ETV Bharat / state

ಜೆಡಿಎಸ್ ಸೀಟು ಹಂಚಿಕೆ ಚರ್ಚೆಗೆ ತೆರೆ: ಮೂರು ಕ್ಷೇತ್ರಗಳನ್ನು ಬಿಟ್ಟುಕೊಟ್ಟ ಬಿಜೆಪಿ - Lok Sabha election - LOK SABHA ELECTION

ಜೆಡಿಎಸ್ ಸೀಟು ಹಂಚಿಕೆ ಚರ್ಚೆಗೆ ತೆರೆ ಬಿದ್ದಿದ್ದು, ಮಿತ್ರ ಪಕ್ಷ ಜೆಡಿಎಸ್​ಗೆ​ ಬಿಜೆಪಿ ಮೂರು ಕ್ಷೇತ್ರಗಳನ್ನು ಬಿಟ್ಟುಕೊಟ್ಟಿದೆ.

THREE CONSTITUENCIES FOR JDS  BJP HAS GIVEN THREE CONSTITUENCIES  LOK SABHA ELECTION 2024
ಜೆಡಿಎಸ್ ಸೀಟು ಹಂಚಿಕೆಗೆ ತೆರೆ
author img

By ETV Bharat Karnataka Team

Published : Mar 23, 2024, 2:51 PM IST

Updated : Mar 23, 2024, 3:55 PM IST

ಬೆಂಗಳೂರು : ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಹಾಗೂ ಬಿಜೆಪಿ ನಡುವೆ ಸೀಟು ಹಂಚಿಕೆ ಸಂಬಂಧ ನಡೆಯುತ್ತಿದೆ ಚರ್ಚೆಗಳಿಗೆ ಕೊನೆಗೂ ತೆರೆಬಿದ್ದಿದೆ. ರಾಜ್ಯದ 28 ಕ್ಷೇತ್ರಗಳ ಪೈಕಿ ಮಂಡ್ಯ, ಹಾಸನ ಹಾಗೂ ಕೋಲಾರ ಲೋಕಸಭಾ ಕ್ಷೇತ್ರಗಳು ಜೆಡಿಎಸ್​ಗೆ ಬಿಟ್ಟುಕೊಡಲು ಬಿಜೆಪಿ ವರಿಷ್ಠರು ಒಪ್ಪಿದ್ದಾರೆ.

three constituencies for JDS  BJP has given three constituencies  Lok Sabha election 2024
ರಾಜ್ಯ ಮಟ್ಟದ ಕಾರ್ಯಾಗಾರದಲ್ಲಿ ಬಿ.ವೈ. ವಿಜಯೇಂದ್ರ

ಈ ಕುರಿತು ಅಧಿಕೃತ ಮಾಹಿತಿ ನೀಡಿದ ಲೋಕಸಭಾ ಚುನಾವಣಾ ರಾಜ್ಯ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರ್​ವಾಲ್​ ಅವರು, ಮಂಡ್ಯ, ಹಾಸನ ಹಾಗೂ ಕೋಲಾರ ಕ್ಷೇತ್ರಗಳನ್ನು ಜೆಡಿಎಸ್​ಗೆ ನೀಡಲಾಗಿದೆ. ಈ ಮೂರು ಕ್ಷೇತ್ರಗಳಲ್ಲಿ ನಾವು ಜೆಡಿಎಸ್‌ಗೆ ಬೆಂಬಲ ನೀಡುತ್ತೇವೆ ಎಂದು ಘೋಷಿಸಿದ್ದಾರೆ.

