ನೆಲಮಂಗಲ: ಸ್ಕೂಟರ್ಗೆ ಲಾರಿ ಡಿಕ್ಕಿ ಹೊಡೆದಿದ್ದು, ಅಪಘಾತದಲ್ಲಿ ತುಂಬು ಗರ್ಭಿಣಿ ಸಿಂಚನ (30) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ತಾಯಿಯ ಹೊಟ್ಟೆಯಿಂದ ಹೊರ ಬಂದ ಮಗು ಕೂಡ ಮೃತಪಟ್ಟಿದೆ.
ನೆಲಮಂಗಲ ತಾಲೂಕಿನ ದಾಬಸ್ ಪೇಟೆ ಬಳಿಯ ಎಡೇಹಳ್ಳಿ ಗೇಟ್ ಬಳಿ ಘಟನೆ ನಡೆದಿದೆ. ಲಾರಿ ಮತ್ತು ಬಸ್ ಚಾಲಕನ ನಡುವೆ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಗ್ವಾದ ನಡೆಯುತ್ತಿದ್ದು, ಮೃತ ಮಹಿಳೆಯ ಗಂಡ ಮಂಜುನಾಥ್ ಸರ್ವಿಸ್ ರಸ್ತೆಯಲ್ಲಿ ಹೋಗಿದ್ದಾರೆ. ಈ ವೇಳೆ ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಗಂಡ ಮಂಜುನಾಥ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ನೆಲಮಂಗಲ ಸಂಚಾರಿ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಮೃತ ಸಿಂಚನಾ ಅವರಿಗೆ ಆಗಸ್ಟ್ 17ಕ್ಕೆ 8 ತಿಂಗಳು ತುಂಬಿ 9ನೇ ತಿಂಗಳಿಗೆ ಕಾಲಿಡುತ್ತಿದ್ದರು. ಹೆರಿಗೆ ಸುಸೂತ್ರವಾಗಿ ನಡೆಯಲಿ ಎಂದು ಪ್ರಾರ್ಥಿಸಲು ಶಿವಗಂಗೆಯ ಗಣಪತಿ ದೇವಾಲಯಕ್ಕೆ ತೆರಳಿ ದಂಪತಿ ಪೂಜೆ ಸಲ್ಲಿಸಿದ್ದಾರೆ. ದೇವಾಲಯದಿಂದ ವಾಪಸ್ ಬರುವ ವೇಳೆ ದಂಪತಿ ಹೋಗುತ್ತಿದ್ದ ಸ್ಕೂಟರ್ಗೆ ಲಾರಿ ಡಿಕ್ಕಿ ಹೊಡೆದಿದೆ.
ಇದನ್ನೂ ಓದಿ: ಹಸು ಬದುಕಿಸಲು ಹೋಗಿ ಪಲ್ಟಿಯಾದ ಕಾರು: ನಾಲ್ವರು ಸಾವು, ಐವರಿಗೆ ಗಾಯ - Four people died in road accident