ETV Bharat / state

3 ಎಕರೆ ಜಮೀನು ಪೋಡಿಗೆ ₹3 ಲಕ್ಷ ಲಂಚ ಕೇಳಿದ ಸರ್ವೇಯರ್ ಲೋಕಾಯುಕ್ತ ಬಲೆಗೆ - Lokayukta Raid

ಜಮೀನು ಪೋಡಿ ಮಾಡಲು ಲಂಚ ಕೇಳಿದ್ದ ಸರ್ವೇಯರ್ ಮೇಲೆ ಲೋಕಾಯುಕ್ತರು ದಾಳಿ ಮಾಡಿ, ವಶಕ್ಕೆ ಪಡೆದಿದ್ದಾರೆ.

loka raids surveyor
ಲಂಚ ಕೇಳಿದ್ದ ಸರ್ವೇಯರ್ ಲೋಕಾಯುಕ್ತ ಬಲೆಗೆ
author img

By ETV Bharat Karnataka Team

Published : Mar 26, 2024, 10:20 AM IST

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರದ ಭೂ ದಾಖಲೆಗಳ ಸಹಾಯಕ ನಿರ್ದೇಶಕರ ಕಚೇರಿ ಮೇಲೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಲೋಕಾಯುಕ್ತ ಪೊಲೀಸರು ಸೋಮವಾರ ದಾಳಿ ಮಾಡಿದ್ದಾರೆ. ಈ ವೇಳೆ ಸರ್ವೆಯರ್ ವೀರಣ್ಣ ರೈತ ನಂದೀಶ್ ಎಂಬವರಿಂದ 80 ಸಾವಿರ ರೂ ಲಂಚ ಪಡೆಯುತ್ತಿದ್ದಾಗ ಸಿಕ್ಕಿಬಿದ್ದಿದ್ದಾರೆ.

ಜಿಲ್ಲಾ ಲೋಕಾಯುಕ್ತ ಎಸ್ಪಿ ಪವನ್ ನಜ್ಜೂರು ಮಾರ್ಗದರ್ಶನದಲ್ಲಿ ಇನ್ಸ್​ಪೆಕ್ಟರ್ ರಮೇಶ್‌.ಜೆ, ನಂದಕುಮಾರ್ ನೇತೃತ್ವದಲ್ಲಿ ಒಟ್ಟು 8ಕ್ಕೂ ಹೆಚ್ಚು ಅಧಿಕಾರಿಗಳ ತಂಡ ದಾಳಿ ಮಾಡಿದೆ.

ದೂರುದಾರ ನಂದೀಶ್ ದೊಡ್ಡಬೆಳವಂಗಲ ಹೋಬಳಿಯ ಗುಂಡ್ಲಹಳ್ಳಿ ಗ್ರಾಮದ ಮೂರು ಎಕರೆ ಜಮೀನನ್ನು ಪೋಡಿ ಮಾಡಲು ಮುಂದಾಗಿದ್ದರು. ಪೋಡಿಗೆ ಸರ್ವೆಯರ್ ವೀರಣ್ಣ ಅವರು ಮೇಲಾಧಿಕಾರಿಗಳ ಹೆಸರುಗಳನ್ನು ಹೇಳಿ ಪ್ರತಿ ಎಕರೆಗೆ ಒಂದು ಲಕ್ಷ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದರು. ಒಟ್ಟು ಮೂರು ಎಕರೆ ಜಮೀನಿಗೆ ಮೂರು ಲಕ್ಷ ರೂಪಾಯಿ ಎಂದು ಮಾತನಾಡಿ 20 ಸಾವಿರ ರೂ. ಹಣವನ್ನು ಮುಂಗಡವಾಗಿ ಪಡೆದಿದ್ದರು. ಈ ಕುರಿತು ನಂದೀಶ್ ಅವರು ಲೋಕಾಯುಕ್ತರಿಗೆ ದೂರು ನೀಡಿದ್ದರು. ಸೋಮವಾರ ಮತ್ತೆ 80 ಸಾವಿರ ರೂ. ಹಣ ಪಡೆಯುತ್ತಿದ್ದಾಗ ಲೋಕಾಯುಕ್ತ ಇನ್ಸ್​ಪೆಕ್ಟರ್ ರಮೇಶ್‌ ಜೆ ನೇತೃತ್ವದಲ್ಲಿ ದಾಳಿ ಮಾಡಲಾಗಿದ್ದು, ಸರ್ವೇಯರ್ ವೀರಣ್ಣ ಮತ್ತು ಸಹಚರ ಸತೀಶ್ ಎಂಬವರ ವಿಚಾರಣೆ ನಡೆಸಿದ್ದಾರೆ.

ಈ ಕುರಿತು ದೂರುದಾರ ನಂದೀಶ್ ಮಾತನಾಡಿ, "ನಮ್ಮ ಜಮೀನನ್ನು ಪೋಡಿ ಮಾಡಿಸಿಕೊಳ್ಳಲು ಕಳೆದ ಮೂರು ವರ್ಷದಿಂದ ಕಚೇರಿಗೆ ಅಲೆದಾಡುತ್ತಿದ್ದೇನೆ. ಮುಖ್ಯಮಂತ್ರಿಗಳ ಜನತಾ ದರ್ಶನದಲ್ಲೂ ಅಧಿಕಾರಿಗಳ ಬೇಜವಾಬ್ದಾರಿತನದ ವಿರುದ್ಧ ದೂರು ನೀಡಿದ್ದೆ. ಉಪವಿಭಾಗಾಧಿಕಾರಿಗಳು ಪೋಡಿ ಮಾಡಿಕೊಡುವಂತೆ ಆದೇಶ ನೀಡಿದ್ದರೂ ಭೂ ದಾಖಲೆಗಳ ಸಹಾಯಕ ನಿರ್ದೇಶಕರ ಕಚೇರಿ ಸಿಬ್ಬಂದಿ ಮಾತ್ರ ಮೀನಮೇಷ ಎಣಿಸುತ್ತಿದ್ದರು. ಕೊನೆಗೆ ಸರ್ವೇಯರ್ ವೀರಣ್ಣ ಪ್ರತಿ ಎಕರೆಗೆ ಒಂದು ಲಕ್ಷ ರೂ. ಖರ್ಚಾಗುತ್ತದೆ ಎಂದು ಹೇಳಿದ್ದರು. 20 ಸಾವಿರ ರೂ ಅಡ್ವಾನ್ಸ್ ಕೊಟ್ಟಿದ್ದೆ. ಬಳಿಕ ಮನನೊಂದು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದೆ. ಸೋಮವಾರ 80 ಸಾವಿರ ಹಣ ನೀಡುವಾಗ ರೆಡ್ ಹ್ಯಾಂಡ್ ಆಗಿ ಭ್ರಷ್ಟ ಅಧಿಕಾರಿಯನ್ನು ಲೋಕಾಯುಕ್ತರು ವಶಕ್ಕೆ ಪಡೆದರು" ಎಂದು ತಿಳಿಸಿದರು.

ಇದನ್ನೂ ಓದಿ: 25 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ ಮುಡಾ ಕಮಿಷನರ್, ದಲ್ಲಾಳಿ ಲೋಕಾಯುಕ್ತ ಬಲೆಗೆ - LOKAYUKTA RAID

ಲಂಚ ಸ್ವೀಕರಿಸುತ್ತಿದ್ದ ಇನ್ಸ್‌ಪೆಕ್ಟರ್, ಸಬ್ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.