ETV Bharat / state

ಅಪ್ರಾಪ್ತೆಯ ಅಪಹರಿಸಿ ಅತ್ಯಾಚಾರ; ಅಪರಾಧಿಗೆ ದಂಡಸಹಿತ 20 ವರ್ಷ ಕಠಿಣ ಜೈಲು ಶಿಕ್ಷೆ - GIRL RAPE

ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರ ಮಾಡಿದ್ದ ಅಪರಾಧಿಗೆ ನ್ಯಾಯಾಲಯ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 35 ಸಾವಿರ ರೂ. ದಂಡ ವಿಧಿಸಿದೆ.

court
ನ್ಯಾಯಾಲಯಗಳ ಸಂಕೀರ್ಣ, ದಾವಣಗೆರೆ (ETV Bharat)
author img

By ETV Bharat Karnataka Team

Published : Dec 9, 2024, 5:23 PM IST

ದಾವಣಗೆರೆ: ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ದಾವಣಗೆರೆ ಜಿಲ್ಲಾ ನ್ಯಾಯಾಲಯ ಅಪರಾಧಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 35 ಸಾವಿರ ರೂ. ದಂಡ ವಿಧಿಸಿ ಆದೇಶಿಸಿದೆ. ಕೃತ್ಯಕ್ಕೆ ಸಹಕರಿಸಿದ 2ನೇ ಅಪರಾಧಿಗೆ 2 ವರ್ಷ ಕಾರಾಗೃಹ ಶಿಕ್ಷೆ ಮತ್ತು 10 ಸಾವಿರ ರೂ ದಂಡ ಹಾಗೂ 3ನೇ ಅಪರಾಧಿಗೆ 1 ವರ್ಷ, 5 ಸಾವಿರ ರೂ ದಂಡ ವಿಧಿಸಲಾಗಿದೆ.

ಪ್ರಕರಣದ ವಿವರ: ಅಕ್ಟೋಬರ್ 20, 2020ರಂದು ರಾತ್ರಿ ಊಟ ಮಾಡಿ ಮಲಗಿದ್ದಾಗ ಓರ್ವ ಆರೋಪಿ ಬಾಲಕಿಗೆ ನಾನು ನಿನ್ನನ್ನು ಪ್ರೀತಿಸುತ್ತಿದ್ದೇನೆ ಎಂದು ಆಕೆಯನ್ನು ಬಲವಂತವಾಗಿ ತನ್ನ ಬೈಕ್‌ನಲ್ಲಿ ಅಪಹರಿಸಿದ್ದ. ಈತನಿಗೆ ಇನ್ನಿಬ್ಬರು ಸಹಕರಿಸಿದ್ದರು. ವಿಚಾರ ತಿಳಿದು ಸಂಬಂಧಿಕರು ಹೊನ್ನಾಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಅಂದಿನ ಪಿಐ ದೇವರಾಜ್ ಟಿ.ವಿ ಪ್ರಕರಣದ ತನಿಖೆ ಕೈಗೊಂಡಿದ್ದರು.

ಅಪರಾಧಿಗಳಿಂದ ವಸೂಲು ಮಾಡಿದ ದಂಡದ ಒಟ್ಟು ಮೊತ್ತ 50,000 ರೂ.ಗಳನ್ನು ಸಂತ್ರಸ್ತೆಗೆ ನೀಡುವಂತೆ ಹಾಗೂ ಸಂತ್ರಸ್ತೆಗೆ ಸರ್ಕಾರದಿಂದ 4 ಲಕ್ಷ ರೂ ಪರಿಹಾರ ನೀಡುವಂತೆಯೂ ಕೋರ್ಟ್ ತೀರ್ಪು ನೀಡಿದೆ.

ಪ್ರಕರಣದಲ್ಲಿ ಸಂತ್ರಸ್ತೆಯ ಪರವಾಗಿ ಸರ್ಕಾರಿ ವಕೀಲರಾದ ಸುನಂದಾ ಮಡಿವಾಳರ್ ವಾದಿಸಿದ್ದರು.

ಇದನ್ನೂ ಓದಿ : ಬೆಂಗಳೂರು: ಯುವತಿ ಮೇಲೆ ಅತ್ಯಾಚಾರ, ಜಾತಿನಿಂದನೆ ಆರೋಪ; ಆಂಧ್ರ ಮೂಲದ ಯುವಕನ ವಿರುದ್ಧ ಎಫ್ಐಆರ್

ETV Bharat Logo

Copyright © 2025 Ushodaya Enterprises Pvt. Ltd., All Rights Reserved.