ETV Bharat / state

ಲೋಕ ಸಮರ: ಪಕ್ಷಗಳ ಗೆಲುವು-ಸೋಲಿನ ಹಿಂದೆ ಜಾತಿ ಸಮೀಕರಣದ ಪರಿಣಾಮ ಹೇಗಿತ್ತು? - karnataka Lok sabha results - KARNATAKA LOK SABHA RESULTS

ಲೋಕಸಭೆ ಚುನಾವಣೆಯಲ್ಲಿ ದಕ್ಷಿಣ ಕರ್ನಾಟಕದ ಒಕ್ಕಲಿಗರ ಪ್ರಾಬಲ್ಯದ ಕ್ಷೇತ್ರಗಳು ಬಹುವಾಗಿ ಜೆಡಿಎಸ್ ಹಾಗೂ ಬಿಜೆಪಿ ತೆಕ್ಕೆಗೆ ಬಿದ್ದಿವೆ. ಮಧ್ಯ ಕರ್ನಾಟಕದಲ್ಲೂ ಲಿಂಗಾಯತ ಸಮುದಾಯದ ಪ್ರಾಬಲ್ಯದ ಕ್ಷೇತ್ರಗಳಲ್ಲಿ ಮತಗಳು ಮೈತ್ರಿ ಅಭ್ಯರ್ಥಿಗಳಿಗೆ ಕ್ರೋಢೀಕರಣವಾಗಿವೆ.

Congress, Bjp, jsd
ಕಾಂಗ್ರೆಸ್, ಬಿಜೆಪಿ, ಜೆಡಿಎಸ್ (ETV Bharat)
author img

By ETV Bharat Karnataka Team

Published : Jun 5, 2024, 10:57 PM IST

ಬೆಂಗಳೂರು: ಲೋಕಸಭೆ ಚುನಾವಣೆಯ ಫಲಿತಾಂಶ ಹೊರಬಿದ್ದಿದೆ.‌ ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ 19 ಸ್ಥಾನ ಗೆದ್ದರೆ, ಕಾಂಗ್ರೆಸ್ 9 ಸ್ಥಾನದಲ್ಲಿ ಗೆದ್ದಿದೆ.‌ ಮೈತ್ರಿ ಪಕ್ಷಗಳ ಹಾಗೂ ಕಾಂಗ್ರೆಸ್ ಗೆಲುವು ಸೋಲಿನ ಹಿಂದೆ ಜಾತಿ ಮತ ಸಮೀಕರಣದ ಲೆಕ್ಕಾಚಾರ ಇದೆ.

ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ದಕ್ಷಿಣ ಕರ್ನಾಟಕದ ಕ್ಷೇತ್ರಗಳು ಬಹುವಾಗಿ ಜೆಡಿಎಸ್ ಹಾಗೂ ಬಿಜೆಪಿ ತೆಕ್ಕೆಗೆ ಬಿದ್ದಿವೆ. ಈ ಮೈತ್ರಿ ಒಕ್ಕಲಿಗರ ಮತ ಸಮೀಕರಣಕ್ಕೆ ಪ್ರಮುಖ ಕಾರಣವಾಗಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಹಳೆ ಮೈಸೂರಲ್ಲಿ ಮೇಲುಗೈ ಸಾಧಿಸಿತ್ತು. ಅಂದು ಕಾಂಗ್ರೆಸ್ ಒಕ್ಕಲಿಗ ಸಮುದಾಯದ ಮತಗಳನ್ನು ತಮ್ಮತ್ತ ಸೆಳೆದಿತ್ತು. ಆದರೆ, ವಿಧಾನಸಭೆ ಚುನಾವಣೆ ವರ್ಷದ ಬಳಿಕ ನಡೆದ ಲೋಕಸಭೆ ಚುನಾವಣೆಯಲ್ಲಿ ಒಕ್ಕಲಿಗರ ಮತಗಳು ಜೆಡಿಎಸ್ ಹಾಗೂ ಬಿಜೆಪಿ ಕಡೆ ವಾಲಿವೆ.

