ETV Bharat / state

ಮೈಲಾರಲಿಂಗೇಶ್ವರ ಜಾತ್ರೆ; ಫೆ. 5 ರಿಂದ ಭದ್ರಾ ಜಲಾಶಯದಿಂದ ತುಂಗಭದ್ರಾ ನದಿಗೆ ನೀರು - MAILARLINGESHWAR JATHRE

ನೀರು ಬಿಡುವ ಅವಧಿಯಲ್ಲಿ ಅವಧಿಯಲ್ಲಿ ನದಿಯಲ್ಲಿ ಸಾರ್ವಜನಿಕರು ಮತ್ತು ರೈತರು ತಿರುಗಾಡುವುದು, ದನ ಕರುಗಳನ್ನು ಮೇಯಿಸುವುದು ಮತ್ತು ತೋಟಗಾರಿಕೆಗೆ ಸಂಬಂಧಿಸಿದ ಕೆಲಸ ಮಾಡುವುದು ಇತ್ಯಾದಿಗಳನ್ನು ನಿಷೇಧಿಸಲಾಗಿದೆ.

Bhadra Reservoir
ಭದ್ರಾ ಜಲಾಶಯ (ETV Bharat)
author img

By ETV Bharat Karnataka Team

Published : Feb 2, 2025, 6:23 PM IST

ಶಿವಮೊಗ್ಗ: ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಮೈಲಾರ ಗ್ರಾಮದ ಶ್ರೀ ಮೈಲಾರಲಿಂಗೇಶ್ವರ ದೇವರ 2024-25ನೇ ಸಾಲಿನ ಜಾತ್ರೆ ಮತ್ತು ಕಾರ್ಣಿಕೋತ್ಸವ ಇದೇ ತಿಂಗಳಲ್ಲಿ ಜರುಗಲಿದೆ. ಈ ಪ್ರಯುಕ್ತ ಭದ್ರಾ ಜಲಾಶಯದಿಂದ ತುಂಗ-ಭದ್ರಾ ನದಿಗೆ ಫೆಬ್ರವರಿ 5 ರಿಂದ 11ರ ವರೆಗೆ 5,800 ಕ್ಯೂಸೆಕ್ ನೀರನ್ನು ಹರಿಸಲು ಆದೇಶಿಸಲಾಗಿದೆ.

ಪ್ರಾದೇಶಿಕ ಆಯುಕ್ತರ ಆದೇಶದನ್ವಯ ಫೆಬ್ರವರಿ 5ರ ರಾತ್ರಿ 100 ಕ್ಯೂಸೆಕ್​ ಮತ್ತು ಫೆಬ್ರವರಿ 6 ರಿಂದ ಫೆಬ್ರವರಿ 11ರ ವರೆಗೆ ಪ್ರತಿದಿನ 800 ಕ್ಯೂಸೆಕ್​ನಂತೆ ಒಟ್ಟು 5,800 ಕ್ಯೂಸೆಕ್ ಪ್ರಮಾಣದ ನೀರನ್ನು ಭದ್ರಾ ನದಿಗೆ ಹರಿಸಲಾಗುತ್ತಿದೆ.

ಮೇಲೆ ತಿಳಿಸಿದ ಅವಧಿಯಲ್ಲಿ ನದಿಯಲ್ಲಿ ಸಾರ್ವಜನಿಕರು ಮತ್ತು ರೈತರು ತಿರುಗಾಡುವುದು, ದನ ಕರುಗಳನ್ನು ಮೇಯಿಸುವುದು ಮತ್ತು ತೋಟಗಾರಿಕೆಗೆ ಸಂಬಂಧಿಸಿದ ಕೆಲಸ ಮಾಡುವುದು ಇತ್ಯಾದಿಗಳನ್ನು ನಿಷೇಧಿಸಲಾಗಿದೆ. ಸಾರ್ವಜನಿಕರು ಮತ್ತು ರೈತರು ನದಿ ದಂಡೆಯಲ್ಲಿ ಪಂಪ್ ಸೆಟ್ ಅಳವಡಿಸುವುದು ಮತ್ತು ಅನಧಿಕೃತವಾಗಿ ನೀರೆತ್ತುವುದನ್ನು ನಿಷೇಧಿಸಲಾಗಿದೆ ಎಂದು ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿ ಸದಸ್ಯ ಕಾರ್ಯದರ್ಶಿ ಹಾಗೂ ಕರ್ನಾಟಕ ನೀರಾವರಿ ನಿಗಮ ಭದ್ರಾ ಯೋಜನಾ ವೃತ್ತದ ಅಧೀಕ್ಷಕ ಅಭಿಯಂತರ ಆರ್. ರವಿಚಂದ್ರ ತಿಳಿಸಿದ್ದಾರೆ.

ಇದನ್ನೂ ಓದಿ: ಎಡದಂಡೆಗೆ ಇಂದಿನಿಂದ, ಬಲದಂಡೆಗೆ ಜ.8 ರಿಂದ ನೀರು: ಕಾಡಾ ಅಧ್ಯಕ್ಷ ಡಾ.ಅಂಶುಮಂತ್

ETV Bharat Logo

Copyright © 2025 Ushodaya Enterprises Pvt. Ltd., All Rights Reserved.