ETV Bharat / state

ಎನ್​ಡಿಎ ನಾಯಕರ ಪ್ರಾಸಿಕ್ಯೂಷನ್ ಬಗ್ಗೆ ರಾಜ್ಯಪಾಲರಿಗೆ ಲೋಕಾಯುಕ್ತರಿಂದ ಸ್ಪಷ್ಟನೆ: ಪರಮೇಶ್ವರ್ - G Parameshwar - G PARAMESHWAR

ಲೋಕಾಯುಕ್ತ ಅಧಿಕಾರಿಗಳು ಎನ್​ಡಿಎ ನಾಯಕರ ಪ್ರಾಸಿಕ್ಯೂಷನ್ ಸಂಬಂಧ ರಾಜ್ಯಪಾಲರಿಗೆ ಸ್ಪಷ್ಟನೆ ಕಳುಹಿಸಲಿದ್ದಾರೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದ್ದಾರೆ.

parameshwar
ಗೃಹ ಸಚಿವ ಜಿ.ಪರಮೇಶ್ವರ್ (ETV Bharat)
author img

By ETV Bharat Karnataka Team

Published : Sep 1, 2024, 1:46 PM IST

ಬೆಂಗಳೂರು: ''ರಾಜ್ಯಪಾಲರು ಪ್ರಾಸಿಕ್ಯೂಷನ್ ಅನುಮತಿ ದೂರುಗಳ ಬಗ್ಗೆ ಸ್ಪಷ್ಟೀಕರಣ ನೀಡುವಂತೆ ಸೂಚಿಸಿ ಲೋಕಾಯುಕ್ತಕ್ಕೆ ವಾಪಸ್ ಕಳುಹಿಸಿದ್ದು, ಲೋಕಾಯುಕ್ತದವರು ಸ್ಪಷ್ಟೀಕರಣ ನೀಡಲಿದ್ದಾರೆ'' ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್​ ತಿಳಿಸಿದರು.

ಸದಾಶಿವನಗರದ ತಮ್ಮ ನಿವಾಸದ ಬಳಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ''ಲೋಕಾಯುಕ್ತದಿಂದ ದೂರುಗಳ ಕಡತ ಹೋಗಿದೆ. ಇದಾದ ನಂತರ, ಕ್ಲ್ಯಾರಿಫಿಕೇಶನ್ ಕೇಳಿ ವಾಪಸ್ ಕಳುಹಿಸಿದ್ದೇವೆ ಎಂದು ರಾಜ್ಯಪಾಲರು ಹೇಳುತ್ತಿದ್ದಾರೆ. ಲೋಕಾಯುಕ್ತದಿಂದ ಸ್ಪಷ್ಟೀಕರಣ ಬರುವವರೆಗೂ ವಿಷಯ ರಿಜೆಕ್ಟ್ ಆಗುವುದಿಲ್ಲ‌. ರಾಜ್ಯಪಾಲರ ಬಳಿ ಇದ್ದಂತೆಯಲ್ಲವೇ?. ಇದನ್ನೇ ರಾಜ್ಯಪಾಲರು ನನ್ನ ಬಳಿ ದೂರುಗಳು ಬಾಕಿ ಇಲ್ಲ ಎಂದು ಹೇಳುತ್ತಿದ್ದಾರೆ'' ಎಂದರು.

''ರಾಜ್ಯಪಾಲರ ಕಚೇರಿಯಿಂದ ಮೂರು ದೂರುಗಳ ಕುರಿತು ಕ್ಲಾರಿಫಿಕೇಶನ್ ಕೇಳಿದ್ದಾರೆ ಎಂದಾದರೆ ಲೋಕಾಯುಕ್ತದವರು ಸುಮ್ಮನಿರಲು ಬರುವುದಿಲ್ಲ‌. ಸ್ಪಷ್ಟೀಕರಣ ನೀಡಬೇಕಾಗುತ್ತದೆ. ತದನಂತರದ ವಿಚಾರ ರಾಜ್ಯಪಾಲರಿಗೆ ಬಿಟ್ಟದ್ದು. ರಾಜ್ಯಪಾಲರು ಒಂದು ಕಡತ ಮಾತ್ರ ಇದೆ ಎಂಬುದನ್ನು ನಿನ್ನೆ ತಿಳಿಸಿದರು. ಹೆಚ್‌.ಡಿ.ಕುಮಾರಸ್ವಾಮಿಯವರದ್ದು ಎಂಬುದು ಗೊತ್ತಾಗಿದೆ. ಅದಕ್ಕಾದರೂ ಕ್ರಮ ತೆಗೆದುಕೊಳ್ಳಬೇಕಲ್ಲವೇ? ಕಾನೂನು ರೀತಿ ಇದೆಯೇ? ಕಾನೂನು ಬಾಹಿರವಾಗಿದೆಯೇ ಎಂಬುದನ್ನು ಲೋಕಾಯುಕ್ತದವರು ತಿಳಿಸಿದ್ದಾರೆ. ಅದನ್ನು ಆಧರಿಸಿ ಕ್ರಮ ತೆಗೆದುಕೊಳ್ಳಬೇಕು'' ಎಂದು ಆಗ್ರಹಿಸಿದರು.

