ETV Bharat / state

ಲಂಚ ಪಡೆಯುವಾಗ ರೆಡ್​ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದ ಹಾಸನ ನಗರಸಭೆ ಅಧಿಕಾರಿಗಳು - LOKAYUKTA RAID

ಹಾಸನಾಂಬ ಜಾತ್ರಾ ಮಹೋತ್ಸವದ ಸ್ವಚ್ಛತಾ ಗುತ್ತಿಗೆದಾರನಿಂದ ಲಂಚ ಪಡೆಯುತ್ತಿದ್ದ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

LOKAYUKTA RAID
ಲೋಕಾಯುಕ್ತ ದಾಳಿ (ETV Bharat)
author img

By ETV Bharat Karnataka Team

Published : 10 hours ago

ಹಾಸನ : ಹಾಸನಾಂಬ ಜಾತ್ರಾ ಮಹೋತ್ಸವದ ಸ್ವಚ್ಛತಾ ಟೆಂಡರ್ ಬಿಲ್ ನೀಡಲು ಗುತ್ತಿಗೆದಾರನಿಂದ ಲಂಚ ಪಡೆಯುವಾಗ ಹಾಸನ ನಗರಸಭೆ ಆಯುಕ್ತ ಮತ್ತು ಸಹಾಯಕ ಕಾರ್ಯಪಾಲಕ ಅಭಿಯಂತರ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಹಾಸನ ನಗರಸಭೆ ಆಯುಕ್ತ ನರಸಿಂಹಮೂರ್ತಿ, ಸಹಾಯಕ ಕಾರ್ಯಪಾಲಕ ಅಭಿಯಂತರ (ಪರಿಸರ) ಕೆ. ಆರ್. ವೆಂಕಟೇಶ್ ಲೋಕಾಯುಕ್ತ ಬಲೆಗೆ ಬಿದ್ದಿರುವ ಅಧಿಕಾರಿಗಳು.

ಹಾಸನಾಂಬ ಜಾತ್ರಾ ಮಹೋತ್ಸವದ ಸ್ವಚ್ಛತಾ ಟೆಂಡರ್ ಬಿಲ್ 10.50 ಲಕ್ಷ ರೂ. ಬಿಡುಗಡೆ ಮಾಡಲು ಒಂದೂವರೆ ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದ ಅಧಿಕಾರಿಗಳ ಬಗ್ಗೆ ಗುತ್ತಿಗೆದಾರ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಈ ದೂರು ಆಧರಿಸಿ ಲೋಕಾಯುಕ್ತರು ಪ್ಲಾನ್​ ಮಾಡಿದ್ದರು. ಅದರಂತೆ ಇಂದು ಈ ಇಬ್ಬರು ಅಧಿಕಾರಿಗಳು ಕಚೇರಿಯಲ್ಲಿ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಇನ್​ಸ್ಪೆಕ್ಟರ್​ಗ​​ಳಾದ ಬಾಲು ಹಾಗೂ ಶಿಲ್ಪಾ ನೇತೃತ್ವದಲ್ಲಿ ದಾಳಿ ನಡೆಸಿ ಇಬ್ಬರನ್ನೂ ಲಂಚದ ಹಣದ ಸಮೇತ ವಶಕ್ಕೆ ಪಡೆದಿರುವುದಾಗಿ ತಿಳಿಸಿದ್ದಾರೆ.

ಮೊನ್ನೆ ತಾನೆ ಶಿಕ್ಷಣ ಇಲಾಖೆಯ ಡಿಡಿಪಿಐ ಮತ್ತು ಮೇಲ್ವಿಚಾರಕ ಲೋಕಾ ಬಲೆಗೆ ಬಿದ್ದಿದ್ದರು. ಈ ಪ್ರಕರಣದ ಬೆನ್ನಲ್ಲೇ ಈಗ ನಗರಸಭೆಯ ಮುಖ್ಯಾಧಿಕಾರಿ ಮತ್ತು ಪರಿಸರ ಅಭಿಯಂತರ ಲೋಕಾಯುಕ್ತದ ಕೈಗೆ ರೆಡ್​​ ಹ್ಯಾಂಡಾಗಿ ಸಿಕ್ಕಿಬಿದ್ದಿದ್ದಾರೆ.

ನಿನ್ನೆ (ಜ. 8) ರಾಜ್ಯಾದ್ಯಂತ ಲೋಕಾಯುಕ್ತ ಅಧಿಕಾರಿಗಳು ರಾಜ್ಯದ ವಿವಿಧೆಡೆ ದಾಳಿ ನಡೆಸಿ, ಭ್ರಷ್ಟ ಅಧಿಕಾರಿಗಳಿಗೆ ಚಳಿ ಬಿಡಿಸಿದ್ದರು.

ಇದನ್ನೂ ಓದಿ:ಶಿಕ್ಷಕಿಯ ವರ್ಗಾವಣೆಗೆ ಲಂಚ: ಡಿಡಿಪಿಐ, ಕಚೇರಿ ಅಧೀಕ್ಷಕ ಲೋಕಾಯುಕ್ತ ಬಲೆಗೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.