ETV Bharat / state

ಇಸ್ಪೀಟ್ ಅಡ್ಡೆ ಮೇಲೆ ಪೊಲೀಸ್ ದಾಳಿ: ತಪ್ಪಿಸಿಕೊಳ್ಳುವ ಭರದಲ್ಲಿ ಕೆರೆಗೆ ಬಿದ್ದು ವ್ಯಕ್ತಿ ಸಾವು - Man Falls To Lake

author img

By ETV Bharat Karnataka Team

Published : Jun 12, 2024, 8:04 PM IST

Updated : Jun 12, 2024, 9:52 PM IST

ಇಸ್ಪೀಟ್ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿದ್ದು, ವ್ಯಕ್ತಿಯೋರ್ವ ತಪ್ಪಿಸಿಕೊಳ್ಳುವ ಭರದಲ್ಲಿ ಕೆರೆಗೆ ಬಿದ್ದು ಮೃತಪಟ್ಟಿರುವ ಘಟನೆ ಕೋಲಾರದಲ್ಲಿ ನಡೆದಿದೆ.

ಕೆರೆಯಲ್ಲಿ ಬಿದ್ದು ವ್ಯಕ್ತಿ ಸಾವು
ಕೆರೆಗೆ ಬಿದ್ದು ಮೃತಪಟ್ಟ ವ್ಯಕ್ತಿ (ETV Bharat)
ಎಸ್​ಪಿ ನಾರಾಯಣ (ETV Bharat)

ಕೋಲಾರ: ಇಸ್ಪೀಟ್ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿದ ವೇಳೆ ವ್ಯಕ್ತಿಯೋರ್ವ ತಪ್ಪಿಸಿಕೊಳ್ಳುವ ಆತುರದಲ್ಲಿ ಕೆರೆಗೆ ಬಿದ್ದು ಸಾವನ್ನಪ್ಪಿದ ಘಟನೆ ಶ್ರೀನಿವಾಪುರ ತಾಲೂಕಿನ ಗುಡಸವಾರಪಲ್ಲಿ ಗ್ರಾಮದಲ್ಲಿ ನಡೆದಿದೆ. ಇದೇ ಗ್ರಾಮದ ನಿವಾಸಿ ನರಸಿಂಹ (45) ಸಾವನ್ನಪ್ಪಿದ ವ್ಯಕ್ತಿ ಎಂದು ಗುರುತಿಸಲಾಗಿದೆ.

ಈ ಕುರಿತು ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ನಾರಾಯಣ ಮಾತನಾಡಿ, "ಕೊಂಡರೆಡ್ಡಿ ಚೆರುವು ಬಳಿ ಇಸ್ಪೀಟ್ ಆಡುತ್ತಿದ್ದಾರೆ ಎಂಬ ಮಾಹಿತಿ ಪೊಲೀಸರಿಗೆ ಸಿಕ್ಕಿತ್ತು. ಪೊಲೀಸ್ ಸಿಬ್ಬಂದಿ ಪರಿಶೀಲನೆಗೆ ತೆರಳಿದ್ದಾಗ ಸುಮಾರು 12 ಮಂದಿ ಇಸ್ಪೀಟ್ ಆಡುತ್ತಿದ್ದರು. ಪೊಲೀಸರನ್ನು ಕಂಡ ತಕ್ಷಣ ಎಲ್ಲರೂ ಕಾಲ್ಕಿತ್ತಿದ್ದಾರೆ. ತಪ್ಪಿಸಿಕೊಳ್ಳುವ ಭರದಲ್ಲಿ 3 ಮೂವರು ಕೆರೆ ಹಾರಿದ್ದಾರೆ, ಉಳಿದವರು ತಪ್ಪಿಸಿಕೊಂಡಿದ್ದಾರೆ ಎಂದು ಪೊಲೀಸರು ವಾಪಸ್​ ಬಂದಿದ್ದಾರೆ."

"ಆದರೆ, ಕೆರೆಗೆ ಹಾರಿದ್ದ ಮೂವರ ಪೈಕಿ ಇಬ್ಬರು ಸುರಕ್ಷಿತವಾಗಿ ದಡ ಸೇರಿದ್ದರೆ, ನರಸಿಂಹ ಎಂಬ ವ್ಯಕ್ತಿ ಈಜು ಬಾರದೆ ಮೃತಪಟ್ಟಿದ್ದಾರೆ. ಈ ವಿಷಯ ತಿಳಿದು ಪೊಲೀಸರು ಹಾಗೂ ಅಗ್ನಿಶಾಮಕ ದಳದವರು ಕಾರ್ಯಾಚರಣೆ ನಡೆಸಿ ಮೃತದೇಹವನ್ನು ಹೊರತೆಗೆದಿದ್ದಾರೆ. ಶ್ರೀನಿವಾಸಪುರ ಸರ್ಕಾರಿ ಆಸ್ಪತ್ರೆಗೆ ಮೃತದೇಹವನ್ನು ರವಾನಿಸಲಾಗಿದೆ. ಈ ಘಟನೆ ನಡೆಯಬಾರದಿತ್ತು, ನಡೆದಿದೆ. ಇಲಾಖಾ ವಿಚಾರಣೆ ನಡೆಯುತ್ತಿದೆ" ಎಂದು ತಿಳಿಸಿದರು.

ನರಸಿಂಹ ಸಾವಿಗೆ ಪೊಲೀಸರೇ ಕಾರಣ ಎಂದು ಮೃತನ ಕುಟುಂಬಸ್ಥರು ಆರೋಪಿಸಿದ್ದಾರೆ. ರಾಯಲ್ಪಾಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಶಿವಮೊಗ್ಗ: ಬ್ಯಾಡ್ಮಿಂಟನ್‌ ಆಡಿ ಕುಳಿತಿದ್ದ ಸರ್ಕಾರಿ ಅಧಿಕಾರಿ ಹೃದಯಾಘಾತದಿಂದ ಸಾವು - heart attack

Last Updated : Jun 12, 2024, 9:52 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.