ETV Bharat / state

ಕಾಂಗ್ರೆಸ್ ಸರ್ಕಾರಕ್ಕೆ ಲೋಕಾಯುಕ್ತ ಸರೆಂಡರ್: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆರೋಪ

ಕಾಂಗ್ರೆಸ್​ ಉಪ ಚುನಾವಣೆಯಲ್ಲಿ ಮೂರೂ ಕ್ಷೇತ್ರಗಳಲ್ಲಿ ಗೆಲ್ಲಲು ಹಣದ ಹೊಳೆಯನ್ನೇ ಹರಿಸುತ್ತಿದೆ. ಆದರೆ ಚುನಾವಣೆಯಲ್ಲಿ ಗೆಲ್ಲುವುದು ನಾವೇ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

UNION MINISTER PRALHAD JOSHI ACCUSED
ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆರೋಪ (ETV Bharat)
author img

By ETV Bharat Karnataka Team

Published : Oct 29, 2024, 9:29 AM IST

Updated : Oct 29, 2024, 11:49 AM IST

ಹುಬ್ಬಳ್ಳಿ: "ರಾಜ್ಯದಲ್ಲಿ ಲೋಕಾಯುಕ್ತ ತನಿಖಾ ಸಂಸ್ಥೆ ಸಿಎಂ ಮತ್ತು ಕಾಂಗ್ರೆಸ್ ಸರ್ಕಾರಕ್ಕೆ ಸಂಪೂರ್ಣ ಶರಣಾಗಿದೆ" ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆರೋಪಿಸಿದರು.

ಹುಬ್ಬಳ್ಳಿಯಲ್ಲಿ ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿ, "ಲೋಕಾಯುಕ್ತ ಹಿಂದಿನಂತೆ ಖಡಕ್ ತನಿಖಾ ಸಂಸ್ಥೆಯಾಗಿ ಉಳಿದಿಲ್ಲ. ಬದಲಿಗೆ ಕಾಂಗ್ರೆಸ್ ಆಯೋಗವಾಗಿದೆ. ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಮತ್ತು ಅವರ ಕುಟುಂಬಕ್ಕೆ ಅನುಕೂಲಕರ ರೀತಿಯಲ್ಲಿ ತನಿಖೆ ನಡೆಯುತ್ತಿದೆ. 30 ಲಕ್ಷ ರೂಪಾಯಿ ಎಣಿಸುವ ವಿಡಿಯೋ ಸಮೇತ ಸುದ್ದಿ ಮಾಧ್ಯಮವೊಂದರಲ್ಲಿ ಬಿತ್ತರವಾಗಿದೆ. ಇಷ್ಟೊಂದು ದೊಡ್ಡ ಪ್ರಕರಣ ನಡೆದರೂ ಇದುವರೆಗೆ ಯಾರೊಬ್ಬರನ್ನೂ ಬಂಧಿಸಲಾಗಿಲ್ಲ" ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆರೋಪ (ETV Bharat)

ಕಾಂಗ್ರೆಸ್ ಹೈಕಮಾಂಡ್ ಸಿಎಂ ಕೈ ಹಿಡಿದಿದೆ: ವಾಲ್ಮೀಕಿ, ಮುಡಾ ಹೀಗೆ ಸಾಕಷ್ಟು ಹಗರಣ ನಡೆದರೂ ಕಾಂಗ್ರೆಸ್ ಹೈಕಮಾಂಡ್ ಸಿಎಂ ಸಿದ್ದರಾಮಯ್ಯ ಅವರ ಕೈ ಹಿಡಿದಿದೆ ಎಂದು ಟೀಕಿಸಿದರು.

ಸಿಎಂ ಕೆಳಗಿಳಿಸಲು ನಿರ್ಧಾರ: "ರಾಜ್ಯ ಕಾಂಗ್ರೆಸ್​ನಲ್ಲಿ ಸಿದ್ದರಾಮಯ್ಯ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಲು ತೀರ್ಮಾನ ಮಾಡಿದಂತಿದೆ. ಆದರೆ, ಮುಂದಿನ ಸಿಎಂ ಡಿ.ಕೆ. ಶಿವಕುಮಾರ್ ಆಗುತ್ತಾರೋ ಅಥವಾ ಮತ್ಯಾರಾಗುತ್ತಾರೆ ಎಂಬುದನ್ನು ಈ ಉಪ ಚುನಾವಣೆ ನಿರ್ಧರಿಸಲ್ಲ" ಎಂದು ಹೇಳಿದರು.

ಉಪ ಚುನಾವಣೆಯಲ್ಲಿ ಹಣದ ಹೊಳೆ ಹರಿಸುತ್ತಿದೆ ಕಾಂಗ್ರೆಸ್, ಆದ್ರೂ ಗೆಲುವು ನಮ್ಮದೇ: "ವಿಧಾನಸಭೆ ಉಪ ಚುನಾವಣೆಯಲ್ಲಿ ಆಡಳಿತ ಪಕ್ಷ ಹಣದ ಹೊಳೆಯನ್ನೇ ಹರಿಸುತ್ತಿದೆ. ಮೂರೂ ಕ್ಷೇತ್ರಗಳಲ್ಲಿ ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸಚಿವರುಗಳನ್ನು ಇರಿಸಿದೆ. ಹಣದ ಹೊಳೆ ಹರಿಸುತ್ತಿದೆ. ಆದಾಗ್ಯೂ ‌ಎನ್​ಡಿಎ ಮೂರೂ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ" ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕಾಂಗ್ರೆಸ್​ನವರು ಬಹಳ ಭ್ರಮನಿರಸನಗೊಂಡು ತನ್ನ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಳ್ಳಲು ಆಡಳಿತ ಯಂತ್ರವನ್ನು ದುರುಪಯೋಗ ಪಡಿಸಿಕೊಳ್ಳುತ್ತಿದೆ. ಸರ್ಕಾರಿ ಮಷಿನರಿ ಉಪಯೋಗಿಸಿಕೊಂಡು ದುಡ್ಡು ಹಂಚುತ್ತಿದ್ದಾರೆ. ಆದರೆ, ಇದನ್ನೆಲ್ಲ ಮೀರಿ ಎನ್​ಡಿಎ ಅಭ್ಯರ್ಥಿಗಳು ಗೆಲ್ಲಲಿದ್ದಾರೆ. ಶಿಗ್ಗಾಂವಿ, ಸಂಡೂರು, ಚನ್ನಪಟ್ಟಣ ಎಲ್ಲೆಡೆಯೂ ಕಾಂಗ್ರೆಸ್ ಮಂತ್ರಿ ಮಂಡಲವೇ ಬೀಡು ಬಿಟ್ಟಿದೆ. ಇದರಿಂದಲೇ ಗೊತ್ತಾಗುತ್ತದೆ ಸೋಲುವ ಭಯದಲ್ಲಿ ಏನೇನು ತಂತ್ರ ಹೆಣೆದಿದ್ದಾರೆ. ಹಾಗೂ ಅದೆಷ್ಟು ಹಣ ಚೆಲ್ಲುತ್ತಿದ್ದಾರೆ ಎಂದು ಜೋಶಿ ಹೇಳಿದರು.

ಇದನ್ನೂ ಓದಿ: ಕುಮಾರಸ್ವಾಮಿ ಆರೋಪ ಬಿಟ್ಟು ಚುನಾವಣೆ ಮಾಡಲಿ : ಮಾಜಿ ಸಂಸದ ಡಿ ಕೆ ಸುರೇಶ್

Last Updated : Oct 29, 2024, 11:49 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.