ಕೊಪ್ಪಳ: ಪ್ರಸಿದ್ಧ ಹುಲಿಗೆಮ್ಮ ದೇವಿ ಜಾತ್ರೆಯಲ್ಲಿ ಪಾಲ್ಗೊಳ್ಳಲು ಪಾದಯಾತ್ರೆ ಹೊರಟವರ ಮೇಲೆ ಲಾರಿ ಹರಿದು ಓರ್ವ ಸಾವನ್ನಪ್ಪಿ, ಮತ್ತೊಬ್ಬನ ಕಾಲು ತುಂಡಾಗಿರುವ ಘಟನೆ ಕೊಪ್ಪಳ ತಾಲೂಕಿನ ಕೆರಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿಯ ಫ್ಲೈಓವರ್ನಲ್ಲಿ ನಡೆದಿದೆ. ಯಮನೂರಪ್ಪ ಸಣ್ಣಮನಿ (34) ಎಂಬವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಯಮನೂರಪ್ಪ ಬಾಗಲಕೋಟ ಜಿಲ್ಲೆಯ ಹುನಗುಂದ ತಾಲೂಕಿನ ರಕ್ಕಸಗಿ ಗ್ರಾಮದ ನಿವಾಸಿ ಎಂದು ತಿಳಿದುಬಂದಿದೆ. ಗಾಯಗೊಂಡಿರುವ ಮಹಾಂತೇಶ್ ಎಂಬವರ ಕಾಲು ತುಂಡಾಗಿದೆ. ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಮಹಾಂತೇಶ್ ಕಾಲು ತುಂಡಾಗಿದ್ದು, ಸೇತುವೆ ಮೇಲಿಂದ ಕೆಳಗೆ ಬಿದ್ದಿದ್ದಾರೆ. ಕೂಡಲೇ ಪೊಲೀಸರು ಕೊಪ್ಪಳ ಜಿಲ್ಲಾ ಆಸ್ಪತ್ರೆಗೆ ರವಾನಿಸಿದ್ದರು.
ಇಂದು ಹುಲಿಗೆಮ್ಮ ದೇವಿ ಜಾತ್ರೆ ನಡೆಯಲಿದೆ. ಮುನಿರಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.
ಇದನ್ನೂ ಓದಿ: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಬೆಂಗಳೂರಿಗೆ ವಾಪಸ್, ವಿಮಾನ ನಿಲ್ದಾಣದಲ್ಲಿ ಬಂಧಿಸಿದ SIT - SIT Arrests Prajwal Revanna