ETV Bharat / state

ಲೈಂಗಿಕ ಕಿರುಕುಳ ಆರೋಪ ಪ್ರಕರಣ: ಹೆಚ್‌.ಡಿ.ರೇವಣ್ಣಗೆ ಲುಕ್‌ಔಟ್ ನೋಟಿಸ್ ಜಾರಿ - Lookout Notice To H D Revanna - LOOKOUT NOTICE TO H D REVANNA

ಲೈಂಗಿಕ ಕಿರುಕುಳ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಹೆಚ್‌.ಡಿ.ರೇವಣ್ಣಗೆ ಲುಕ್‌ಔಟ್ ನೋಟಿಸ್ ಜಾರಿಯಾಗಿದೆ.

ಹೆಚ್‌.ಡಿ.ರೇವಣ್ಣ
ಹೆಚ್‌.ಡಿ.ರೇವಣ್ಣ (Etv Bharat)
author img

By ETV Bharat Karnataka Team

Published : May 3, 2024, 9:37 PM IST

ಬೆಂಗಳೂರು: ಲೈಂಗಿಕ ಕಿರುಕುಳ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿಯಾದ ಬಳಿಕ‌ ಇದೀಗ ಅವರ ತಂದೆ, ಹೊಳೆನರಸೀಪುರ ಶಾಸಕ ಎಚ್.ಡಿ.ರೇವಣ್ಣ ಅವರಿಗೂ ಸಹ ಲುಕ್ ಔಟ್ ನೋಟಿಸ್ ಜಾರಿಯಾಗಿದೆ. ಪ್ರಕರಣದಲ್ಲಿ‌ ಬಂಧನ ಭೀತಿ ಎದುರಿಸುತ್ತಿರುವ ರೇವಣ್ಣ ದೇಶ ಬಿಟ್ಟು ಹೋಗುವುದನ್ನು ತಡೆಯಲು ಎಸ್​ಐಟಿ ಈ ಕ್ರಮ ಕೈಗೊಂಡಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ಹಾಜರಾಗುವಂತೆ ಸೂಚಿಸಿದ್ದರೂ ಗೈರಾಗಿದ್ದರು. ಆದ್ದರಿಂದ ವಿದೇಶಕ್ಕೆ ತೆರಳುವ ಸಂಭಾವ್ಯ ಯತ್ನ ತಡೆಯಲು ಮುಂಜಾಗ್ರತಾ ಕ್ರಮವಾಗಿ ಲುಕ್​ ಔಟ್ ನೋಟಿಸ್ ಜಾರಿಗೊಳಿಸಲಾಗಿದೆ ಎಂದು ಎಸ್ಐಟಿ ಮೂಲಗಳು ತಿಳಿಸಿವೆ.

ಲುಕ್‌ ಔಟ್‌ ನೋಟಿಸ್ ಜಾರಿ ಮೂಲಕ ರೇವಣ್ಣ ಅವರಿಗೆ ಮತ್ತಷ್ಟು ಸಂಕಷ್ಟ ಎದುರಾಗಿದ್ದು, ಯಾವುದೇ ಸಂದರ್ಭದಲ್ಲೂ ಬಂಧನ ಭೀತಿ ಎದುರಿಸುತ್ತಿದ್ದಾರೆ.

ಇದನ್ನೂ ಓದಿ: ರಾಜತಾಂತ್ರಿಕ ಪಾಸ್‌ಪೋರ್ಟ್ ಎಂದರೇನು?, ಇದರಿಂದ ಸಂಸದರಿಗೆ ಸಿಗುವ ಸವಲತ್ತುಗಳೇನು? - Diplomatic Passport

ETV Bharat Logo

Copyright © 2024 Ushodaya Enterprises Pvt. Ltd., All Rights Reserved.