ETV Bharat / state

ರಾಜ್ಯದ 14 ಕ್ಷೇತ್ರಗಳಿಗೆ ಇಂದು ಮತದಾನ: ಮತದಾರರೆಷ್ಟು? ಎಲ್ಲೆಲ್ಲಿ ಜಿದ್ದಾಜಿದ್ದಿ? ಘಟಾನುಘಟಿಗಳು ಯಾರೆಲ್ಲ? ಸಂಪೂರ್ಣ ಮಾಹಿತಿ - Lok Sabha Election 2024 - LOK SABHA ELECTION 2024

ಜನತಂತ್ರದ ಮಹಾ ಹಬ್ಬಕ್ಕೆ ಕರ್ನಾಟಕ ಸಿದ್ಧಗೊಂಡಿದೆ. ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಇಂದು (ಶುಕ್ರವಾರ) ರಾಜ್ಯದ 14 ಕ್ಷೇತ್ರಗಳಲ್ಲಿ ನಡೆಯಲಿದೆ. ಕೋಟ್ಯಂತರ ಮತದಾರರು ರಾಜಕೀಯ ಪಕ್ಷಗಳ ಅಭ್ಯರ್ಥಿಗಳ ಹಣೆಬರಹ ನಿರ್ಧರಿಸಲಿದ್ದಾರೆ. ಬೆಳಗ್ಗೆ 7ರಿಂದ ಸಂಜೆ 6 ಗಂಟೆವರೆಗೆ ಮತದಾನ ನಡೆಯಲಿದೆ. ಮತದಾನ ನಡೆಯುವ ಕ್ಷೇತ್ರಗಳು ಯಾವುವು?, ಕಣದಲ್ಲಿರುವ ಘಟಾನುಘಟಿ ಅಭ್ಯರ್ಥಿಗಳು ಯಾರೆಲ್ಲ?, ಎಷ್ಟು ಮತದಾರರು ತಮ್ಮ ಹಕ್ಕು ಚಲಾಯಿಸಲಿದ್ದಾರೆ? ಹೀಗೆ, ನೀವು ತಿಳಿದಿರಬೇಕಾದ ಪ್ರಮುಖ ವಿಚಾರಗಳನ್ನೊಳಗೊಂಡ ಮಾಹಿತಿ ಗುಚ್ಛ ಇಲ್ಲಿದೆ.

ರಾಜ್ಯದ 14 ಕ್ಷೇತ್ರಗಳಿಗೆ ನಾಳೆ ಮತದಾನ
ರಾಜ್ಯದ 14 ಕ್ಷೇತ್ರಗಳಿಗೆ ನಾಳೆ ಮತದಾನ
author img

By ETV Bharat Karnataka Team

Published : Apr 25, 2024, 10:23 PM IST

Updated : Apr 26, 2024, 6:19 AM IST

ಬೆಂಗಳೂರು: ಲೋಕಸಭೆ ಚುನಾವಣೆ 2024ಕ್ಕೆ ಇಂದು 2ನೇ ಹಂತದ (ರಾಜ್ಯದಲ್ಲಿ ಮೊದಲ ಹಂತ) ಮತದಾನ ನಡೆಯಲಿದೆ. ಕರ್ನಾಟಕದ ದಕ್ಷಿಣ ಭಾಗ ಮತ್ತು ಕರಾವಳಿ ಜಿಲ್ಲೆಗಳಲ್ಲಿ ಹರಡಿರುವ 14 ಲೋಕಸಭಾ ಕ್ಷೇತ್ರಗಳಿಂದ ಸ್ಪರ್ಧಿಸಿರುವ ವಿವಿಧ ರಾಜಕೀಯ ಪಕ್ಷಗಳ ಅಭ್ಯರ್ಥಿಗಳ ಹಣೆಬರಹವನ್ನು ಮತದಾರರು ನಿರ್ಧರಿಸಲಿದ್ದಾರೆ. ಬಿಜೆಪಿ ಮತ್ತು ಜೆಡಿಎಸ್​ ಮೈತ್ರಿ ಹಾಗು ಕಾಂಗ್ರೆಸ್ ಪಕ್ಷ​ ಪೈಪೋಟಿ ನಡೆಸುತ್ತಿದೆ. ಮಂಡ್ಯ, ಬೆಂಗಳೂರು ಗ್ರಾಮಾಂತರ, ಮೈಸೂರು, ಬೆಂಗಳೂರು ಉತ್ತರ, ತುಮಕೂರು ಕ್ಷೇತ್ರಗಳಲ್ಲಿ ಜಿದ್ದಾಜಿದ್ದಿನ ಪೈಪೋಟಿ ಗೋಚರಿಸಿದೆ.

