ತುಮಕೂರು: ನಗರದ ಆರ್‌ಟಿಓ ಕಚೇರಿಯ ಮೇಲೆ 10ಕ್ಕೂ ಹೆಚ್ಚು ಲೋಕಾಯುಕ್ತ ಅಧಿಕಾರಿಗಳ ತಂಡ ದಾಳಿ ನಡೆಸಿ ಪರಿಶೀಲನೆ ಕೈಗೊಂಡಿದೆ. ಬುಧವಾರ ಬೆಳಗ್ಗೆ ಸುಮಾರು 11 ಗಂಟೆ ಸುಮಾರಿಗೆ ನಗರದ ಬಿ ಹೆಚ್ ರಸ್ತೆಯಲ್ಲಿರುವ ಆರ್‌ಟಿಓ ಕಚೇರಿಗೆ ಲೋಕಾಯುಕ್ತ ಅಧಿಕಾರಿಗಳು ಆಗಮಿಸಿದ್ದರು.
ಆರ್‌ಟಿಓ ಕಚೇರಿಗೆ ಬರುತ್ತಿದ್ದ ಪ್ರತಿಯೊಬ್ಬರು ಸೇರಿದಂತೆ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಲೋಕಾಯುಕ್ತ ಅಧಿಕಾರಿಗಳು ತೀವ್ರ ವಿಚಾರಣೆಗೆ ಒಳಪಡಿಸಿದರು. ಬೆಳಗ್ಗೆಯಿಂದಲೂ ಆರ್‌ಟಿಓ ಕಚೇರಿ ಆವರಣದಲ್ಲಿ ಇದ್ದವರಿಗೆ ಯಾವ ಕೆಲಸದ ನಿಮಿತ್ತ ಆಗಮಿಸಿದ್ದಾಗಿ ತೀವ್ರ ವಿಚಾರಣೆ ನಡೆಸಿದರು.
ಆರ್‌ಟಿಓ ಕಚೇರಿ ಆವರಣದಲ್ಲಿ ಬ್ರೋಕರ್ಗಳ ಹಾವಳಿ ಹೆಚ್ಚಾಗಿದ್ದು, ವಿಪರೀತ ಲಂಚವನ್ನು ಕೇಳಲಾಗುತ್ತಿದೆ ಎಂಬ ಗಂಭೀರ ಆರೋಪದ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ. ಸುಮಾರು 5ಕ್ಕೂ ಹೆಚ್ಚು ವಾಹನಗಳಲ್ಲಿ ಆರ್‌ಟಿಓ ಕಚೇರಿಗೆ ಲೋಕಾಯುಕ್ತ ಪೊಲೀಸರು ಆಗಮಿಸಿದ್ದರು.
ಇದನ್ನೂ ಓದಿ: ಕಲ್ಯಾಣ ಯೋಜನೆಗಳ ಅನುಷ್ಠಾನದಲ್ಲಿ ಅಕ್ರಮ ಆರೋಪ: ಬಿಬಿಎಂಪಿ ಅಧಿಕಾರಿಗಳ ಮನೆಗಳ ಮೇಲೆ ಲೋಕಾಯುಕ್ತ ದಾಳಿ