ಬೆಂಗಳೂರು: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ನಿರೀಕ್ಷೆ ಮೀರಿ ಹೆಚ್ಚಿನ ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ ಐವರು ಅಭ್ಯರ್ಥಿಗಳು ಹಾಗೂ ಅತಿ ಕಡಿಮೆ ಅಂತರದಲ್ಲಿ ಜಯಿಸಿದ ಐವರು ಅಭ್ಯರ್ಥಿಗಳು ಇವರೇ ನೋಡಿ.
ಹೆಚ್ಚು ಅಂತರದಿಂದ ಗೆದ್ದವರು:
- ಉತ್ತರ ಕನ್ನಡ ಕ್ಷೇತ್ರ: ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ 3,37,872 ಮತಗಳ ಅಂತರದಿಂದ ಜಯಭೇರಿ ಬಾರಿಸಿದ್ದಾರೆ. ಕಾಗೇರಿ 7,80,494 ಮತಗಳನ್ನು ಪಡೆದರೆ ಇವರ ಪ್ರತಿಸ್ಪರ್ಧಿ ಕಾಂಗ್ರೆಸ್‌ನ ಡಾ.ಅಂಜಲಿ ನಿಂಬಾಳ್ಕರ್ 4,42,622 ಮತಗಳನ್ನು ಗಳಿಸಿದ್ದಾರೆ.
- ಮಂಡ್ಯ: ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಹೆಚ್.ಡಿ.ಕುಮಾರಸ್ವಾಮಿ 2,84,620 ಮತಗಳ ಅಂತರದಿಂದ ಜಯ ಗಳಿಸಿದ್ದಾರೆ. ಕುಮಾರಸ್ವಾಮಿ 8,51,881 ಮತಗಳನ್ನು ಪಡೆದರೆ, ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು 5,67,261 ಮತಗಳನ್ನು ಪಡೆದಿದ್ದಾರೆ.
- ಬೆಂಗಳೂರು ಗ್ರಾಮಾಂತರ: ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್.ಮಂಜುನಾಥ್ 2,69,647 ಮತಗಳ ಲೀಡ್ನಿಂದ ಜಯ ಗಳಿಸಿದ್ದಾರೆ. ಮಂಜುನಾಥ್ 10,79,002 ಮತಗಳನ್ನು ಪಡೆದರೆ, ಕಾಂಗ್ರೆಸ್‌ನ ಡಿ.ಕೆ.ಸುರೇಶ್ 8,09,355 ಮತಗಳನ್ನು ಪಡೆದಿದ್ದಾರೆ.
- ಬೆಂಗಳೂರು ದಕ್ಷಿಣ: ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ 2,77,083 ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ತೇಜಸ್ವಿ 7,50,830 ಮತಗಳನ್ನು ಪಡೆದರೆ, ಕಾಂಗ್ರೆಸ್‌ನ ಸೌಮ್ಯ ರೆಡ್ಡಿ 4,73,747 ಮತ ಗಳಿಸಿದ್ದಾರೆ.
- ಬೆಂಗಳೂರು ಉತ್ತರ: ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ 2,59,476 ಮತಗಳ ಅಂತರದಿಂದ ವಿಜಯದ ನಗೆ ಬೀರಿದ್ದಾರೆ. ಕರಂದ್ಲಾಜೆ 9,86,049 ಮತಗಳನ್ನು ಪಡೆದರೆ, ರಾಜೀವ್ ಗೌಡ ಅವರಿಗೆ 7,26,573 ಮತಗಳು ಲಭಿಸಿವೆ.
ಕಡಿಮೆ ಅಂತರದಿಂದ ಗೆದ್ದವರು:
- ದಾವಣಗೆರೆ: ಕಾಂಗ್ರೆಸ್ ಅಭ್ಯರ್ಥಿ ಪ್ರಭಾ ಮಲ್ಲಿಕಾರ್ಜುನ್ 26,094 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಪ್ರಭಾ 6,33,059 ಮತಗಳನ್ನು ಪಡೆದರೆ, ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ್ 6,06,965 ಮತಗಳನ್ನು ಗಳಿಸಿದ್ದಾರೆ.
- ಕಲಬುರಗಿ: ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ 27,205 ಮತಗಳ ಅಂತರದಿಂದ ಜಯಭೇರಿ ಬಾರಿಸಿದ್ದಾರೆ. ರಾಧಾಕೃಷ್ಣ ದೊಡ್ಡಮನಿ 6,52,321 ಮತ ಗಳಿಸಿದರೆ, ಬಿಜೆಪಿಯ ಉಮೇಶ್ ಜಾಧವ್ 6,25,116 ಮತಗಳನ್ನು ಪಡೆದಿದ್ದಾರೆ.
- ಬೆಂಗಳೂರು ಕೇಂದ್ರ: ಬಿಜೆಪಿ ಅಭ್ಯರ್ಥಿ ಪಿ.ಸಿ. ಮೋಹನ್ 32,707 ಮತಗಳ ಅಂತರದಿಂದ ಗೆಲುವಿನ ನಗೆ ಬೀರಿದ್ದಾರೆ. ಮೋಹನ್ 6,58,915 ಮತಗಳನ್ನು ಪಡೆದರೆ, ಕಾಂಗ್ರೆಸ್‌ನ ಮನ್ಸೂರ್ ಅಲಿ ಖಾನ್ 6,26,208 ಮತಗಳನ್ನು ಪಡೆದಿದ್ದಾರೆ.
- ಹಾಸನ: ಕಾಂಗ್ರೆಸ್ ಅಭ್ಯರ್ಥಿ ಎಂ.ಶ್ರೇಯಸ್ ಪಟೇಲ್ 42,649 ಮತಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದ್ದಾರೆ. ಪಟೇಲ್ 6,72,988 ಮತಗಳನ್ನು ಪಡೆದಿದ್ದು, ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ 6,30,339 ಮತಗಳನ್ನು ಗಳಿಸಿದ್ದಾರೆ.
- ಹಾವೇರಿ: ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ 43,513 ಮತಗಳ ಅಂತರದಿಂದ ಜಯ ಗಳಿಸಿದ್ದಾರೆ. ಬೊಮ್ಮಾಯಿ 7,05,538 ಮತಗಳನ್ನು ಪಡೆದರೆ, ಕಾಂಗ್ರೆಸ್ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ 6,62,025 ಮತ ಗಳಿಸಿದ್ದಾರೆ.
ಇದನ್ನೂ ಓದಿ: ಲೋಕಸಮರ: ರಾಜ್ಯದಲ್ಲಿ ಕಾಂಗ್ರೆಸ್ ಮತ ಪ್ರಮಾಣ ಹೆಚ್ಚಳ, ಬಿಜೆಪಿ - ಜೆಡಿಎಸ್ ಕುಸಿತ - Lok Sabha Election Results