ರಾಜ್ಯದದಲ್ಲಿ ಒಟ್ಟು 28 ಲೋಕಸಭಾ ಸ್ಥಾನಗಳಿವೆ. ಈ ಪೈಕಿ ಮೊದಲ ಹಂತದಲ್ಲಿ ಒಟ್ಟು 247 ಅಭ್ಯರ್ಥಿಗಳು ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. ಇದರಲ್ಲಿ 226 ಪುರುಷ ಅಭ್ಯರ್ಥಿಗಳಿದ್ದರೆ, 21 ಮಹಿಳಾ ಅಭ್ಯರ್ಥಿಗಳು ಕಣದಲ್ಲಿದ್ದಾರೆ.

ಲೋಕಸಭೆ
ಲೋಕಸಭೆ

ಒಟ್ಟು 30,577 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ರಾಜ್ಯದ ಆಡಳಿತ ಚುಕ್ಕಾಣಿ ಹಿಡಿದಿರುವ ಕಾಂಗ್ರೆಸ್​ ಎಲ್ಲ 14 ಕ್ಷೇತ್ರಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಮೈತ್ರಿ ಪಕ್ಷಗಳಾದ ಬಿಜೆಪಿ 11, ಜೆಡಿಎಸ್​​ 3 (ಮಂಡ್ಯ, ಕೋಲಾರ, ಹಾಸನ) ಕ್ಷೇತ್ರಗಳಲ್ಲಿ ಚುನಾವಣೆ ಎದುರಿಸುತ್ತಿದೆ.

ಎಲ್ಲೆಲ್ಲಿ ಮತದಾನ?: ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ, ಉಡುಪಿ-ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಚಿತ್ರದುರ್ಗ, ತುಮಕೂರು, ಮಂಡ್ಯ, ಮೈಸೂರು-ಕೊಡಗು, ಚಾಮರಾಜನಗರ, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ.

ಲೋಕಸಭೆ
ಲೋಕಸಭೆ

ಜಿದ್ದಾಜಿದ್ದಿನ ಕಣಗಳು ಯಾವುವು?: ಹಳೆ ಮೈಸೂರು ಭಾಗದ ಪ್ರಮುಖ ಕ್ಷೇತ್ರವಾದ ಮಂಡ್ಯ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್​​.ಡಿ.ಕುಮಾರಸ್ವಾಮಿ ಅವರ ಸ್ಪರ್ಧೆಯಿಂದಾಗಿ ಗಮನ ಸೆಳೆದಿದೆ. ಕಾಂಗ್ರೆಸ್​ನ ಸ್ಟಾರ್ ಚಂದ್ರು ಹೆಚ್​ಡಿಕೆಗೆ ಸವಾಲೊಡ್ಡಿದ್ದಾರೆ. ಬೆಂಗಳೂರು ಗ್ರಾಮಾಂತರದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್​ ಅವರ ಸಹೋದರ ಡಿ.ಕೆ.ಸುರೇಶ್​ ಹಾಲಿ ಸಂಸದರಾಗಿದ್ದು, ಅವರ ವಿರುದ್ಧ ಬಿಜೆಪಿಯಿಂದ ಜಯದೇವ ಹೃದ್ರೋಗಾಲಯದ ಮಾಜಿ ನಿರ್ದೇಶಕರಾದ ಡಾ.ಸಿಎನ್​ ಮಂಜುನಾಥ್ ಅವರನ್ನು ಕಣಕ್ಕಿಳಿಸಲಾಗಿದೆ. ಭಾರೀ ಪೈಪೋಟಿ ಇರುವ ರಾಜ್ಯದ ಪ್ರಮುಖ ಕ್ಷೇತ್ರ ಇದಾಗಿದೆ.

