ETV Bharat / state

ಮಂಗಳೂರು: ಪತ್ನಿ, ಮಗು ಕೊಂದು ವ್ಯಕ್ತಿ ಆತ್ಮಹತ್ಯೆ - SUICIDE AFTER KILLING WIFE CHILD

ವ್ಯಕ್ತಿಯೋರ್ವ ತನ್ನ ಪತ್ನಿ ಹಾಗೂ ಮಗುವನ್ನು ಕೊಲೆ ಮಾಡಿದ ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ನಡೆದಿದೆ.

suicide
ಮುಲ್ಕಿ ಪೊಲೀಸ್ ಠಾಣೆ (ETV Bharat)
author img

By ETV Bharat Karnataka Team

Published : Nov 9, 2024, 8:51 PM IST

ಮಂಗಳೂರು: ಪತ್ನಿ ಹಾಗೂ ಮಗುವನ್ನು ಹತ್ಯೆ ಮಾಡಿರುವ ವ್ಯಕ್ತಿ ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಹೊರವಲಯದ ಮುಲ್ಕಿ ಸಮೀಪದ ಪಕ್ಷಿಕೆರೆಯಲ್ಲಿ ನಡೆದಿದೆ.

ಪಕ್ಷಿಕೆರೆಯ ಜಲಜಾಕ್ಷಿ ರೆಸಿಡೆನ್ಸಿ ನಿವಾಸಿ ಕಾರ್ತಿಕ್ ಭಟ್ (32) ಆತ್ಮಹತ್ಯೆ ಮಾಡಿಕೊಂಡವರು. ಅವರ ಪತ್ನಿ ಪ್ರಿಯಾಂಕಾ (28) ಹಾಗೂ ಹೃದಯ್ (4) ಹತ್ಯೆಯಾದವರು. ಆರೋಪಿ ಕಾರ್ತಿಕ್ ಪಕ್ಷಿಕೆರೆಯಲ್ಲಿನ ತನ್ನ ಮನೆಯಲ್ಲಿ ಪತ್ನಿ ಮತ್ತು ಮಗುವನ್ನು ಕೊಲೆ ಮಾಡಿ, ತದನಂತರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಅನುಪಮ್​ ಅಗರ್ವಾಲ್​ ಮಾಹಿತಿ ನೀಡಿದ್ದಾರೆ

ಶುಕ್ರವಾರ ಮಧ್ಯಾಹ್ನ ಮುಲ್ಕಿಯ ಬೆಳಾಯರುನಲ್ಲಿ ಮೃತದೇಹ ಪತ್ತೆಯಾಗಿತ್ತು. ಪೊಲೀಸರು ಈ ಬಗ್ಗೆ ಪರಿಶೀಲನೆ ನಡೆಸಿದಾಗ ಆತ್ಮಹತ್ಯೆ ಮಾಡಿಕೊಂಡವರು ಪಕ್ಷಿಕೆರೆಯ ಕಾರ್ತಿಕ್ ಭಟ್ ಎಂಬುದು ತಿಳಿದಿತ್ತು.‌ ಮನೆಗೆ ಬಂದು ಪರಿಶೀಲಿಸಿದಾಗ ಅವರ ಪತ್ನಿ ಹಾಗೂ ಮಗು ಹತ್ಯೆಯಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ಪೊಲೀಸ್ ಆಯುಕ್ತ ತಿಳಿಸಿದ್ದಾರೆ.

ಸ್ಥಳಕ್ಕೆ ಮಂಗಳೂರು ಎಸಿಪಿ ಶ್ರೀಕಾಂತ್, ಮುಲ್ಕಿ ಪೊಲೀಸ್‌ ಇನ್ಸ್‌ಪೆಕ್ಟ‌ರ್ ವಿದ್ಯಾಧರ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಮುಲ್ಕಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಇದನ್ನೂ ಓದಿ: ಬಾಲಕರ ಮೇಲೆಯೂ ಲೈಂಗಿಕ ದೌರ್ಜನ್ಯ ಪ್ರಕರಣಗಳ ಸಂಖ್ಯೆ ಹೆಚ್ಚಳ; ನಾಲ್ಕು ವರ್ಷದಲ್ಲಿ ದಾಖಲಾದ ಪ್ರಕರಣಗಳೆಷ್ಟು?

ETV Bharat Logo

Copyright © 2024 Ushodaya Enterprises Pvt. Ltd., All Rights Reserved.