ETV Bharat / state

ಬಿಜೆಪಿಯವರು ಇನ್ನೂ ನಾಲ್ಕು ದೀಪಾವಳಿ ಕಾಯಬೇಕು, ಅಲ್ಲಿಯವೆರೆಗೆ ಮನೆಯಲ್ಲೇ ದೀಪಾವಳಿ ಮಾಡಿ: ಮಧು ಬಂಗಾರಪ್ಪ ವ್ಯಂಗ್ಯ - Madhu Bangarappa - MADHU BANGARAPPA

ಸದ್ದು ಮಾಡುತ್ತಿರುವ ಮುಡಾ ಹಗರಣ, ವಾಲ್ಮೀಕಿ ಹಗರಣ, ಸಿಎಂ ಬದಲಾವಣೆ ವಿಚಾರಗಳಿಂದಾಗಿ ಈ ದೀಪಾವಳಿ ಬಳಿಕ ಕಾಂಗ್ರೆಸ್​ ಸರ್ಕಾರ ಪತನವಾಗಲಿದೆ ಎಂದು ಬಿಜೆಪಿ ಸರ್ಕಾರ ಆರೋಪಿಸಿದೆ. ಇದಕ್ಕೆ ಪ್ರತಿಕ್ರಿಯಿಸಿರುವ ಸಚಿವ ಮಧುವ ಬಂಗಾರಪ್ಪ ಬಿಜೆಪಿಯವರು ಇದಕ್ಕಾಗಿ ಇನ್ನೂ 4 ದೀಪಾವಳಿವರೆಗೆ ಕಾಯಬೇಕು ಎಂದು ವ್ಯಂಗ್ಯವಾಗಿ ತಿರುಗೇಟು ನೀಡಿದ್ದಾರೆ.

Minister Madhu Bangarappa
ಸಚಿವ ಮಧು ಬಂಗಾರಪ್ಪ (ETV Bharat)
author img

By ETV Bharat Karnataka Team

Published : Sep 11, 2024, 1:02 PM IST

Updated : Sep 11, 2024, 1:21 PM IST

ಬೆಳಗಾವಿ: "ದೀಪಾವಳಿ ನಂತರ ಸರ್ಕಾರ ಪತನ ಆಗುತ್ತದೆ ಎಂಬ ಬಿಜೆಪಿ ನಾಯಕರ ಆರೋಪಕ್ಕೆ ತಿರುಗೇಟು ನೀಡಿರುವ ಶಿಕ್ಷಣ ಸಚಿವ ಮಧು ಬಂಗಾರಪ್ಪ, "ಬಿಜೆಪಿಯವರು ಇನ್ನೂ ನಾಲ್ಕು ದೀಪಾವಳಿ ಕಾಯಬೇಕು. ಅಲ್ಲಿಯವರೆಗೆ ಮನೆಯಲ್ಲಿ ದೀಪಾವಳಿ ಮಾಡೋಕೆ ಹೇಳಿ" ಎಂದು ವ್ಯಂಗ್ಯವಾಡಿದರು.

ಸಚಿವ ಮಧು ಬಂಗಾರಪ್ಪ (ETV Bharat)

ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರಕ್ಕೆ ಬೆಳಗಾವಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, "ಸಿದ್ದರಾಮಯ್ಯ ಸಾಹೇಬ್ರನ್ನು ಇಳಿಸೋಕೆ ಯಾರಿಂದಲೂ ಸಾಧ್ಯವಿಲ್ಲ. ನ್ಯಾಯಾಲಯ ಎನ್ನುವುದು ಒಂದು ವ್ಯವಸ್ಥೆ. ಅದು ತಾನಾಗಿಯೇ ನಡೆದುಕೊಂಡು ಹೋಗುತ್ತದೆ. ಅವರು ಮುಖ್ಯಮಂತ್ರಿಯಾಗಿ ಮುಂದುವರೆಯಬೇಕು ಎನ್ನುವುದು ನಮ್ಮೆಲ್ಲರ ಆಸೆ. ಹಾಗಾಗಿ, ಅವರೇ ಮುಂದುವರಿಯುತ್ತಾರೆ" ಎಂದು ವಿಶ್ವಾಸ ವ್ಯಕ್ತಪಡಿಸಿದರು.

"ದೆಹಲಿ ಸಿಎಂ ಅರವಿಂದ್​ ಕೇಜ್ರಿವಾಲ್, ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರ ಕೇಸ್​ಗಳು ಕೋರ್ಟ್​ನಲ್ಲಿವೆ. ಇವರಿಗೆ ಸಿದ್ದರಾಮಯ್ಯ ಅಷ್ಟೇ ಯಾಕೆ ಕಾಣಿಸುತ್ತಾರೆ" ಎಂದು ಪ್ರಶ್ನಿಸಿದ ಮಧು ಬಂಗಾರಪ್ಪ, "ಇನ್ನು ನಮ್ಮ ತಂದೆಯವರು ಮುಖ್ಯಮಂತ್ರಿ ಆಗಿದ್ದಾಗ ಬೇಕಾದಷ್ಟು ಕೇಸ್​ಗಳನ್ನು ನೋಡಿದ್ದೇವೆ. ಇದರ ಬಗ್ಗೆ ಈಗ ಚರ್ಚೆ ಮಾಡುವ ಅವಶ್ಯಕತೆ ಇಲ್ಲ" ಎಂದರು.