ಲೋಕಸಭೆ
ಲೋಕಸಭೆ

ಮೈಸೂರಿನಲ್ಲಿ ಹಾಲಿ ಸಂಸದ ಪ್ರತಾಪ್​ ಸಿಂಹ ಅವರ ಬದಲು ಬಿಜೆಪಿಯಿಂದ ರಾಜವಂಶಸ್ಥ ಯದುವೀರ್​ ಒಡೆಯರ್​ ಕಣದಲ್ಲಿದ್ದಾರೆ. ಕಾಂಗ್ರೆಸ್​ನಿಂದ ಕೆ.ಎಂ.ಲಕ್ಷ್ಮಣ್​ ಸ್ಪರ್ಧಿಸುತ್ತಿದ್ದಾರೆ. ಇವರು ಸಿದ್ದರಾಮಯ್ಯ ಆಪ್ತರಾಗಿದ್ದು ಸ್ವಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಿಕೊಳ್ಳಲು ಸಿಎಂ ವಿಶೇಷ ಕಾಳಜಿ ವಹಿಸಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಮಾಜಿ ಆರೋಗ್ಯ ಮಂತ್ರಿ ಡಾ.ಕೆ.ಸುಧಾಕರ್​ ಮತ್ತು ಕಾಂಗ್ರೆಸ್‌ನಿಂದ ರಕ್ಷಾ ರಾಮಯ್ಯ ನಡುವೆ ಭಾರೀ ಸೆಣಸಾಟವಿದೆ.

ಲೋಕಸಭೆ
ಲೋಕಸಭೆ

14 ಕ್ಷೇತ್ರಗಳ ಪೈಕಿ ಚಿಕ್ಕಬಳ್ಳಾಪುರದಲ್ಲಿ 29 ಮಂದಿ ಕಣದಲ್ಲಿದ್ದು, ಅತಿ ಹೆಚ್ಚು ಅಭ್ಯರ್ಥಿಗಳಿರುವ ಕ್ಷೇತ್ರವಾಗಿದೆ. ಇದರ ಜೊತೆಗೆ ಬೆಂಗಳೂರು ಕೇಂದ್ರದಲ್ಲಿ 24 ಹುರಿಯಾಳುಗಳಿದ್ದಾರೆ. ದಕ್ಷಿಣ ಕನ್ನಡದಲ್ಲಿ ಕೇವಲ 9 ಮಂದಿ ಸ್ಪರ್ಧಿಸುವ ಮೂಲಕ ಅತಿ ಕಡಿಮೆ ಅಭ್ಯರ್ಥಿಗಳಿರುವ ಕ್ಷೇತ್ರವಾಗಿದೆ. ಇದರ ಬಳಿಕ ಉಡುಪಿ-ಚಿಕ್ಕಮಗಳೂರಿನಲ್ಲಿ 10 ಮಂದಿ ಕಣದಲ್ಲಿದ್ದಾರೆ.

ಲೋಕಸಭೆ
ಲೋಕಸಭೆ

ಮತದಾರರ ವಿವರ: ಮತದಾನ ನಡೆಯುವ ಹದಿನಾಲ್ಕು ಕ್ಷೇತ್ರಗಳಲ್ಲಿ ಒಟ್ಟು 2,88,08,182 ಮತದಾರರಿದ್ದಾರೆ. ಇದರಲ್ಲಿ 1,44,17,530 ಪುರುಷ ಮತದಾರರು, 1,43,87,585 ಮಹಿಳಾ ಮತದಾರರು ಇದ್ದಾರೆ. ತೃತೀಯ ಲಿಂಗಿಗಳು 3,067 ಜನರಿದ್ದಾರೆ. ಒಟ್ಟು 30,577 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ.

