ETV Bharat / state

ಮುನಿರತ್ನ ವಿರುದ್ಧದ ಅತ್ಯಾಚಾರ ಪ್ರಕರಣ: ವಿಕಾಸಸೌಧಕ್ಕೆ ಸಂತ್ರಸ್ತೆಯ ಕರೆತಂದು ಸ್ಥಳ ಮಹಜರು ನಡೆಸಿದ SIT - MLA MUNIRATHNA RAPE CASE

ಬಿಜೆಪಿ ಶಾಸಕ ಮುನಿರತ್ನ ವಿರುದ್ಧದ ಅತ್ಯಾಚಾರ ಪ್ರಕರಣದ ಸಂತ್ರಸ್ತೆಯನ್ನು ಗುರುವಾರ ವಿಕಾಸಸೌಧಕ್ಕೆ ಕರೆದೊಯ್ದ ಎಸ್‌ಐಟಿ ಅಧಿಕಾರಿಗಳು ಸ್ಥಳ ಮಹಜರು ನಡೆಸಿದರು.

ಮುನಿರತ್ನ ವಿರುದ್ಧದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ವಿಕಾಸ ಸೌಧದಲ್ಲಿ ಸ್ಥಳ ಮಹಜರು.
ಮುನಿರತ್ನ (IANS)
author img

By ETV Bharat Karnataka Team

Published : Nov 8, 2024, 9:05 AM IST

ಬೆಂಗಳೂರು: ಆರ್.ಆರ್​.ನಗರದ ಬಿಜೆಪಿ ಶಾಸಕ ಮುನಿರತ್ನ ವಿರುದ್ಧದ ಅತ್ಯಾಚಾರ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ದಳ (ಎಸ್‌ಐಟಿ)ದ ಅಧಿಕಾರಿಗಳು ಗುರುವಾರ ಸಂತ್ರಸ್ತೆಯನ್ನು ವಿಕಾಸಸೌಧಕ್ಕೆ ಕರೆದೊಯ್ದು ಸ್ಥಳ ಮಹಜರು ಮಾಡಿದರು.

ಬೆಳಗ್ಗೆೆ 11 ಗಂಟೆ ಸುಮಾರಿಗೆ ವಿಕಾಸಸೌಧಕ್ಕೆ ಸಂತ್ರಸ್ತೆಯೊಂದಿಗೆ ಆಗಮಿಸಿದ ಎಸ್‌ಐಟಿ, ಈ ಹಿಂದೆ ತೋಟಗಾರಿಕಾ ಸಚಿವರಾಗಿದ್ದ ಸಂದರ್ಭದಲ್ಲಿ ಮುನಿರತ್ನಗೆ ನೀಡಿದ್ದ ಮೂರನೇ ಮಹಡಿಯ 334ನೇ ಕೋಣೆಗೆ ಕರೆದೊಯ್ದು ಮಹಜರು ನಡೆಸಿದರು. ಯಾವ ಸ್ಥಳದಲ್ಲಿ ಮುನಿರತ್ನ ಲೈಂಗಿಕ ದೌರ್ಜನ್ಯ ಎಸಗಿದರು ಎಂಬುದೂ ಸೇರಿದಂತೆ ವಿವಿಧ ಪ್ರಶ್ನೆಗಳನ್ನು ಕೇಳಿ, ಸಂತ್ರಸ್ತೆಯಿಂದ ಲಿಖಿತ ಮತ್ತು ಮೌಖಿಕ ಹೇಳಿಕೆ ಪಡೆದುಕೊಂಡರು. ಈ ಪ್ರಕ್ರಿಯೆಯನ್ನು ವಿಡಿಯೋ ಮಾಡಿಕೊಳ್ಳಲಾಗಿದೆ.

