ಬೆಂಗಳೂರು: ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾದ ಯುವಕ ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಿ ಮಡಿವಾಳ ಪೊಲೀಸ್ ಠಾಣೆಯಲ್ಲಿ ಯುವತಿ ದೂರು ದಾಖಲಿಸಿದ್ದಾರೆ. ಆರೋಪಿ ನಿಹಾಲ್ ಹುಸೇನ್ ಎಂಬಾತನ ವಿರುದ್ಧ ದೂರು ದಾಖಲಿಸಿಕೊಂಡು, ತನಿಖೆ ಕೈಗೊಂಡಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.
ಮಾರ್ಚ್ ತಿಂಗಳಿನಲ್ಲಿ ಡೇಟಿಂಗ್ ಆ್ಯಪ್ನಲ್ಲಿ ನಿಹಾಲ್ ಹುಸೇನ್ ಪರಿಚಯವಾಗಿತ್ತು. ಕೆಲ ದಿನಗಳ ಬಳಿಕ ನಮ್ಮ ನಡುವೆ ಆಪ್ತತೆ ಬೆಳೆದಾಗ ಪಾರ್ಟಿಗೆಂದು ಹೋಟೆಲ್ಗೆ ಕರೆಸಿಕೊಂಡಿದ್ದ. ಬಳಿಕ ಆತ ಜ್ಯೂಸ್ನಲ್ಲಿ ಮದ್ಯ ಬೆರೆಸಿ ನನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ. ಗರ್ಭಿಣಿಯಾಗಿದ್ದ ನನ್ನನ್ನು ಮದುವೆಯಾಗುವುದಾಗಿ ನಂಬಿಸಿ ಗರ್ಭಪಾತ ಮಾಡಿಸಿದ್ದಾನೆ. ಮದುವೆಯಾಗು ಎಂದು ಹೇಳಿದ್ದಕ್ಕೆ ನನ್ನ ಮೇಲೆ ಹಲ್ಲೆ ಮಾಡಿದ್ದಾನೆ ಎಂದು ಯುವತಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ದೂರಿನನ್ವಯ ಎಲ್ಲ ಆಯಾಮಗಳಲ್ಲೂ ತನಿಖೆ ಕೈಗೊಂಡಿದ್ದೇವೆ ಎಂದು ಮಡಿವಾಳ ಠಾಣೆ ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ: ಬೆಳಗಾವಿ: ಸಾರ್ವಜನಿಕವಾಗಿ ಅರೆಬೆತ್ತಲೆಗೊಳಿಸಿ ಮಹಿಳೆ ಮೇಲೆ ಹಲ್ಲೆ ಆರೋಪ; ಈ ಬಗ್ಗೆ ಪೊಲೀಸ್ ಕಮಿಷನರ್ ಹೇಳಿದ್ದಿಷ್ಟು!