ETV Bharat / state

ಮುಡಾ ಪ್ರಕರಣ: ಮೂಲ ಜಮೀನಿನಲ್ಲಿ ಸ್ನೇಹಮಯಿ ಕೃಷ್ಣ ಸಮ್ಮುಖದಲ್ಲಿ ಮಹಜರು ನಡೆಸಿದ ಲೋಕಾಯುಕ್ತ ಪೊಲೀಸರು - Snehamai Krishna - SNEHAMAI KRISHNA

ಸಿಎಂ ಸಿದ್ದರಾಮಯ್ಯ ಮತ್ತು ಅವರ ಪತ್ನಿಯ ವಿರುದ್ಧದ ಮುಡಾ ಪ್ರಕರಣ ಸಂಬಂಧ ದೂರುದಾರ ಸ್ನೇಹಮಯಿ ಕೃಷ್ಣ ಅವರ ಸಮ್ಮುಖದಲ್ಲಿ ಮೂಲ ಜಮೀನಿನಲ್ಲಿ ಲೋಕಾಯುಕ್ತ ಪೊಲೀಸರು ಮಹಜರು ನಡೆಸಿದರು.

Snehamai Krishna
ಮೂಲ ಜಮೀನಿನಲ್ಲಿ ಸ್ನೇಹಮಯಿ ಕೃಷ್ಣ ಸಮ್ಮುಖದಲ್ಲಿ ಮಹಜರು (ETV Bharat)
author img

By ETV Bharat Karnataka Team

Published : Oct 1, 2024, 9:57 AM IST

Updated : Oct 1, 2024, 12:51 PM IST

ಮೈಸೂರು: ಸಿಎಂ ಹಾಗೂ ಪತ್ನಿ ಸೇರಿದಂತೆ ಇತರರ ವಿರುದ್ಧ ಲೋಕಾಯುಕ್ತದಲ್ಲಿ ದಾಖಲಾಗಿರುವ ಪ್ರಕರಣದ ಮುಂದುವರೆದಿದ್ದು, ಮೂಲ ಜಮೀನು ಸ್ಥಳಕ್ಕೆ ದೂರುದಾರ ಸ್ನೇಹಮಯಿ ಕೃಷ್ಣ ಅವರನ್ನು ಲೋಕಾಯುಕ್ತ ಪೊಲೀಸರು ಕರೆದೊಯ್ದು ಮಹಜರು ನಡೆಸಿದರು. ಈ ವೇಳೆ ಕಂದಾಯ, ಸರ್ವೇ ಇಲಾಖೆಯ ಅಧಿಕಾರಿಗಳು ಹಾಜರಿದ್ದರು. ಈ ವೇಳೆ ಲೋಕಾಯುಕ್ತ ಪೊಲೀಸರು ಟೇಪ್‌ ಹಿಡಿದು ಅಳತೆ ಮಾಡಿ ತನಿಖೆ ಮಾಡಿದರು.

ಮುಡಾ ಪ್ರಕರಣ ಸಂಬಂಧ ವಿಚಾರಣೆಗೆ ಬರುವಂತೆ ಮೈಸೂರು ಲೋಕಾಯುಕ್ತ ಕರೆದ ಹಿನ್ನೆಲೆ ಬೆಳ್ಳಂಬೆಳಗ್ಗೆ 7.30ಕ್ಕೆ ದೂರುದಾರ ಸ್ನೇಹಮಯಿ ಕೃಷ್ಣ ಮೈಸೂರಿನ ಲೋಕಾಯುಕ್ತ ಕಚೇರಿಗೆ ಆಗಮಿಸಿದ್ದರು. ಬಳಿಕ ಲೋಕಾ ಪೊಲೀಸರು, ಸ್ನೇಹಮಯಿ ಕೃಷ್ಣ ಅವರನ್ನು ಮಹಜರು ಮಾಡಲು ಸ್ಥಳಕ್ಕೆ ಕರೆದೊಯ್ದರು.

ಮೂಲ ಜಮೀನಿನಲ್ಲಿ ಸ್ನೇಹಮಯಿ ಕೃಷ್ಣ ಸಮ್ಮುಖದಲ್ಲಿ ಮಹಜರು (ETV Bharat)

