ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಡಾ ಜಿ.ಪರಮೇಶ್ವರ ಅವರಿಗೆ ಅವಾಚ್ಯ ಪದಗಳಿಂದ ನಿಂದಿಸಿ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದ ವ್ಯಕ್ತಿಯನ್ನು ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಸುಂಕದಕಟ್ಟೆ ವಾರ್ಡ್‌ನ ಕಾಂಗ್ರೆಸ್ ಅಧ್ಯಕ್ಷ ನವೀನ್ ಕುಮಾರ್ ಎಂಬುವವರು ನೀಡಿದ್ದ ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಂಡು ಆರೋಪಿ ಬಂಧಿಸಲಾಗಿದೆ ಎಂದು ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ತಿಳಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಡಾ ಜಿ.ಪರಮೇಶ್ವರ ಅವರನ್ನ ಅವಾಚ್ಯವಾಗಿ ನಿಂದಿಸಿರುವ ವಿಡಿಯೋವನ್ನ ಆರೋಪಿಯು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದ. ಸೋಮವಾರ ಆರೋಪಿಯ ವಿಡಿಯೋವನ್ನು ಗಮನಿಸಿದ್ದ ನವೀನ್ ಕುಮಾರ್ ಅವರು, ಆರೋಪಿ ತನ್ನ ಹೇಳಿಕೆಗಳ ಮೂಲಕ ಸಮಾಜದಲ್ಲಿ ಕೋಮುಗಲಭೆಗೆ ಪ್ರಚೋದನೆ ನೀಡುತ್ತಿದ್ದಾನೆ ಎಂದು ಆರೋಪಿಸಿ ಕಾಮಾಕ್ಷಿಪಾಳ್ಯ ಠಾಣೆಗೆ ದೂರು ನೀಡಿದ್ದರು. ಅದರನ್ವಯ ಕಾಮಾಕ್ಷಿಪಾಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಇದನ್ನೂ ಓದಿ: 10 ವರ್ಷದ ಹಿಂದಿನ ಪ್ರಕರಣ: ತಲೆಮರೆಸಿಕೊಂಡಿದ್ದ ಆರೋಪಿ ಪತ್ತೆಹಚ್ಚಿದ ಎಐ ಪವರ್ಡ್ ಕ್ಯಾಮೆರಾ!
ಇದನ್ನೂ ಓದಿ: ಡ್ರಗ್ಸ್ ಚಟಕ್ಕೆ ಒಳಗಾಗಿದ್ದ ಪುತ್ರನಿಗೆ ಬೈದು ಬುದ್ಧಿ ಹೇಳಿದ್ದಕ್ಕೆ ತಂದೆ ಎದೆಗೆ ಇರಿದು ಕೊಂದ!