ETV Bharat / state

ಬೆಂಗಳೂರು: ಮೆಟ್ರೋ ನಿಲ್ದಾಣದಲ್ಲಿ ವ್ಯಕ್ತಿ ಆತ್ಮಹತ್ಯೆ, ರೈಲು ಸೇವೆಯಲ್ಲಿ ವ್ಯತ್ಯಯ - Man Died by Suicide - MAN DIED BY SUICIDE

ಮೆಟ್ರೋ ನಿಲ್ದಾಣದಲ್ಲಿ ಯಲಚೇನಹಳ್ಳಿ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಜಧಾನಿಯಲ್ಲಿ ನಡೆದಿದೆ.

metro station
ಮೆಟ್ರೋ ನಿಲ್ದಾಣ (ETV Bharat)
author img

By ETV Bharat Karnataka Team

Published : Aug 3, 2024, 8:35 PM IST

ಬೆಂಗಳೂರು: ಮೆಟ್ರೋ ನಿಲ್ದಾಣದಲ್ಲಿ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ಶನಿವಾರ ಸಂಜೆ ನಡೆದಿದೆ. ಬಿಎಂಆರ್‌ಸಿಎಲ್‌ನ ಹಸಿರು ಮಾರ್ಗದ ದೊಡ್ಡಕಲ್ಲಸಂದ್ರ ನಿಲ್ದಾಣದಲ್ಲಿ ಘಟನೆ ಜರುಗಿದೆ.

ಮೃತನನ್ನು ಕೆ.ಎಸ್. ಲೇಔಟ್ ನಿವಾಸಿ ನವೀನ್ ಕುಮಾರ್ ಅರೋರಾ (57) ಎಂದು ಗುರುತಿಸಲಾಗಿದೆ. ಈ ಬಗ್ಗೆ ಮತ್ತಷ್ಟು ವಿವರಗಳು ಲಭ್ಯವಾಗಬೇಕಿದೆ.

ಸಂಜೆ 05:45ರ ಸುಮಾರಿಗೆ ದೊಡ್ಡಕಲ್ಲಸಂದ್ರ ಮೆಟ್ರೋ ನಿಲ್ದಾಣಕ್ಕೆ ರೈಲು ತಲುಪುತ್ತಿದ್ದಂತೆ ನವೀನ್ ಕುಮಾರ್ ಹಳಿ ಮೇಲೆ ಜಿಗಿದಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಸ್ಥಳಕ್ಕೆ ಕೋಣನಕುಂಟೆ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಘಟನೆಯಿಂದಾಗಿ ಯಲಚೇನಹಳ್ಳಿ ಮತ್ತು ಸಿಲ್ಕ್ ಇನ್‌ಸ್ಟಿಟ್ಯೂಟ್ ನಿಲ್ದಾಣಗಳ ನಡುವಿನ ರೈಲು ಸೇವೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಉಳಿದ ಮಾರ್ಗದಲ್ಲಿ ಸೇವೆ ಲಭ್ಯವಿದೆ ಎಂದು ಬಿಎಂಆರ್‌ಸಿಎಲ್‌ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: ಮಂಗಳೂರು–ಹಾಸನ ಮಾರ್ಗದಲ್ಲಿ ಗುಡ್ಡ ಕುಸಿತ: 12 ರೈಲುಗಳ ಸೇವೆ ರದ್ದು - Train Cancel

ETV Bharat Logo

Copyright © 2025 Ushodaya Enterprises Pvt. Ltd., All Rights Reserved.