ರಾಜ್ಯ ಮಟ್ಟದ ಕಾರ್ಯಾಗಾರ

ಅರಮನೆ ಮೈದಾನದಲ್ಲಿ ಇಂದು ಆಯೋಜಿಸಿದ್ದ ರಾಜ್ಯ ಚುನಾವಣಾ ನಿರ್ವಹಣಾ ಸಮಿತಿಯ ರಾಜ್ಯ ಮಟ್ಟದ ಕಾರ್ಯಾಗಾರದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಮಂಡ್ಯ, ಹಾಸನ ಹಾಗೂ ಕೋಲಾರ ಕ್ಷೇತ್ರಗಳನ್ನು ಜೆಡಿಎಸ್​ಗೆ ಬಿಟ್ಟುಕೊಡುವ ತೀರ್ಮಾನ ಆಗಿದೆ. ಆದರೆ, ಸುಮಲತಾ ಅಂಬರೀಷ್ ಅವರ ಟಿಕೆಟ್ ಬಗ್ಗೆ ನಿರ್ಧಾರ ಆಗಿಲ್ಲ. ಸುಮಲತಾ ಅವರ ಪಾತ್ರ ಬಹಳ ದೊಡ್ಡದಿದೆ. ಅವರ ರಾಜಕೀಯ ಭವಿಷ್ಯವು ತುಂಬಾ ಉತ್ತಮವಾಗಿರಲಿದೆ ಎಂದರು.

ರಾಜ್ಯ ಮಟ್ಟದ ಕಾರ್ಯಾಗಾರ ಉದ್ಘಾಟಿಸಿದ ನಾಯಕರು

ಇದೇ ವೇಳೆ, ಹಾಸನ ಹಾಗೂ ಕೋಲಾರದಲ್ಲಿ ಜೆಡಿಎಸ್‌ಗೆ ವಿರೋಧ ವ್ಯಕ್ತಪಡಿಸಿದ್ದ ಬಿಜೆಪಿ ಮುಖಂಡರಿಗೆ ಮೈತ್ರಿ ಧರ್ಮ ಪಾಲಿಸಿ ಎಂದು ಖಡಕ್‌ ಸೂಚನೆ ನೀಡಿದರು. ಬಿಜೆಪಿ 25 ಕ್ಷೇತ್ರಗಳಲ್ಲಿ ಸ್ಪರ್ಧಿಸಿದರೆ, ಜೆಡಿಎಸ್ ಮೂರು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ

ವಿಕಸಿತ ಭಾರತ ನಿರ್ಮಾಣಕ್ಕಾಗಿ ಭಾರತ ಗೆಲ್ಲಿಸುವ ಚುನಾವಣೆ: ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು, 2024ರ ಈ ಲೋಕಸಭಾ ಚುನಾವಣೆಯು ‘ವಿಕಸಿತ ಭಾರತ ನಿರ್ಮಿಸಿ ಭಾರತ ಗೆಲ್ಲಿಸುವ ಚುನಾವಣೆ’ಯಾಗಿದೆ. ರಾಜ್ಯ ಚುನಾವಣಾ ಸಮಿತಿಯು ಜವಾಬ್ದಾರಿಯುತ ಸ್ಥಾನ ನಿರ್ವಹಿಸಲಿದ್ದು, ಅತ್ಯಂತ ಕ್ರಿಯಾಶೀಲ ನಿರ್ವಹಣೆಯ ಮೂಲಕ ಯಶಸ್ವಿಯಾಗಿ ಚುನಾವಣೆಯಲ್ಲಿ ಪ್ರಚಂಡ ಗೆಲುವು ಸಾಧಿಸಬೇಕು ಎಂದು ಕರೆ ನೀಡಿದರು.

ಈ ಸಂದರ್ಭದಲ್ಲಿ ಪ್ರತಿಪಕ್ಷದ ನಾಯಕ ಆರ್. ಅಶೋಕ್, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಚುನಾವಣಾ ನಿರ್ವಹಣಾ ಸಮಿತಿ ರಾಜ್ಯ ಸಂಚಾಲಕ ವಿ. ಸುನೀಲ್ ಕುಮಾರ್, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಪ್ರೀತಂ ಗೌಡ, ಪಿ.ರಾಜೀವ್, ವಿಧಾನ ಪರಿಷತ್ ಸದಸ್ಯರಾದ ಶ್ರೀಮತಿ ಭಾರತಿ ಶೆಟ್ಟಿ, ಕೇಶವ ಪ್ರಸಾದ್, ಪಕ್ಷದ ಪದಾಧಿಕಾರಿಗಳು ಮುಖಂಡರು ಹಾಗೂ ಚುನಾವಣಾ ನಿರ್ವಹಣಾ ಸಮಿತಿಯ ಸದಸ್ಯರು ಭಾಗವಹಿಸಿದ್ದರು.