ಒಕ್ಕಲಿಗರ ಪ್ರಾಬಲ್ಯ ಇರುವ ಕ್ಷೇತ್ರಗಳಲ್ಲಿ ಮೈತ್ರಿ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಆ ಮೂಲಕ ಹಳೆ ಮೈಸೂರು, ದಕ್ಷಿಣ ಕರ್ನಾಟಕದಲ್ಲಿ ಒಕ್ಕಲಿಗರ ಮತಗಳು ಬಿಜೆಪಿ ಹಾಗೂ ಜೆಡಿಎಸ್​ಗೆ ಕ್ರೋಢೀಕರಣವಾಗಿದೆ. ಒಕ್ಕಲಿಗರು ಪ್ರಾಬಲ್ಯವಿರುವ ಚಿಕ್ಕಬಳ್ಳಾಪುರದಲ್ಲಿ ಶೇ.53.74, ಮಂಡ್ಯದಲ್ಲಿ ಶೇ.58.34, ಮೈಸೂರಿನಲ್ಲಿ ಶೇ.53.59, ಕೋಲಾರದಲ್ಲಿ ಶೇ.51.02, ಬೆಂಗಳೂರು ಗ್ರಾಮಾಂತರದಲ್ಲಿ ಶೇ.56.21, ತುಮಕೂರಿನಲ್ಲಿ ಶೇ.55.31ರಷ್ಟು ಮತ ಪಾಲು ದೋಸ್ತಿ ಅಭ್ಯರ್ಥಿಗಳು ಗಿಟ್ಟಿಸಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ಒಕ್ಕಲಿಗರು ಭದ್ರಕೋಟೆಯನ್ನು ಜೆಡಿಎಸ್ ಮರಳಿ ಪಡೆದಿದೆ.

ಇದನ್ನೂ ಓದಿ: ಹಳೆ ಮೈಸೂರು, ಕರಾವಳಿಯಲ್ಲಿ ಕಾಂಗ್ರೆಸ್ ಪರ ಅಲೆ ಸೃಷ್ಟಿಸದ ಗ್ಯಾರಂಟಿ; ಜೆಡಿಎಸ್‌-ಬಿಜೆಪಿ ಮೈತ್ರಿ ಜನಮನ್ನಣೆ ಗಳಿಸಿದ್ದೇಗೆ?

ಲಿಂಗಾಯತ, ಮರಾಠ ಮತಗಳು: ಅಲ್ಲದೇ, ಲಿಂಗಾಯತ ಮತಗಳೂ ಬಹುವಾಗಿ ಮೈತ್ರಿ ಪಕ್ಷಗಳ ಅಭ್ಯರ್ಥಿಗಳ ಪರ ವಾಲಿವೆ. ಮಧ್ಯ ಕರ್ನಾಟಕದಲ್ಲಿ ಬಹುತೇಕ ಲಿಂಗಾಯತ ಸಮುದಾಯ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಅಭ್ಯರ್ಥಿಗಳಿಗೆ ಕ್ರೋಢೀಕರಣವಾಗಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಲಿಂಗಾಯತ ಸಮುದಾಯದ ಮತಗಳು ಹೆಚ್ಚಿನ ಪ್ರಮಾಣದಲ್ಲಿ ಕಾಂಗ್ರೆಸ್​ಗೆ ವಾಲಿತ್ತು. ಆದರೆ, ಲೋಕಸಮರದಲ್ಲಿ ಲಿಂಗಾಯತ ಸಮುದಾಯ ಬಿಜೆಪಿ ಮತ್ತು ಅದರ ದೋಸ್ತಿ ಪಕ್ಷದ ಅಭ್ಯರ್ಥಿಗೆ ಕ್ರೋಢೀಕರಣವಾಗಿರುವುದು ಕಂಡು ಬರುತ್ತದೆ. ಹೀಗಾಗಿ ಮಧ್ಯ ಕರ್ನಾಟಕದ ಬಹುತೇಕ ಕ್ಷೇತ್ರಗಳಲ್ಲಿ ದೋಸ್ತಿ ಅಭ್ಯರ್ಥಿಗಳು ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದ್ದಾರೆ.

