ಬೆಂಗಳೂರು : ದೂರು ನೀಡಲು ಬಂದಿದ್ದ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿರುವ ಆರೋಪದಡಿ ಮಧುಗಿರಿ ಉಪವಿಭಾಗದ ಡಿವೈಎಸ್ಪಿ ರಾಮಚಂದ್ರಯ್ಯ ಅವರನ್ನ ಸಸ್ಪೆಂಡ್ ಮಾಡಿ ಪೊಲೀಸ್ ಇಲಾಖೆ ಆದೇಶಿಸಿದೆ.
ಮಹಿಳೆಯೊಂದಿಗೆ ಅಸಭ್ಯ ವರ್ತನೆ ತೋರಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಇದರಿಂದ ಪೊಲೀಸ್ ಇಲಾಖೆಯು ತಲೆತಗ್ಗಿಸುವಂತಾಗಿತ್ತು. ಹೀಗಾಗಿ ನಿವೃತ್ತಿಗೆ ಎರಡು ವರ್ಷವಿದ್ದ ರಾಮಚಂದ್ರಯ್ಯ ಅವರನ್ನ ಅಮಾನತು ಮಾಡಿ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಅಲೋಕ್ ಮೋಹನ್ ಅವರು ಆದೇಶ ಹೊರಡಿಸಿದ್ದಾರೆ.
ಜಮೀನು ವಿಚಾರವಾಗಿ ಮಹಿಳೆಯು ದೂರು ನೀಡಿದ್ದರು. ವಿಚಾರಣೆಗೆ ಎಂದು ಕರೆಯಿಸಿಕೊಂಡ ಡಿವೈಎಸ್ಪಿ ಅವರು ಆಕೆಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದರು. ಕೆಲದಿನಗಳ ಹಿಂದೆಯೇ ಈ ಕೃತ್ಯವೆಸಗಿದ್ದು, ನಿನ್ನೆ ವಿಡಿಯೋ ವೈರಲ್ ಆಗಿತ್ತು. ಸದ್ಯ ಸಸ್ಪೆಂಡ್ ಆಗಿ ಇಲಾಖಾ ವಿಚಾರಣೆಗೆ ಒಳಪಡಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ : ದೂರು ನೀಡಲು ಬಂದ ಮಹಿಳೆ ಮದುವೆಯಾಗುವುದಾಗಿ ನಂಬಿಸಿ ಲೈಂಗಿಕ ದುರ್ಬಳಕೆ ಆರೋಪ: ಇಬ್ಬರು ಪೊಲೀಸ್ ಸಿಬ್ಬಂದಿ ಅಮಾನತು - POLICE SUSPEND