ETV Bharat / state

ಮಂಗಳೂರು ವಿಮಾನ ನಿಲ್ದಾಣದಲ್ಲಿ ಇನ್ಮುಂದೆ ಇರಲ್ಲ ಲೌಡ್ ಸ್ಪೀಕರ್‌ ಘೋಷಣೆ; ಯಾಕಾಗಿ ಈ ತೀರ್ಮಾನ? - Mangaluru Airport - MANGALURU AIRPORT

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೆಲ ಬದಲಾವಣೆ ಮಾಡಲು ಅಲ್ಲಿನ ಆಡಳಿತ ಮಂಡಳಿ ಮುಂದಾಗಿದೆ.

mangaluru-airport-
ಮಂಗಳೂರು ವಿಮಾನ ನಿಲ್ದಾಣದಲ್ಲಿ ಇನ್ಮುಂದೆ ಇರಲ್ಲ ಲೌಡ್ ಸ್ಪೀಕರ್‌ ಘೋಷಣೆ
author img

By ETV Bharat Karnataka Team

Published : May 1, 2024, 10:23 AM IST

ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಈವರೆಗೆ ಪ್ರಯಾಣಿಕರ ಮಾಹಿತಿಗಾಗಿ ಲೌಡ್ ಸ್ಪೀಕರ್‌ಗಳಲ್ಲಿ ಹೊರಡಿಸಲಾಗುತ್ತಿದ್ದ ಘೋಷಣೆಗಳನ್ನು ನಿಲ್ಲಿಸಲು ವಿಮಾನ ನಿಲ್ದಾಣ ಆಡಳಿತ ಮಂಡಳಿ ನಿರ್ಧರಿಸಿದೆ.

ಲೌಡ್ ಸ್ಪೀಕರ್ ಘೋಷಣೆಯಿಂದ ಪ್ರಯಾಣಿಕರಿಗೆ ಕಿರಿಕಿರಿ ಆಗುತ್ತದೆ ಎಂಬ ಅಭಿಪ್ರಾಯದ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣ ಈ ಕ್ರಮಕ್ಕೆ ಮುಂದಾಗಿದೆ. ಇನ್ನು ಮುಂದೆ ವಿಮಾನ ಆಗಮನ, ನಿರ್ಗಮನ, ವಿಳಂಬ ಸಹಿತ ವಿವಿಧ ಮಾಹಿತಿಯನ್ನು ಪ್ರಯಾಣಿಕರು ಏರ್​​ಪೋರ್ಟ್‌ನಲ್ಲಿರುವ ಡಿಸ್‌ಪ್ಲೆ (ಫೈಟ್ ಇನ್ನಾರ್ಮೇಶನ್ ಡಿಸ್‌ಪ್ಲೇ ಸಿಸ್ಟಂ) ಮೂಲಕ ಪಡೆಯಬಹುದಾಗಿದೆ. ವಿಮಾನ ನಿಲ್ದಾಣದ ಒಳಭಾಗ ಮತ್ತು ಹೊರಭಾಗಗಳಲ್ಲಿ ದೊಡ್ಡ ಡಿಸ್​​ಪ್ಲೇ ಇರಿಸಲಾಗಿದೆ.

ನಿಲ್ದಾಣದ ಟರ್ಮಿನಲ್‌ನಲ್ಲಿ 'ಮೇ ಐ ಹೆಲ್ಪ್​​ ಯು' ಡೆಸ್ಕ್ ಅನ್ನು ಸ್ಥಾಪಿಸಲಾಗಿದೆ. ಅಲ್ಲಿ ಸಿಬಂದಿ, ಕಾರ್ಯನಿರ್ವಾಹಕರು ಸಹಾಯಕ್ಕೆ ಇರಲಿದ್ದಾರೆ. ಎಲ್ಲ ಏರ್‌ಲೈನ್ಸ್ ಚೆಕ್ ಇನ್‌ ಕೌಂಟರ್‌ಗಳು, ಬೋರ್ಡಿಂಗ್ ಗೇಟ್‌ಗಳಲ್ಲಿಯೂ ವಿಮಾನದ ಬಗ್ಗೆ ಮಾಹಿತಿ ಪಡೆಯಲು ಅವಕಾಶವಿದೆ.

ತಡೆರಹಿತ ಪ್ರಯಾಣದ ಮಾಹಿತಿಗೆ ಸಹಾಯ, ಬೋರ್ಡಿಂಗ್, ಗೇಟ್ ಬದಲಾವಣೆ, ವಿಮಾನದ ಮರು ವೇಳಾಪಟ್ಟಿ ಮುಂತಾದ ವಿಷಯಗಳು ಏರ್‌ಲೈನ್ಸ್​​ನಿಂದ ಪ್ರಯಾಣಿಕರ ಮೊಬೈಲ್‌ಗೆ ಎಸ್‌ಎಂಎಸ್ ಅಥವಾ ಇ-ಮೇಲ್‌ಗೆ ಸಂದೇಶ ಬರಲಿದೆ.

ಹೆಚ್ಚಿನ ಮಾಹಿತಿಗೆ ಟರ್ಮಿನಲ್ ವ್ಯವಸ್ಥಾಪಕರ ಕಚೇರಿ ಅಥವಾ ಆಯಾ ವಿಮಾನಯಾನ ಸಂಸ್ಥೆಗೂ ಕರೆ ಮಾಡಬಹುದಾಗಿದೆ ಎಂದು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ: ವಾರಾಣಸಿ ಸೇರಿ ದೇಶದ 30 ವಿಮಾನ ನಿಲ್ದಾಣಗಳ ಮೇಲೆ ಬಾಂಬ್ ಬೆದರಿಕೆ: ಭದ್ರತಾ ಸಂಸ್ಥೆಗಳಿಂದ ಹೈ ಅಲರ್ಟ್​ ಘೋಷಣೆ - BOMB THREAT AIRPORT

ETV Bharat Logo

Copyright © 2024 Ushodaya Enterprises Pvt. Ltd., All Rights Reserved.