ಈ ಬಗ್ಗೆ ದೂರವಾಣಿಯಲ್ಲಿ ಮಾಹಿತಿ ನೀಡಿದ ದೂರದಾರ ಸ್ನೇಹಮಯಿ ಕೃಷ್ಣ, ಲೋಕಾಯುಕ್ತ ಪೋಲೀಸರು ದೂರು ನೀಡಿರುವ ಸ್ಥಳದ ಮಾಹಿತಿ ನೀಡುವಂತೆ ಕರೆ ಮಾಡಿದ್ದರು. ಅದರಂತೆ ಇಂದು ಬೆಳಗ್ಗೆ ಲೋಕಾಯುಕ್ತ ಕಚೇರಿಗೆ ಆಗಮಿಸಿ, ಕೆಲವು ಮಾಹಿತಿಗಳನ್ನ ಲೋಕಾಯುಕ್ತರಿಗೆ ನೀಡಿದ್ದೇನೆ. ನಂತರ ಕೆಸರೆ ಗ್ರಾಮದ ಸರ್ವೆ ನಂಬರ್‌ 464 ರಲ್ಲಿ ಇರುವ 3 ಎಕರೆ 16 ಗುಂಟೆ ಜಮೀನಿನ ಮಹಜರಿಗೆ ಕರೆದೊಯ್ದರು. ಬಳಿಕ ಮಧ್ಯಾಹ್ನ ವಿಜಯನಗರದಲ್ಲಿ 14 ಬದಲಿ ನಿವೇಶನ ಪಡೆದ ಸ್ಥಳದ ಮಹಜರು ಮಾಡಲಿದ್ದಾರೆ. ಲೋಕಾಯುಕ್ತರಿಗೆ ತನಿಖೆಗೆ ಬೇಕಾದ ಎಲ್ಲಾ ರೀತಿಯ ಮಾಹಿತಿಯನ್ನ ನಾನು ನೀಡಲು ಸಿದ್ಧನಿದ್ದೇನೆ ಎಂದು ದೂರವಾಣಿಯಲ್ಲಿ ಈಟಿವಿ ಭಾರತಕ್ಕೆ ಸ್ನೇಹಮಯಿ ಕೃಷ್ಣ ಮಾಹಿತಿ ನೀಡಿದರು.

ಸ್ಥಳ ಮಹಜರು ಮುನ್ನ ಮಾತನಾಡಿದ್ದ ಸ್ನೇಹಮಯಿ ಕೃಷ್ಣ, "ದಾಖಲೆಗಳಿಗೆ ಸಂಬಂಧಿಸಿದ ಯಾವುದೇ ನೋಟಿಸ್‌ ಬಂದಿಲ್ಲ. ಆದರೆ, ವಿಚಾರಣೆಯಲ್ಲಿ ಯಾವುದೇ ದಾಖಲಾತಿ ಕೋರಿದ್ದರೆ ನಾನು ಕೊಡಲು ಸಿದ್ಧ. ಮೊದಲು ದೂರು ನೀಡಿದ ಸಂದರ್ಭ ನೀಡಿದ ದಾಖಲಾತಿಗಳನ್ನು ಈಗಾಗಲೇ ಕೊಟ್ಟಿದ್ದೇನೆ. ಈಗ ಮತ್ತೆ ವಿಚಾರಣೆ ಸಂದರ್ಭದಲ್ಲಿ ದಾಖಲಾತಿಗಳನ್ನು ಕೇಳಿದರೆ ಕೊಡಲು ಸಿದ್ಧ. ಇದರ ಜೊತೆಗೆ ಮುಡಾದಲ್ಲಿ ನಡೆದ ಎಲ್ಲ ಅಕ್ರಮಗಳ ಬಗ್ಗೆ ಸಮಗ್ರ ತನಿಖೆ ನಡೆಸಬೇಕು ಎಂಬುದು ನನ್ನ ಒತ್ತಾಯ" ಎಂದರು.

ಹೋರಾಟಕ್ಕೆ ಸಿಕ್ಕ ಜಯ: ಇಡಿಯಲ್ಲಿ ಎಫ್​ಐಆರ್​ ದಾಖಲಾಗಿದೆ. ಸಿಎಂ ಪತ್ನಿ 14 ನಿವೇಶನಗಳನ್ನು ಹಿಂತಿರುಗಿಸುವುದಾಗಿ ಮುಡಾಗೆ ಪತ್ರ ಬರೆದಿರುವ ಬಗ್ಗೆ ಪ್ರತಿಕ್ರಿಯಿಸಿ ಸ್ನೇಹಮಯಿ ಕೃಷ್ಣ, "ಯಾವುದೇ ಸಾಕ್ಷ್ಯಾಧಾರಗಳಿಲ್ಲದೇ ಸುಳ್ಳು ಆರೋಪ ಮಾಡುವುದಿಲ್ಲ. ಈವರೆಗಿನ ಎಲ್ಲಾ ಪ್ರಕರಣಗಳಲ್ಲೂ ಜಯಗಳಿಸಿದ್ದೇನೆ. ಅದೇ ರೀತಿ ಇಲ್ಲೂ ಜಯ ಗಳಿಸುವ ವಿಶ್ವಾಸವಿದೆ. ನನ್ನ ಹೋರಾಟಕ್ಕೆ ಮೊದಲ ಜಯ ಸಿಕ್ಕಿದೆ" ಎಂದು ಹೇಳಿದರು.

ಇದನ್ನೂ ಓದಿ: ನಿವೇಶನ ಹಿಂತಿರುಗಿಸುವ ನಿರ್ಧಾರ ನನಗೂ ಅಚ್ಚರಿ ಉಂಟು ಮಾಡಿದೆ: ಪತ್ನಿ ಪತ್ರದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ - Muda Case

Last Updated : Oct 1, 2024, 12:51 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.