''ಸಿದ್ದಾರ್ಥ ಟ್ರಸ್ಟ್‌ಗೆ ನೀಡಿರುವ ಕೆಐಎಡಿಬಿ ನಿವೇಶನದ ಬಗ್ಗೆ ರಾಜ್ಯಪಾಲರ ಬಳಿ ಚರ್ಚೆ ಆಗಿಲ್ಲ. ವಿಶೇಷ ಅಧಿವೇಶನ ಕರೆಯುವ ಬಗ್ಗೆ ಮುಖ್ಯಮಂತ್ರಿಯವರ ಬಳಿ ಪ್ರಸ್ತಾಪ ಆಗಿಲ್ಲ. ಕೋರ್ಟ್ ತೀರ್ಪು ಆಧರಿಸಿ, ಮುಂದಿನ ಬೆಳವಣಿಗೆಗಳನ್ನು ನೋಡಿ ರಾಷ್ಟ್ರಪತಿ ಭೇಟಿಯ ಬಗ್ಗೆ ತೀರ್ಮಾನಿಸಲಾಗುವುದು'' ಎಂದು ಪರಮೇಶ್ವರ್ ಹೇಳಿದರು.

ಸಿದ್ದರಾಮಯ್ಯ ಅಧಿಕಾರ ದುರುಪಯೋಗಪಡಿಸಿಕೊಂಡಿಲ್ಲ: ಮುಡಾ ವಿಚಾರದಿಂದ ಸಿಎಂ ಆತಂಕಗೊಂಡಿದ್ದಾರೆ ಎಂಬುದರ ಕುರಿತು ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಗೃಹ ಸಚಿವರು, ''ಮುಖ್ಯಮಂತ್ರಿಯವರು ಆತಂಕದಲ್ಲಿಲ್ಲ. ಎಲ್ಲ ವಿಚಾರದಲ್ಲೂ ಸ್ಪಷ್ಟವಾಗಿದ್ದಾರೆ. ಅವರು ಪ್ರತಿಪಕ್ಷದ ನಾಯಕನಾಗಿ, ಮುಖ್ಯಮಂತ್ರಿಯಾಗಿ ಅಧಿಕಾರವನ್ನು ದುರುಪಯೋಗಪಡಿಸಿಕೊಂಡಿಲ್ಲ. ಯಾವುದೇ ರೀತಿಯ ಕಾನೂನುಬಾಹಿರ ಕೆಲಸಗಳನ್ನು ಮಾಡಿಲ್ಲ ಎಂಬುದನ್ನು ರಾಜ್ಯದ ಜನತೆಯ ಮುಂದೆ ಸ್ಪಷ್ಟಪಡಿಸಿದ್ದಾರೆ‌'' ಎಂದರು.

''ಕೋವಿಡ್​ ಹಗರಣ ಪ್ರಕರಣದ ಬಗ್ಗೆ ನಿವೃತ್ತ ನ್ಯಾಯಮೂರ್ತಿ ಜಾನ್‌ ಮೈಕಲ್ ಡಿ ಕುನ್ಹಾ ಅವರು ಮುಖ್ಯಮಂತ್ರಿಯವರಿಗೆ ವರದಿ ಸಲ್ಲಿಸುವಾಗ ನಾನು ಇರಲಿಲ್ಲ. ಅದನ್ನು ಪರಿಶೀಲಿಸಿ, ಏನು ಶಿಫಾರಸು ಮಾಡಿದ್ದಾರೆ ಎಂಬುದನ್ನು ಆಧರಿಸಿ‌ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು'' ಎಂದು ಪ್ರತಿಕ್ರಿಯಿಸಿದರು.

''ಯಾವುದಾದರು ವಿಷಯದ ಕುರಿತು ಸತ್ಯಾಸತ್ಯತೆಗಳನ್ನು ಸರ್ಕಾರಕ್ಕೆ ತಿಳಿಸಬೇಕು ಎಂಬ ಉದ್ದೇಶ ಇಟ್ಟುಕೊಂಡು ಆಯೋಗಗಳನ್ನು ರಚಿಸಲಾಗಿರುತ್ತದೆ. ಆಯೋಗದ ವರದಿ ಬಂದಾದ‌ ಮೇಲೆ ಕ್ರಮ ಕೈಗೊಳ್ಳಬೇಕಾಗುತ್ತದೆ‌. ಇಲ್ಲವಾದರೆ ಆಯೋಗ ಏಕೆ ರಚಿಸಬೇಕು. ಕ್ರಮ ತೆಗೆದುಕೊಳ್ಳಲಾಗುವುದು. ಕುನ್ಹಾ ವರದಿ ಕ್ಯಾಬಿನೆಟ್‌ ಮುಂದೆ ಬಂದರೆ ಚರ್ಚಿಸಲಾಗುವುದು'' ಎಂದು ತಿಳಿಸಿದರು.

ಇದನ್ನೂ ಓದಿ: ಬಿಜೆಪಿ ಅವಧಿಯ ಕೋವಿಡ್ 'ಹಗರಣ'ದ ತನಿಖೆ: ಸರ್ಕಾರಕ್ಕೆ ಮಧ್ಯಂತರ ವರದಿ ಸಲ್ಲಿಸಿದ ವಿಚಾರಣಾ ಆಯೋಗ - Interim Report On Covid Scam

ETV Bharat Logo

Copyright © 2024 Ushodaya Enterprises Pvt. Ltd., All Rights Reserved.