ರಾಯಚೂರು: ಜಿಲ್ಲೆಯಲ್ಲಿ ಜೋಡಿ ಕೊಲೆ ನಡೆದಿದೆ. ಲಿಂಗಸೂಗೂರು ತಾಲೂಕಿನ ಮುದಗಲ್ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದ ಸಿಬ್ಬಂದಿಯ ಕ್ವಾರ್ಟರ್ಸ್ನಲ್ಲಿ ಈ ಎರಡು ಕೊಲೆ ನಡೆದಿದೆ. ಮೃತರನ್ನು ದ್ಯಾಮವ್ವ (65) ಮತ್ತು ಹುಲಿಗೆಮ್ಮ (23) ಎಂದು ಗುರುತಿಸಲಾಗಿದೆ.
ಕೌಟುಂಬಿಕ ಕಲಹ ಹಿನ್ನೆಲೆ ಇಂದು ಬೆಳಗಿನ ಜಾವ ಆರೋಪಿ ದುರ್ಗಪ್ಪ ತನ್ನ ಪತ್ನಿ ಹಾಗೂ ಅಜ್ಜಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಘಟನೆ ಬಳಿಕ ಆರೋಪಿ ಪರಾರಿಯಾಗಿದ್ದಾನೆ. ಅಲ್ಲದೇ ಮುದಗಲ್ ಸಮುದಾಯ ಆರೋಗ್ಯ ಕೇಂದ್ರದಲ್ಲಿ ದುರುಗಪ್ಪ ಡಿ ಗ್ರೂಪ್ ನೌಕರನಾಗಿ ಕೆಲಸ ಮಾಡುತ್ತಿದ್ದ. ಸದ್ಯ ಘಟನಾ ಸ್ಥಳಕ್ಕೆ ಮುದಗಲ್ ಪೊಲೀಸ್ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ. ಘಟನೆಯಿಂದ ಪಟ್ಟಣದ ಜನ ಬೆಚ್ಚಿಬಿದ್ದಿದ್ದಾರೆ. ಈ ಘಟನೆ ಕುರಿತು ಮುದಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಓದಿ: ಚಾಮರಾಜನಗರ: ಕಬ್ಬು ಕಟಾವು ಮಾಡುವಾಗ 2 ಚಿರತೆ ಮರಿ ಪತ್ತೆ - leopard cubs found