ಲೋಕಸಭೆ
ಲೋಕಸಭೆ

ಬೆಳಗ್ಗೆ 7ರಿಂದ ಸಂಜೆ 6 ಗಂಟೆವರೆಗೆ ಮತದಾನ: ಲೋಕಸಭಾ ಚುನಾವಣೆಯಲ್ಲಿ ಎಡಗೈ ತೋರು ಬೆರಳಿಗೆ ಅಳಿಸಲಾಗದ ಶಾಹಿ ಹಾಕಲಾಗುತ್ತದೆ. ಶಾಂತಿಯುತ ಹಾಗೂ ಸುಗಮ ಮತದಾನ ನಡೆಯಲು ಚುನಾವಣಾ ಆಯೋಗ ಎಲ್ಲ ತಯಾರಿ ನಡೆಸಿದೆ. ಮತಗಟ್ಟೆ ಕೆಲಸಕ್ಕಾಗಿ ಸುಮಾರು 1.40 ಲಕ್ಷ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಇಂದು ಬೆಳಗ್ಗೆ 7ರಿಂದ ಸಂಜೆ 6 ಗಂಟೆವರೆಗೂ ಮತದಾನ ನಡೆಯಲಿದೆ.

ಲೋಕಸಭೆ
ಲೋಕಸಭೆ

ಮತಗಟ್ಟೆ ತಿಳಿಯಲು ಚುನಾವಣಾ ಆ್ಯಪ್‌: ಮತದಾರರು ತಮ್ಮ ಮತಗಟ್ಟೆಗಳನ್ನು ತಿಳಿದುಕೊಳ್ಳಲು ಚುನಾವಣಾ ಆ್ಯಪ್‌ ಡೌನ್‌ಲೋಡ್ ಮಾಡಿಕೊಳ್ಳಬಹುದು. ಈ ಆ್ಯಪ್‌ನಲ್ಲಿ ಮತದಾರರಿಗೆ ಅವರ ಮತಗಟ್ಟೆ ಯಾವುದು ಮತ್ತು ವಾಹನಗಳನ್ನು ಎಲ್ಲಿ ನಿಲ್ಲಿಸಬೇಕು, ಅವರ ಮತದಾನ ಗುರುತಿನ ಚೀಟಿ ಎಲ್ಲದರ ಮಾಹಿತಿ ಸಿಗಲಿದೆ.

ಲೋಕಸಭೆ
ಲೋಕಸಭೆ

ಬಂದೋಬಸ್ತ್​ ಹೇಗಿದೆ?: ಬಂದೋಬಸ್ತ್‌ಗಾಗಿ ಸುಮಾರು 50 ಸಾವಿರ ಪೊಲೀಸ್ ಸಿಬ್ಬಂದಿ ಹಾಗೂ 65 ಅರೆಸೇನಾ ಪಡೆಗಳನ್ನು ನಿಯೋಜಿಸಲಾಗಿದೆ. ಮತದಾನ ನಡೆಯಲಿರುವ ಮತಗಟ್ಟೆಗಳ ಪೈಕಿ ಸುಮಾರು 19,701 ಮತಗಟ್ಟೆಗಳಲ್ಲಿ ವೆಬ್ ಕಾಸ್ಟಿಂಗ್ ಇರಲಿದೆ. 1,370 ಬೂತ್‌ಗಳಲ್ಲಿ ಸಿಸಿಟಿವಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ. ಸೂಕ್ಷ್ಮ ಹಾಗೂ ಅತಿಸೂಕ್ಷ್ಮ ಮತಗಟ್ಟೆಗಳಿಗೆ ಹೆಚ್ಚಿನ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲಾಗಿದೆ.

ಇದನ್ನೂ ಓದಿ: ನಾಳೆ ಲೋಕಸಭೆ ಚುನಾವಣೆಗೆ ಮತದಾನ: ಮತಗಟ್ಟೆಗಳತ್ತ ಇವಿಎಂ ಹಿಡಿದು ತೆರಳಿದ ಸಿಬ್ಬಂದಿ - Lok Sabha Election 2024

Last Updated : Apr 26, 2024, 6:19 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.