ETV Bharat / state

ಹಾಸನ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಭೂಪ - SNAKE BITE CASE

ವ್ಯಕ್ತಿಯೊಬ್ಬ ತನಗೆ ಕಚ್ಚಿದ‌ ಹಾವನ್ನು ಪ್ಲಾಸ್ಟಿಕ್ ಕವರಿನಲ್ಲಿ ಹಾಕಿಕೊಂಡು ಆಸ್ಪತ್ರೆಗೆ ಆಗಮಿಸಿ ವೈದ್ಯರು ಬೆಚ್ಚಿ ಬೀಳುವಂತೆ ಮಾಡಿದ್ದಾನೆ.

MAN BROUGHT TO HOSPITAL WITH SNAKE
ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಭೂಪ (ETV Bharat)
author img

By ETV Bharat Karnataka Team

Published : 6 hours ago

ಹಾಸನ: ಹಾವಿನಿಂದ ಕಚ್ಚಿಸಿಕೊಂಡ ವ್ಯಕ್ತಿಯೊಬ್ಬ, ಅದನ್ನು ಹಿಡಿದುಕೊಂಡು ಗಾಬರಿಯಲ್ಲಿ ಆಸ್ಪತ್ರೆಗೆ ಧಾವಿಸಿರುವ ಘಟನೆ ಜಿಲ್ಲೆಯ ಬೇಲೂರು ತಾಲೂಕಿನ ಹಾರೋಹಳ್ಳಿ ಬಳಿ ಗುರುವಾರ ನಡೆದಿದೆ.‌ ಹಾವೇರಿಯ ರೈತ ಮುತ್ತು (40) ಹಾವಿನೊಟ್ಟಿಗೆ ಆಸ್ಪತ್ರೆಗೆ ಬಂದವರು.

ಹೊಲದಲ್ಲಿ ಮೆಕ್ಕೆಜೋಳ ಕಟಾವು ಮಾಡುವ ವೇಳೆ ಮುತ್ತುಗೆ ಕೊಳಕು ಮಂಡಲ ಹಾವು ಕಚ್ಚಿದ್ದು, ಆಸ್ಪತ್ರೆಗೆ ಹಾವಿನ ಜೊತೆ ಬರುವ ಮೂಲಕ ಆಶ್ಚರ್ಯ ಮೂಡಿಸಿದ್ದಾನೆ. ತನಗೆ ಕಚ್ಚಿದ ಹಾವನ್ನು ಹಿಡಿದು ಪ್ಲಾಸ್ಟಿಕ್ ಕವರ್‌ನಲ್ಲಿ ಹಾಕಿಕೊಂಡು ಬೇಲೂರು ತಾಲೂಕು ಆಸ್ಪತ್ರೆಗೆ ಆಗಮಿಸಿದನ್ನು ಕಂಡ ಆಸ್ಪತ್ರೆ ಸಿಬ್ಬಂದಿ ಕೂಡ ಬೆಚ್ಚಿ ಬಿದ್ದಿದ್ದಾರೆ.

ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಭೂಪ (ETV Bharat)

ಆಸ್ಪತ್ರೆಗೆ ಬಂದ ತಕ್ಷಿಣ ಆತನಿಗೆ ಪ್ರಥಮ ಚಿಕಿತ್ಸೆ ನೀಡುವ ಮೂಲಕ ಹಾವಿನ ವಿಷ ಹೊರ ತೆಗೆಯಲಾಯಿತು. ಸ್ಥಳೀಯ ಸ್ನೇಕ್ ರಕ್ಷಕರ ಸಹಾಯದಿಂದ ಹಾವನ್ನು ಸುರಕ್ಷಿತ ಸ್ಥಳಕ್ಕೆ ಬಿಡಲಾಯಿತು ಎಂದು ಆಸ್ಪತ್ರೆ ಸಿಬ್ಬಂದಿ ಮಾಹಿತಿ ನೀಡಿದ್ದಾರೆ. ಆಸ್ಪತ್ರೆ ಸಿಬ್ಬಂದಿಯ ಮಾನವೀಯತೆಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.

Man Came To Hospital With Bitten Snake In Hassan
ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ವ್ಯಕ್ತಿ (ETV Bharat)

ಇದನ್ನೂ ಓದಿ: ಬೆಳಗಾವಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಭೂಪ - Snake Bite - SNAKE BITE

ETV Bharat Logo

Copyright © 2024 Ushodaya Enterprises Pvt. Ltd., All Rights Reserved.