ETV Bharat / state

ಲೋಕಸಭಾ ಚುನಾವಣೆ: ಏ.24 ರಿಂದ ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ - Lok Sabha Election 2024 - LOK SABHA ELECTION 2024

ಸಾರ್ವತ್ರಿಕ ಲೋಕಸಭಾ ಚುನಾವಣೆ ಪ್ರಯುಕ್ತ ಏಪ್ರಿಲ್ 24 ರ ಸಂಜೆ 6 ಗಂಟೆಯಿಂದ ಏಪ್ರಿಲ್ 26 ರ ಮಧ್ಯರಾತ್ರಿ 12 ಗಂಟೆಯವರೆಗೆ ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿ 1973 ಕಲಂ 144 ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಕೆ.ಎ. ದಯಾನಂದ ಆದೇಶ ಹೊರಡಿಸಿದ್ದಾರೆ.

Bengaluru
ಬೆಂಗಳೂರು ನಗರ
author img

By ETV Bharat Karnataka Team

Published : Apr 14, 2024, 9:59 PM IST

ಬೆಂಗಳೂರು: ಲೋಕಸಭಾ ಸಾರ್ವತ್ರಿಕ ಚುನಾವಣೆ-2024ರ ಹಿನ್ನೆಲೆ ಏಪ್ರಿಲ್ 24 ರ ಸಂಜೆ 6 ಗಂಟೆಯಿಂದ ಏಪ್ರಿಲ್ 26 ರ ಮಧ್ಯರಾತ್ರಿ 12 ಗಂಟೆಯವರೆಗೆ ಹಾಗೂ ಜೂನ್ 4ರಂದು ಬೆಳಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12.00 ಗಂಟೆವರೆಗೆ ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿ 1973 ಕಲಂ 144 ನಿಷೇಧಾಜ್ಞೆ ಜಾರಿಗೊಳಿಸಿ ಬೆಂಗಳೂರು ನಗರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾದಂಡಾಧಿಕಾರಿ ಕೆ. ಎ. ದಯಾನಂದ ಆದೇಶಿಸಿದ್ದಾರೆ.

ಬೆಂಗಳೂರು ನಗರ ಜಿಲ್ಲೆಯೆ ವ್ಯಾಪ್ತಿಯಲ್ಲಿ ಯಾವುದೇ ಅಹಿತರ ಘಟನೆಗಳು ಹಾಗೂ ಸಾರ್ವಜನಿಕ ಆಸ್ತಿಯನ್ನು ಸಂರಕ್ಷಿಸುವ ನಿಟ್ಟಿನಲ್ಲಿ ದಂಡ ಪ್ರಕ್ರಿಯ ಸಂಹಿತೆ ಅನ್ವಯ 1973 ಕಲಂ 144 ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಬೆಂಗಳೂರು ನಗರ ಜಿಲ್ಲೆಯ ವ್ಯಾಪ್ತಿಯಲ್ಲಿ (ಪೊಲೀಸ್ ಕಮೀಷನರೇಟ್ ವ್ಯಾಪ್ತಿ ಹೊರತುಪಡಿಸಿ) ಐದಕ್ಕಿಂತ ಹೆಚ್ಚು ಜನರು ಗುಂಪು ಸೇರುವುದು, ಮೆರೆವಣಿಗೆ ಹಾಗೂ ಸಭೆ ಸಮಾರಂಭ ಜರುಗಿಸುವುದನ್ನು ನಿಷೇಧಿಸಲಾಗುತ್ತದೆ. ಚುನಾವಣಾ ಅಭ್ಯರ್ಥಿ ಅಥವಾ ಅವರ ಬೆಂಬಲಿಗರು ಸೇರಿ ಐದು ಜನರಗಿಂತ ಹೆಚ್ಚು ಸಂಖ್ಯೆಯಲ್ಲಿ ಸೇರುವಂತಿಲ್ಲ. ಶಸ್ತ್ರ, ಬಡಿಗೆ, ಭರ್ಚಿ, ಖಡ್ಗ, ಗದೆ, ಬಂದೂಕು, ಚೂರಿ, ಲಾಟಿ, ದೊಣ್ಣೆ, ಚಾಕು, ಅಥವಾ ದೇಹಕ್ಕೆ ಅಪಾಯವನ್ನುಂಟು ಮಾಡಬಹುದಾದ ಯಾವುದೇ ಮಾರಕಾಸ್ತ್ರವನ್ನು ಬಳಸುವಂತಿಲ್ಲ.

