ETV Bharat / state

ಮಡಿಕೇರಿ ಘಾಟ್ ರಸ್ತೆ ದಿಢೀರ್​ ಬಂದ್: ಸಂಕಷ್ಟಕ್ಕೆ ಸಿಲುಕಿದ್ದ ವಾಹನ ಸವಾರರಿಗೆ ನೆರವಾದ ಸ್ಪೀಕರ್ ಖಾದರ್ - madikeri ghat road bandh

ಭಾರೀ ಮಳೆ, ಗುಡ್ಡ ಕುಸಿತದ ಕಾರಣ ಮೈಸೂರು-ಮಾಣಿ ಹೆದ್ದಾರಿಯ ಮಡಿಕೇರಿ ಘಾಟ್ ರಸ್ತೆಯನ್ನು ಜಿಲ್ಲಾಡಳಿತ ಹಠಾತ್ ಬಂದ್ ಮಾಡಿತ್ತು. ಇದನ್ನು ತಿಳಿದು ವಾಹನ ಸಂಚಾರಕ್ಕೆ ಅನುಮಾಡಿಸಿದ ಸ್ಪೀಕರ್ ಯು.ಟಿ.ಖಾದರ್, ಸಂಕಷ್ಟಕ್ಕೆ ಸಿಲುಕಿದ್ದ ನೂರಾರು ಪ್ರಯಾಣಿಕರಿಗೆ ನೆರವಾದರು.

ಮಡಿಕೇರಿ ಘಾಟ್ ರಸ್ತೆ ದಿಢೀರ್​ ಬಂದ್
ಮಡಿಕೇರಿ ಘಾಟ್ ರಸ್ತೆ ದಿಢೀರ್​ ಬಂದ್ (ETV Bharat)
author img

By ETV Bharat Karnataka Team

Published : Jul 19, 2024, 6:40 PM IST

ದಕ್ಷಿಣ ಕನ್ನಡ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಶಿರಾಡಿಘಾಟ್​​ನಲ್ಲಿ ಗುಡ್ಡ ಕುಸಿದ ಪರಿಣಾಮ ಮುನ್ನೆಚ್ಚರಿಕಾ ಕ್ರಮವಾಗಿ ಮೈಸೂರು-ಮಾಣಿ ಹೆದ್ದಾರಿಯ ಮಡಿಕೇರಿ ಘಾಟ್ ಅನ್ನು ರಾತ್ರಿ 8 ಗಂಟೆಗೆ ಯಾವುದೇ ಮುನ್ಸೂಚನೆ ನೀಡದೇ ಕೊಡಗು ಮತ್ತು ದ.ಕ. ಜಿಲ್ಲಾಡಳಿತ ಹಠಾತ್
ಬಂದ್ ಮಾಡಿತ್ತು.

ಮಡಿಕೇರಿ ಜನರಲ್ ಕಾರ್ಯಪ್ಪ ಸರ್ಕಲ್ ಬಳಿ ಮತ್ತು ಘಾಟಿ ಮಧ್ಯೆ ಮದೆನಾಡಿನಲ್ಲಿ ಹಾಗೂ ಸಂಪಾಜೆ ಚೆಕ್ ಪೋಸ್ಟ್ ಬಳಿ ಪೊಲೀಸರು ಬ್ಯಾರಿಕೇಡ್ ಹಾಕಿ ರಸ್ತೆ ಬಂದ್ ಮಾಡಿದ್ದರು. ಯಾವುದೇ ಮುನ್ಸೂಚನೆ ಇಲ್ಲದಿರುವುದರಿಂದ ನೂರಾರು ವಾಹನಗಳು ಅಡಕತ್ತರಿಯಲ್ಲಿ ಸಿಲುಕಿದ್ದವು. ಹಲವಾರು ವಾಹನಗಳಲ್ಲಿದ್ದ ಮಹಿಳೆಯರು, ಮಕ್ಕಳು ಘಾಟ್ ಮಧ್ಯೆ ಮದೆನಾಡು ಮತ್ತು ಸಂಪಾಜೆಯ ಕುಗ್ರಾಮದಲ್ಲಿ ಸಿಲುಕಿದ್ದರು.

ಘಾಟ್ ರಸ್ತೆಯಲ್ಲಿ ಯಾವುದೇ ಅನಾಹುತವಾಗದೇ ಇದ್ದರೂ ಮುನ್ನೆಚ್ಚರಿಕಾ ಕ್ರಮವಾಗಿ ಹಠಾತ್ ರಸ್ತೆ ನಿರ್ಬಂಧ ಮಾಡಲಾಗಿತ್ತು. ಆ ರಸ್ತೆ ಮೂಲಕ ಮಧ್ಯರಾತ್ರಿ ಪ್ರಯಾಣಿಸುತ್ತಿದ್ದ ಮಂಗಳೂರಿನ ಸಾಮಾಜಿಕ ಕಾರ್ಯಕರ್ತ ರಶೀದ್ ವಿಟ್ಲ ಅವರು ಈ ಬಗ್ಗೆ ಸ್ಪೀಕರ್ ಯು.ಟಿ.ಖಾದರ್ ಅವರ ಗಮನ ಸೆಳೆದರು. ರಶೀದ್ ಜೊತೆಗೆ ಅವರ ಸ್ನೇಹಿತ ಅಬೂಬಕರ್ ಪುತ್ತು ಕೂಡಾ ಇದ್ದರು. ಮಧ್ಯರಾತ್ರಿ 12.30 ಕ್ಕೆ ಯು.ಟಿ.ಖಾದರ್ ಅವರಿಗೆ ಪೋನ್ ಮಾಡಲಾಗಿತ್ತು. ತಕ್ಷಣ ಅವರು ಮಂಗಳೂರು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಮತ್ತು ಕೊಡಗು ಎಸ್​ಪಿ ರಾಮರಾಜನ್ ಅವರಿಗೆ ಕರೆ ಮಾಡಿದರಲ್ಲದೇ, ಅವರಿಗೆ ವಸ್ತುಸ್ಥಿತಿಯ ವಿವರಣೆ ನೀಡುವಂತೆ ರಶೀದ್​ಗೆ ತಿಳಿಸಿದರು. ಅದರಂತೆ ರಶೀದ್ ಹಾಗೂ ಅವರ ಸ್ನೇಹಿತ ಜಿಲ್ಲಾಧಿಕಾರಿ ಮತ್ತು ಎಸ್​ಪಿಯವರನ್ನು ಮೊಬೈಲ್ ಮೂಲಕ ಸಂಪರ್ಕಿಸಿ ಮಾಹಿತಿ ನೀಡಿದರು.