ಮಧ್ಯಾಹ್ನ 1.30ರವರೆಗೆ ಕೋಣೆಯಲ್ಲೇ ಸ್ಥಳ ಮಹಜರು ನಡೆಸಿದ ಅಧಿಕಾರಿಗಳು, ಬಳಿಕ ಸಿಐಡಿ ಕಚೇರಿಗೆ ಕರೆದೊಯ್ದು ವಿಚಾರಣೆ ನಡೆಸಿ ಕಳುಹಿಸಿಕೊಟ್ಟಿದ್ದಾರೆ. ಈ ಹಿಂದೆ ಸಂತ್ರಸ್ತೆ ಕಗ್ಗಲಿಪುರ ಠಾಣೆಯಲ್ಲಿ ದೂರು ನೀಡುವಾಗ, ಮುನಿರತ್ನ ಸಚಿವರಾಗಿದ್ದಾಗ ವಿಕಾಸಸೌಧದಲ್ಲಿ ನೀಡಲಾಗಿದ್ದ ಅವರ ಕೊಠಡಿಯಲ್ಲೂ ನನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದರು. ಜೊತೆಗೆ ಇಲ್ಲಿಂದಲೇ ವಿಡಿಯೋ ಕಾಲ್ ಮಾಡಿ ನಗ್ನವಾಗುವಂತೆ ಪೀಡಿಸುತ್ತಿದ್ದರು ಎಂದು ಆರೋಪಿಸಿದ್ದರು. ಈ ಹಿನ್ನೆಲೆಯಲ್ಲಿ ಸಂತ್ರಸ್ತೆಯನ್ನು ಕರೆತಂದು ಮಹಜರು ಮಾಡಲಾಗಿದೆ ಎಂದು ಎಸ್‌ಐಟಿ ಮೂಲಗಳು ತಿಳಿಸಿವೆ.

ಸೆ.18 ರಂದು ಸಂತ್ರಸ್ತೆ ನೀಡಿದ ದೂರಿನ ಅನ್ವಯ ಕಗ್ಗಲಿಪುರ ಠಾಣೆ ಪೊಲೀಸರು ಸೆ.21ರಂದು ಮುನಿರತ್ನ ಅವರನ್ನು ಬಂಧಿಸಿದ್ದರು. ಬಳಿಕ ಆರೋಪಿ ಹಾಗೂ ಸಂತ್ರಸ್ತೆಯನ್ನು ಕರೆದೊಯ್ದು ಸ್ಥಳ ಮಹಜರು ಮಾಡಿಸಿದ್ದರು. ಮೊಬೈಲ್‌ಗಳನ್ನು ಜಪ್ತಿ ಮಾಡಿ, ವಿಧಿವಿಜ್ಞಾನ ಪ್ರಯೋಗಾಲಯಕ್ಕೂ ಕಳುಹಿಸಿದ್ದರು. ಮುನಿರತ್ನರನ್ನು ವೈದ್ಯಕೀಯ ಪರೀಕ್ಷೆಗೊಳಪಡಿಸಿದ್ದರು.

20 ದಿನಗಳಲ್ಲಿ ಕೋರ್ಟ್‌ಗೆ ದೋಷಾರೋಪ ಪಟ್ಟಿ: ಇದೀಗ ವಿಧಿವಿಜ್ಞಾನ ಪ್ರಯೋಗಾಲಯದ ವರದಿಗಳು ಹಾಗೂ ವೈದ್ಯಕೀಯ ವರದಿಗಳು ತನಿಖಾ ತಂಡದ ಕೈ ಸೇರಿವೆ. ಮುನಿರತ್ನ ಮತ್ತು ತಂಡ ಯಾವ ರೀತಿ ಹನಿಟ್ರ್ಯಾಪ್​ ಮಾಡುತ್ತಿದ್ದರು, ಅದಕ್ಕಾಗಿ ಯಾವ ಕೋಣೆಯಲ್ಲಿ, ಯಾವ ಭಾಗದಲ್ಲಿ ರಹಸ್ಯ ಕ್ಯಾಮೆರಾ ಇಡುತ್ತಿದ್ದರು ಎಂಬುದೂ ಸೇರಿದಂತೆ ಎಸ್ಐಟಿ ಸಾಕಷ್ಟು ಮಾಹಿತಿ ಪಡೆದುಕೊಂಡಿದೆ. ಇದೀಗ ಭಾಗಶಃ ತನಿಖೆ ಪೂರ್ಣಗೊಳಿಸಿರುವ ಎಸ್‌ಐಟಿ ಅಧಿಕಾರಿಗಳು ಮುಂದಿನ 20 ದಿನಗಳಲ್ಲಿ ಕೋರ್ಟ್‌ಗೆ ದೋಷಾರೋಪ ಪಟ್ಟಿ ಸಲ್ಲಿಸಲಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.

ಇದನ್ನೂ ಓದಿ: ಅತ್ಯಾಚಾರ ಆರೋಪ ಪ್ರಕರಣ: ಬಿಜೆಪಿ ಶಾಸಕ ಮುನಿರತ್ನಗೆ ಜಾಮೀನು ಮಂಜೂರು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.