿಗಳು ಸೇರಿ ಚನ್ನಪಟ್ಟಣದಲ್ಲಿ ಒಟ್ಟು 30.25 ಕೋಟಿ ರೂ. ಅಕ್ರಮ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ತಿಳಿಸಿದ್ದಾರೆ.

ಇನ್ನು ಶಿಗ್ಗಾಂವ್​ನಲ್ಲಿ 12 ಸಾವಿರ ಮೌಲ್ಯದ 300 ಲೀಟರ್ ಮದ್ಯ ವಶಕ್ಕೆ ಪಡೆಯಲಾಗಿದೆ. 8.24 ಕೆಜಿ ಡ್ರಗ್ಸ್ ವಶಕ್ಕೆ ಪಡೆಯಲಾಗಿದೆ. ಆ ಮೂಲಕ ಒಟ್ಟು 12 ಲಕ್ಷ ರೂ.ಮೌಲ್ಯದ ನಗದು, ಮದ್ಯ, ಡ್ರಗ್ಸ್, ಉಡುಗೊರೆಗಳನ್ನು ಜಪ್ತಿ ಮಾಡಲಾಗಿದೆ. ಅದೇ ರೀತಿ ಸಂಡೂರಿನಲ್ಲಿ ಒಟ್ಟು 2.95 ಕೋಟಿ ರೂ. ಮೌಲ್ಯದ ಅಕ್ರಮ ಮದ್ಯ, ನಗದು, ಉಡುಗೊರೆ, ಇತರ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಈ ಪೈಕಿ 95 ಸಾವಿರ ಮೌಲ್ಯದ 2,926 ಕೆ.ಜಿ. ಮದ್ಯ ಜಪ್ತಿ ಮಾಡಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: 3 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ: ನ.13ರಂದು ವೇತನ ಸಹಿತ ರಜೆಗೆ ಆದೇಶ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.