ಸಿಎಂ ರೇಸ್​ನಲ್ಲಿ ಕಾಂಗ್ರೆಸ್ ನಾಯಕರಲ್ಲಿ ತೀವ್ರ ಪೈಪೋಟಿ ಇದೆ ಎಂಬ ಬಿಜೆಪಿ ನಾಯಕರ ಆರೋಪಕ್ಕೆ ಪ್ರತಿಕ್ರಿಯಿಸಿ, "ನಾನು ಅಷ್ಟು ದೊಡ್ಡ ಮನುಷ್ಯ ಅಲ್ಲ. ಅದಕ್ಕೆ ನಾನು ಪ್ರತಿಕ್ರಿಯೆ ಕೊಡಲ್ಲ" ಎಂದು ಸ್ಪಷ್ಟಪಡಿಸಿದರು.

ಬಿಜೆಪಿಗೆ ಸಿದ್ದರಾಮಯ್ಯ ಅವರನ್ನು ಕಂಡರೆ ಭಯಾನಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ, "ಬಿಜೆಪಿ ಅಷ್ಟೇ ಅಲ್ಲಾ, ಜೆಡಿಎಸ್ ಸೇರಿ ಎಲ್ಲ ವಿರೋಧ ಪಕ್ಷದವರಿಗೂ ಭಯ ಇದೆ" ಎಂದು ಕುಟುಕಿದರು.

"ಸಿದ್ದರಾಮಯ್ಯ ನುಡಿದಂತೆ ನಡೆದಿದ್ದಾರೆ. ಒಳ್ಳೆಯವರನ್ನು ಕೆಳಗಿಳಿಸಲು ಕುತಂತ್ರ ಇದ್ದೇ ಇರುತ್ತದೆ. ಇಂಥದರಲ್ಲಿ ಬಿಜೆಪಿಯವರು ನಿಸ್ಸೀಮರು. ಇವತ್ತಿನವರೆಗೂ ಅವರ ಹಣೆಬರಹಕ್ಕೆ ಸ್ವಂತ ಶಕ್ತಿ ಮೇಲೆ ಅಧಿಕಾರಕ್ಕೆ ಬರಲು ಆಗಿಲ್ಲ. ಬಾಂಬೆ ಬಾಯ್ಸ್ ಅಂತಾ ನೀವೇ ಕರೆದಿದ್ದೀರಿ. ಇಂತಹ ಸಂಪ್ರದಾಯ ಬೇಕಾ ನಮಗೆ?" ಎಂದು ಮಾಧ್ಯಮಗಳಿಗೆ ಮರು ಪ್ರಶ್ನಿಸಿದರು.

"ಶಿಕ್ಷಕರಿಗೆ ಪ್ರತಿಭಟನೆ ಮಾಡುವ ಹಕ್ಕು ಇದೆ. ಹಾಗಂತ ಬೇರೆ ಬೇರೆ ಕಾರಣಗಳಿಂದ ಶಾಲೆಗಳಿಗೆ ಚಕ್ಕರ್ ಹಾಕುವ ಶಿಕ್ಷಕರಿಂದ ಮಕ್ಕಳಿಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಶಿಕ್ಷಕರಾದವರು ಶಾಲೆಯಲ್ಲಿ ಮಕ್ಕಳಿಗೆ ಪಾಠ ಮಾಡಬೇಕು. ಅದನ್ನು ಬಿಟ್ಟು ಬೇರೆ ಬೇರೆ ಕೆಲಸ, ಸಂಘಟನೆಯಲ್ಲಿ ಗುರುತಿಸಿಕೊಂಡರೆ ಅಂಥವರ ವಿರುದ್ಧ ಮುಲ್ಲಾಜಿಲ್ಲದೆ ಕ್ರಮ ಜರುಗಿಸಲಾಗುವುದು" ಎಂದು ಎಚ್ಚರಿಕೆ ನೀಡಿದರು.

ಇದನ್ನೂ ಓದಿ: ಜಮ್ಮು ಕಾಶ್ಮೀರ ಸೇರಿ ವಿವಿಧ ರಾಜ್ಯಗಳ ಚುನಾವಣೆ ಬಳಿಕ ಕೇಂದ್ರ ಸರ್ಕಾರ ಪತನ: ಸಂತೋಷ್‌ ಲಾಡ್ - Santosh Lad

Last Updated : Sep 11, 2024, 1:21 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.