ಮಾಹಿತಿ ಕೂಡಲೇ ಕಾರ್ಯಪ್ರವೃತ್ತರಾದ ಉನ್ನತ ಅಧಿಕಾರಿಗಳು ಅತಂತ್ರ ಸ್ಥಿತಿಯಲ್ಲಿದ್ದ ಎಲ್ಲ ವಾಹನಗಳನ್ನು ರಾತ್ರಿ 1:30ಕ್ಕೆ ಪೊಲೀಸ್ ಇಲಾಖೆಯ ಹೈವೇ ಪ್ಯಾಟ್ರೋಲ್ ಗಳ ಮೂಲಕ ಪೊಲೀಸ್ ಎಸ್ಕಾರ್ಟ್ ಕಣ್ಗಾವಲಲ್ಲಿ ಸುರಕ್ಷಿತವಾಗಿ ಮದೆನಾಡು ಪ್ರದೇಶದಿಂದ ಸಂಪಾಜೆಗೆ ತಲುಪಿಸುವ ವ್ಯವಸ್ಥೆ ಮಾಡಿದರು. ಸಂಪಾಜೆಯಿಂದ ಮಡಿಕೇರಿ ಕಡೆ ಹೋಗಬೇಕಾಗಿದ್ದ ವಾಹನಗಳನ್ನು ಅದೇ ಪೊಲೀಸ್ ಎಸ್ಕಾರ್ಟ್ ನಲ್ಲಿ ಮಡಿಕೇರಿಗೆ ಸುರಕ್ಷಿತವಾಗಿ ತಲುಪಿಸಿದರು. ಇದರಿಂದಾಗಿ ನೂರಾರು ವಾಹನಗಳಲ್ಲಿದ್ದ ಕುಟುಂಬಿಕರು ನಿಟ್ಟುಸಿರು ಬಿಡುವಂತಾಯಿತು.

ಈ ಬಗ್ಗೆ ಪ್ರತಿಕ್ರೀಯಿಸಿರುವ ರಶೀದ್ ವಿಟ್ಲ, " ಐದು ತಾಸುಗಳಿಂದ ಮಧ್ಯರಾತ್ರಿ ಅರಣ್ಯದ ನಡುವೆ ಕಾದು ನಿರಾಶರಾಗಿ ಕಾರಿನಲ್ಲಿ ಬಂಧಿಯಾಗಿದ್ದ ನೂರಾರು ಜನರ ಸಮಸ್ಯೆಗಳಿಗೆ ಪರಿಹಾರ ದೊರಕಿತು. ಜನ ಸಾಮಾನ್ಯರ ಕೂಗಿಗೆ ತಳಮಟ್ಟದ ಅಧಿಕಾರಿಗಳೂ ಫೋನ್ ಎತ್ತದ ಈ ಕಾಲದಲ್ಲಿ ರಾಜಕಾರಣಿ ಮತ್ತು ಉನ್ನತ ಅಧಿಕಾರಿಗಳು ಹೇಗೆ ಸ್ಪಂದಿಸಬೇಕು ಎಂದು ತಡರಾತ್ರಿಯೂ ಫೋನ್ ಕರೆ ಸ್ವೀಕರಿಸಿ ತಕ್ಷಣ ಸ್ಪಂದಿಸಿರುವ ವಿಧಾನಸಭಾ ಸ್ಪೀಕರ್ ಯು.ಟಿ.ಖಾದರ್, ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಮತ್ತು ಕೊಡಗು ಎಸ್ಪಿ ರಾಮರಾಜನ್ ಹಾಗೂ ಕೊಡಗು ಪೊಲೀಸರು ಇತರರಿಗೆ ಮಾದರಿಯಾಗಿ ತೋರಿಸಿಕೊಟ್ಟಿದ್ದಾರೆ" ಎಂದು‌ ತಿಳಿಸಿದ್ದಾರೆ.

ಇದನ್ನೂ ಓದಿ: ಕಪಿಲಾ ನದಿ ಪ್ರವಾಹ: ದೇವಾಲಯ, ಮನೆಗಳು ಮುಳುಗಡೆ, ಕೇರಳ - ತಮಿಳುನಾಡು ರಸ್ತೆ ಬಂದ್ - Kapila River Flood

ETV Bharat Logo

Copyright © 2024 Ushodaya Enterprises Pvt. Ltd., All Rights Reserved.