ETV Bharat / state

ವೇಣೂರು ಭಗವಾನ್ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕಕ್ಕೆ ಚಾಲನೆ

ವೇಣೂರು ಭಗವಾನ್ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕ ಸಮಾರಂಭಕ್ಕೆ ಗುರುವಾರ ಸಂಜೆ ಚಾಲನೆ ನೀಡಲಾಗಿದೆ.

Mahamastakabhishek of Bhagwan Bahubali in Venur
ವೇಣೂರು ಭಗವಾನ್ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕಕ್ಕೆ ಚಾಲನೆ
author img

By ETV Bharat Karnataka Team

Published : Feb 22, 2024, 11:04 PM IST

ವೇಣೂರು ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕ

ಬೆಳ್ತಂಗಡಿ: ವೇಣೂರು ಭಗವಾನ್ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕವು ಇಂದು ಅದ್ಧೂರಿಯಾಗಿ ಆರಂಭವಾಗಿದೆ. ಇಂದಿನಿಂದ ಮಾರ್ಚ್​ 1ರ ವರೆಗೆ ಈ ಮಹೋತ್ಸವ ನಡೆಯಲಿದೆ. ಇದು ಶತಮಾನದ 3ನೇ ಮಹಾಮಸ್ತಕಾಭಿಷೇಕವಾಗಿದೆ.

ಮಾ.1ರವರೆಗೂ ಪ್ರತಿದಿನ ಸಂಜೆ ಗಂಟೆ 6:45 ರಿಂದ ಬಾಹುಬಲಿ ಸ್ವಾಮಿಗೆ ಮಹಾಮಸ್ತಕಾಭಿಷೇಕ ನೆರವೇರಲಿದೆ. ಜಲ, ಸೀಯಾಳ, ಹಾಲು, ಇಕ್ಷುರಸ, ಕಲ್ಕರಸ, ಅರಿಶಿಣ ಹುಡಿ, ಕಷಾಯ, ಗಂಧ, ಕೇಸರಿ, ಚಂದನ, ಅಷ್ಟಗಂಧ ಮೊದಲಾದ ದ್ರವ್ಯಗಳ ಅಭಿಷೇಕದ ಬಳಿಕ ಪುಷ್ಪವೃಷ್ಠಿ ಜರುಗಲಿದೆ. ಇಂದು ಸಂಜೆ ನಡೆದ ಸಮಾರಂಭದಲ್ಲಿ ಮಹಾಮಸ್ತಕಾಭಿಷೇಕ ಮಹೋತ್ಸವದ ಕಾರ್ಯಕ್ರಮಗಳ ಉದ್ಘಾಟನೆಯನ್ನು ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ನೆರವೇರಿಸಿದರು.

ಕಾರ್ಯಕ್ರಮದಲ್ಲಿ 108 ಶ್ರೀಅಮೋಘಕೀರ್ತಿ ಮಹಾರಾಜರು ಹಾಗೂ 108 ಶ್ರೀ ಅಮರಕೀರ್ತಿ ಮಹಾರಾಜರು. ಡಾ.ಸ್ವಸ್ತಿಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿ, ಹಾರಿಕಾ ಮಾತಾಜಿ, ಕುಲಿಕಾ ಮಾತಾಜಿ ಪಾವನ ಸಾನ್ನಿಧ್ಯ ವಹಿಸಿ, ಆಶೀರ್ವದಿಸಿದರು. ಅಳದಂಗಡಿ ಅರಮನೆಯ ಸ್ಥಾಪಕ ವಂಶಿಯ ಅರಸರು ಮತ್ತು ಕಾರ್ಯಾಧ್ಯಕ್ಷರು ತಿಮ್ಮಣ್ಣರಸರಾದ ಡಾ. ಪದ್ಮಪ್ರಸಾದ್ ಅಜಿಲರು ಗೌರವ ಉಪಸ್ಥಿತರಿದ್ದು ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು.

ಮುಖ್ಯ ಅತಿಥಿಗಳಾಗಿ ಮಾಜಿ ಸಚಿವ ಕೆ. ಅಭಯಚಂದ್ರ ಜೈನ್, ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ವೇಣೂರು ಗ್ರಾ.ಪಂ. ಅಧ್ಯಕ್ಷ ನೇಮಯ್ಯ ಕುಲಾಲ್‌, ಮಹಾಮಸ್ತಕಾಭಿಷೇಕ ಸಮಿತಿ ಪ್ರಧಾನ ಸಂಚಾಲಕ ಡಿ.ಹರ್ಷೇಂದ್ರಕುಮಾ‌ರ್ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಕುಮಾ‌ರ್ ಇಂದ್ರ, ಕೋಶಾಧಿಕಾರಿ ಜಯರಾಜ್ ಕಂಬಳಿ ಉಪಸ್ಥಿತರಿದ್ದರು.

ಮಹಾಮಸ್ತಕಾಭಿಷೇಕ ನಿಮಿತ್ತ ನಿತ್ಯ ಸುಮಾರು 20 ಸಾವಿರ ಭಕ್ತರ ಊಟೋಪಚಾರಕ್ಕೆ ವ್ಯವಸ್ಥೆ ಮಾಡಲಾಗಿದೆ. ಜೊತೆಗೆ ಹೊರ ಭಾಗಗಳಿಂದ ಆಗಮಿಸುವ ಜನರಿಗೆ ವಸತಿ ವ್ಯವಸ್ಥೆ ಮಾಡಲಾಗಿದೆ. ಮೊದಲ ನಾಲ್ಕು ದಿನ 108 ಕಲಶ, ನಂತರದ ಮೂರು ದಿನ 216 ಕಲಶ, 8ನೇ ದಿನ 504 ಕಲಶಗಳಿಂದ ಮಹಾಮಸ್ತಕಾಭಿಷೇಕ ಸೇವಾ ಕರ್ತೃಗಳಿಂದ ನಡೆಯಲಿದ್ದು, 9ನೇ ದಿನ 1008 ಕಲಶಗಳೊಂದಿಗೆ ಮಹಾಮಸ್ತಕಾಭಿಷೇಕ ನೆರವೇರಲಿದೆ.

ಇದನ್ನೂ ಓದಿ: ಮೈಸೂರು: ಗೊಮ್ಮಟಗಿರಿಯ ಬಾಹುಬಲಿಗೆ ಮಹಾಮಸ್ತಕಾಭಿಷೇಕ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.