ಉತ್ತರ ಕರ್ನಾಟಕದ ಬಹುತೇಕ ಕ್ಷೇತ್ರಗಳಲ್ಲಿ ಲಿಂಗಾಯತ ಹಾಗೂ ಮರಾಠ ಸಮುದಾಯದ ಮತಗಳು ಮರಳಿ ಬಿಜೆಪಿ ಕಡೆಗೆ ದೊಡ್ಡ ಪ್ರಮಾಣದಲ್ಲಿ ವಾಲಿವೆ. ಬೆಳಗಾವಿ, ಹುಬ್ಬಳ್ಳಿ ಧಾರವಾಡ, ಬಾಗಲಕೋಟೆ, ಹಾವೇರಿ, ವಿಜಯಪುರ, ಚಿತ್ರದುರ್ಗದಲ್ಲಿ ಲಿಂಗಾಯತ ಸಮುದಾಯದ ಮತಗಳು ಬಿಜೆಪಿ ಕೈ ಹಿಡಿದಿರುವುದು ಕಾಣುತ್ತದೆ. ಬಹುತೇಕ ಕಡೆ ಲಕ್ಷಕ್ಕೂ ಅಧಿಕ ಮತಗಳ ಅಂತರದಲ್ಲಿ ಬಿಜೆಪಿ ಗೆಲುವು ಸಾಧಿಸಿದೆ.

ಕಾಂಗ್ರೆಸ್​ನತ್ತ ಅಹಿಂದ ಮತಗಳು: ರಾಜ್ಯದಲ್ಲಿ ಅಲ್ಪಸಂಖ್ಯಾತರ ಮತಗಳು ಈ ಲೋಕ ಸಮರದಲ್ಲಿ ಕಾಂಗ್ರೆಸ್​ನತ್ತ ಸಂಪೂರ್ಣವಾಗಿ ಕ್ರೋಢೀಕರಣವಾಗಿದೆ. ಅದರಲ್ಲೂ ಕಲ್ಯಾಣ ಕರ್ನಾಟಕದಲ್ಲಿ ಅಹಿಂದ (ಅಲ್ಪಸಂಖ್ಯಾತ, ಹಿಂದುಳಿದ, ದಲಿತ) ಮತಗಳು ಕಾಂಗ್ರೆಸ್​ಗೆ ವಾಲಿವೆ. ಕಲ್ಯಾಣ ಕರ್ನಾಟಕದಲ್ಲಿನ ಕುರುಬ ಮತಗಳು, ದಲಿತ ಸಮುದಾಯದ ಮತಗಳು ಗಣನೀಯ ಪ್ರಮಾಣದಲ್ಲಿ ಕಾಂಗ್ರೆಸ್ ಬುಟ್ಟಿಗೆ ಸೇರಿವೆ. ಹೀಗಾಗಿ ಕಲಬುರಗಿ, ರಾಯಚೂರು, ಬೀದರ್, ಕೊಪ್ಪಳ, ಬಳ್ಳಾರಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಿರುವುದು ಬಹುತೇಕ ಅಹಿಂದ ಮತಗಳಿಂದ.

ಇದನ್ನೂ ಓದಿ: ರಾಜ್ಯದಲ್ಲಿ ಬಿಜೆಪಿ 8 ಕ್ಷೇತ್ರ ಕಳೆದುಕೊಳ್ಳಲು ಕಾರಣವೇನು? - Karnataka BJP

ETV Bharat Logo

Copyright © 2024 Ushodaya Enterprises Pvt. Ltd., All Rights Reserved.