ಬೆಳಗಾವಿ : ಗೋಕಾಕ್ ಗ್ರೇಡ್-2 ತಹಶೀಲ್ದಾರ್ಗೆ ಲೋಕಾಯುಕ್ತ ಅಧಿಕಾರಿಗಳು ಇಂದು ಬಿಸಿ ಮುಟ್ಟಿಸಿದ್ದಾರೆ. ಐದು ತಂಡಗಳಾಗಿ 50 ಜನ ಅಧಿಕಾರಿಗಳು ಬೆಳಗ್ಗೆ ಹಲವು ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ದಾಳಿ ನಡೆಸಿದ್ದಾರೆ.
ಗಾಢ ನಿದ್ದೆಯಲ್ಲಿದ್ದ ಅಧಿಕಾರಿಗಳ ಮನೆ ಕಚೇರಿಯ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಗೋಕಾಕ್ ಗ್ರೇಡ್-2 ತಹಶೀಲ್ದಾರ್ ಶ್ರೀಕಾಂತ ಬೆಟಗೇರಿ, ಕಂದಾಯ ನಿರೀಕ್ಷಕ ಶಿವಾನಂದ ಹಿರೇಮಠ ಸೇರಿ ಹಲವರ ಮನೆ ಮೇಲೆ ದಾಳಿ ನಡೆಸಲಾಗಿದೆ. ಲೋಕಾಯುಕ್ತ ಡಿವೈಎಸ್ಪಿ ಬಿ.ಎಸ್. ಪಾಟೀಲ್ ನೇತೃತ್ವದಲ್ಲಿ ದಾಳಿ ನಡೆಸಿ ಮನೆ ಹಾಗೂ ಕಚೇರಿಯಲ್ಲಿರುವ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ.
ಅಕ್ರಮವಾಗಿ ಎಸ್. ಎಸ್. ವೈ ಪಿಂಚಣಿ ಮಂಜೂರಾತಿ ಆರೋಪ ಕೇಳಿ ಬಂದಿತ್ತು. ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆ ಈ ಹಿಂದೆಯೂ ದಾಳಿ ಮಾಡಲಾಗಿತ್ತು. ಇಂದು ಮತ್ತೊಮ್ಮೆ ದಾಳಿ ನಡೆಸಲಾಗಿದೆ. ಅಧಿಕಾರಿಗಳು ದಾಖಲಾತಿಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ. ತಹಶೀಲ್ದಾರ್ ಕಚೇರಿ ಸೇರಿದಂತೆ ಬೇರೆ ಬೇರೆ ಕಡೆಗಳಲ್ಲೂ ಲೋಕಾಯುಕ್ತ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.
ಇದನ್ನೂ ಓದಿ: ಗೇನ್ ಬಿಟ್‌ಕಾಯಿನ್ ಹಗರಣ : ದೇಶಾದ್ಯಂತ 60ಕ್ಕೂ ಹೆಚ್ಚು ಸ್ಥಳಗಳಲ್ಲಿ ಸಿಬಿಐ ಶೋಧ