ಮತಗಟ್ಟೆಗಳ 100 ಮೀಟರ್ ಒಳಗೆ ಚುನಾವಣಾ ಪ್ರಚಾರ ನಿಷೇಧಿಸಿದೆ. ಈ ಪ್ರದೇಶದಲ್ಲಿ ಬರುವಂತಹ ಜೆರಾಕ್ಸ್ ಅಂಗಡಿ, ಸೈಬರ್ ಕೆಫೆ, ಬುಕ್ ಸ್ಟಾಲ್ ಗಳನ್ನು ನಿರ್ಬಂಧಿಸಲಾಗುತ್ತದೆ. ಕಲ್ಲುಗಳನ್ನು ಕ್ಷಾರ ಪದಾರ್ಥ ಸ್ಫೋಟಕ ವಸ್ತುಗಳು ಯಾವುದೇ ದಾಹಕ ವಸ್ತುಗಳನ್ನು ಸ್ಥಳಕ್ಕೆ ತೆಗೆದುಕೊಂಡು ಹೋಗುವುದನ್ನು ಹಾಗೂ ಶೇಖರಿಸುವುದನ್ನು ನಿಷೇಧಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.

ಕೋವಿಡ್ -19 ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಮತಗಟ್ಟೆಗಳ ಸುತ್ತ 100 ಮೀಟರ್ ಅಂತರದಲ್ಲಿ ಮೊಬೈಲ್ ಫೋನ್, ಕಾರ್ಡ್ ಲೆಸ್ ಫೋನ್ ಅಥವಾ ಇನ್ನಿತರ ಎಲೆಕ್ಟ್ರಾನಿಕ್ ಉಪಕರಣಗಳನ್ನು ತೆಗೆದುಕೊಂಡು ಹೋಗುವುದನ್ನು ನಿಷೇಧಿಸಲಾಗಿದೆ. (ಚುನಾವಣಾ ಕಾರ್ಯದಲ್ಲಿ ಜಿಲ್ಲಾ ಚುನಾವಣಾಧಿಕಾರಿಯವರಿಂದ ಅನುಮತಿ ಪಡೆದ ಅಧಿಕಾರಿಗಳು / ಸಿಬ್ಬಂದಿಗಳು ಹೊರತುಪಡಿಸಿ)., ಮತಗಟ್ಟೆಗಳ ಸುತ್ತ 100 ಮೀಟರ್ ಪರಿಮಿತಿಯಲ್ಲಿ ಪ್ರಚಾರಕ್ಕೆ ಸಂಬಂಧಿಸಿದ ಪೋಸ್ಟರ್/ ಬ್ಯಾನರ್ ಅಥವಾ ಇನ್ನು ಯಾವುದೇ ವಸ್ತುಗಳನ್ನು ಹಾಗೂ ಧ್ವನಿವರ್ಧಕಗಳನ್ನು ಬಳಸುವಂತಿಲ್ಲ.

ಯಾವುದೇ ವ್ಯಕ್ತಿಯ ಜಾತಿ-ಧರ್ಮ, ಕೋಮು ಪಂಥಗಳಿಗೆ ಅಥವಾ ಸಾರ್ವಜನಿಕ ನೈತಿಕತೆಗೆ ಬಾಧಕ ಉಂಟು ಮಾಡಬಹುದಾದಂತಹ ಚಟುವಟಿಕೆಗಳನ್ನು ನಿಷೇಧಿಸಿದೆ. ಮತದಾನ ದಿನದಂದು ಪತ್ರಿಕಾ ಮಾಧ್ಯಮದವರು ಮತದಾನದ ಗೌಪ್ಯತೆಗೆ ಧಕ್ಕೆ ಬರುವಂತಹ ಛಾಯಾಚಿತ್ರ ತೆಗೆಯುವುದನ್ನು ನಿಷೇಧಿಸಲಾಗಿದೆ ಎಂದು ಉಲ್ಲೇಖಿಸಿದ್ದಾರೆ.

ಈ ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ಭಾರತೀಯ ದಂಡ ಸಂಹಿತೆ 188ರ ಪ್ರಕಾರ ಕ್ರಮವನ್ನು ಜರುಗಿಸಲಾಗುವುದು ಎಂದು ದಯಾನಂದ್ ಆದೇಶದಲ್ಲಿ ತಿಳಿಸಿದ್ದಾರೆ.

ಇದನ್ನೂಓದಿ:ಬೆಂಗಳೂರು ಕೇಂದ್ರದಲ್ಲಿ ಮತದಾನ ಗೌಪ್ಯತೆ ಉಲ್ಲಂಘನೆ ಆಗಿಲ್ಲ: ರಾಜ್ಯ ಮುಖ್ಯ ಚುನಾವಣಾಧಿಕಾರಿ - Senior Citizens Voting

ETV Bharat Logo

Copyright © 2025 Ushodaya Enterprises Pvt. Ltd., All Rights Reserved.