ಓದಿ: ದೆಹಲಿಯಲ್ಲಿ ಕಮಲ ಮುಡಿದ ಕಾಂಗ್ರೆಸ್‌ನ 6 ಬಂಡಾಯ ಶಾಸಕರ ಜೊತೆ 3 ಪಕ್ಷೇತರರು - congress rebel mlas

ದೆಹಲಿಯಿಂದ ಬಂದ ಕುಮಾರಸ್ವಾಮಿ ಹೀಗೆ ಹೇಳಿದ್ದರು: ಹಾಸನ, ಮಂಡ್ಯ ಹಾಗೂ ಕೋಲಾರ ಲೋಕಸಭೆ ಕ್ಷೇತ್ರಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳನ್ನು ನಿಲ್ಲಿಸುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ, ದೆಹಲಿಯಲ್ಲಿ ಬಿಜೆಪಿ ವರಿಷ್ಠರನ್ನು ಭೇಟಿ ಮಾಡಿ ಬಂದ ಬಳಿಕ ಘೋಷಣೆ ಮಾಡಿದ್ದರು. ಪಕ್ಷದ ರಾಜ್ಯ ಕಚೇರಿಯಲ್ಲಿ ಇಂದು ಕೋರ್ ಕಮಿಟಿ ಸಭೆ ನಂತರ ಮಾಧ್ಯಮಗಳ ಜೊತೆ ಮಾತನಾಡಿದ್ದ ಅವರು, ನಮ್ಮ ಪಕ್ಷದಲ್ಲಿ ಯಾವುದೇ ಗೊಂದಲಗಳು ಇಲ್ಲ. ಮೂರು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಹಾಕುತ್ತೇವೆ ಎಂದ್ದಿದ್ದರು.

ನಾವು ಕೇಳಿರೋದು 3 - 4 ಕ್ಷೇತ್ರ: ಸೀಟು ಹಂಚಿಕೆ ಬಗ್ಗೆ ಅಧಿಕೃತವಾಗಿ ಘೋಷಣೆ ಆಗುವ ವರೆಗೂ ಮಾತನಾಡುವುದಿಲ್ಲ. ಆದರೆ, ಅಭ್ಯರ್ಥಿಗಳ ಘೋಷಣೆ ಹಾಗೂ ಕ್ಷೇತ್ರಗಳ ಹಂಚಿಕೆ ವಿಳಂಬ ಆಗುತ್ತಿದೆ ಎಂದು ಪಕ್ಷದ ನಾಯಕರು ಆತಂಕ ವ್ಯಕ್ತಪಡಿಸಿದ್ದರು. ನಾವು ಬಿಜೆಪಿಯಿಂದ 6-7 ಸೀಟು ಕೇಳಿಲ್ಲ. ನಾವು ಕೇಳಿರೋದು 3-4 ಸೀಟು ಮಾತ್ರ. ನಮ್ಮ ಶಕ್ತಿ ಅವರಿಗೂ ಗೊತ್ತಿದೆ. 3 - 4 ಸೀಟು ಕೊಡ್ತಾರೆ ಎಂಬ ನಂಬಿಕೆ ಇಟ್ಟುಕೊಂಡಿದ್ದೇನೆ. ಕೇವಲ ಎರಡು ಕ್ಷೇತ್ರ ತೆಗೆದುಕೊಳ್ಳೋಕೆ ನಾನು ಇಷ್ಟು ಪ್ರಯತ್ನ ಮಾಡಬೇಕಿತ್ತಾ? ಇಷ್ಟೆಲ್ಲಾ ಹೊಂದಾಣಿಕೆ ಬೇಕಾ ನನಗೆ? ಎಂದು ಅವರು ಬೇಸರ ಕೂಡಾ ವ್ಯಕ್ತಪಡಿಸಿದ್ದರು.

Last Updated : Mar 23, 2024, 3:55 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.