ETV Bharat / state

ಸರ್ಕಾರಿ ವೈದ್ಯರು, ನರ್ಸ್, ಆಂಬ್ಯುಲೆನ್ಸ್ ಚಾಲಕರನ್ನು ನಿರ್ವಹಣೆ ಮಾಡುವುದು ಸುಲಭದ ಮಾತಲ್ಲ : ಡಿಸಿಎಂ - DCM D K Shivakumar - DCM D K SHIVAKUMAR

ಡಿಸಿಎಂ ಡಿ. ಕೆ ಶಿವಕುಮಾರ್ ಅವರು ಆರೋಗ್ಯ ಇಲಾಖೆಯ ಕುರಿತು ಮಾತನಾಡಿದ್ದಾರೆ. ಸಚಿವ ದಿನೇಶ್​ ಗುಂಡೂರಾವ್ ಅವರು ಆರೋಗ್ಯ ಇಲಾಖೆಯ ಜವಾಬ್ದಾರಿ ವಹಿಸಿಕೊಂಡ ನಂತರ ಹೊಸ ಹೊಸ ಯೋಜನೆಗಳನ್ನು ಜಾರಿಗೆ ತರುತ್ತಿದ್ದಾರೆ ಎಂದು ಹೇಳಿದರು.

dcm-d-k-shivakumar
ಡಿಸಿಎಂ ಡಿ ಕೆ ಶಿವಕುಮಾರ್ (ETV Bharat)
author img

By ETV Bharat Karnataka Team

Published : Aug 27, 2024, 9:19 PM IST

ಡಿಸಿಎಂ ಡಿ ಕೆ ಶಿವಕುಮಾರ್ ಅವರು ಮಾತನಾಡಿದರು (ETV Bharat)

ಬೆಂಗಳೂರು : ಸಚಿವ ದಿನೇಶ್ ಗುಂಡೂರಾವ್ ಅವರು ಆರೋಗ್ಯ ಇಲಾಖೆಯ ಜವಾಬ್ದಾರಿ ವಹಿಸಿಕೊಂಡ ಬಳಿಕ ರಾಜ್ಯದ ಉದ್ದಗಲಕ್ಕೂ ಕ್ರಾಂತಿ ಮಾಡಿ ಬದಲಾವಣೆ ತರುತ್ತಿದ್ದಾರೆ. ಸರ್ಕಾರಿ ಆಸ್ಪತ್ರೆ ವೈದ್ಯರು, ನರ್ಸ್, ಆಂಬ್ಯುಲೆನ್ಸ್ ಚಾಲಕರನ್ನು ನಿರ್ವಹಣೆ ಮಾಡುವುದು ಸುಲಭದ ಮಾತಲ್ಲ. ಸಿಬ್ಬಂದಿ ಪಟ್ಟಣಗಳನ್ನು ಬಿಟ್ಟು ಗ್ರಾಮಾಂತರ ಪ್ರದೇಶಗಳಿಗೆ ಹೋಗಲು ಹಿಂದೇಟು ಹಾಕುತ್ತಿದ್ದಾರೆ. ದಿನೇಶ್ ಗುಂಡೂರಾವ್ ಅವರು ಅನೇಕ ಹೊಸ ಯೋಜನೆಗಳನ್ನು ಜಾರಿಗೆ ತರುತ್ತಿದ್ದಾರೆ ಎಂದು ಡಿಸಿಎಂ ಡಿ. ಕೆ ಶಿವಕುಮಾರ್ ಅವರು ಹೇಳಿದ್ದಾರೆ.

ಮಲ್ಲೇಶ್ವರದ ಕೆ. ಸಿ ಜನರಲ್ ಆಸ್ಪತ್ರೆ ಆವರಣದಲ್ಲಿ ವಿವಿಧ ಕಟ್ಟಡಗಳ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಬೆಂಗಳೂರು ನಗರದಲ್ಲಿ ಅನೇಕ ಆಸ್ಪತ್ರೆಗಳನ್ನು ನಿರ್ಮಾಣ ಮಾಡಲಾಗುತ್ತಿದೆ. ಎಲ್ಲವನ್ನು ಸರಿಯಾದ ರೀತಿಯಲ್ಲಿ ನಿರ್ವಹಣೆ ಮಾಡಲು ಆಗುತ್ತಿಲ್ಲ. ಹೀಗಾಗಿ ಮುಂದಿನ ದಿನಗಳಲ್ಲಿ ನಾನು ಪಾಲಿಕೆ ಅಧಿಕಾರಿಗಳ ಜತೆ ಚರ್ಚೆ ಮಾಡಿ, ಪಾಲಿಕೆ ವ್ಯಾಪ್ತಿಯಲ್ಲಿ ಕೆಲವು ಆಸ್ಪತ್ರೆಗಳನ್ನು ಮಾತ್ರ ವ್ಯಾಪ್ತಿಯಲ್ಲಿಟ್ಟುಕೊಂಡು ಉಳಿದ ಆಸ್ಪತ್ರೆಗಳನ್ನು ಆರೋಗ್ಯ ಇಲಾಖೆಗೆ ಜವಾಬ್ದಾರಿ ನೀಡುವ ಆಲೋಚನೆ ಇದೆ. ಇದಕ್ಕೆ ಮುಖ್ಯಮಂತ್ರಿಗಳು ಒಪ್ಪಿಗೆ ನೀಡಿದ್ದಾರೆ ಎಂದು ಹೇಳಿದರು.

Minister Dinesh Gundurao
ಸಚಿವ ದಿನೇಶ್ ಗುಂಡೂರಾವ್ (ETV Bharat)

ತಾಯಿ ಮಗು ಆಸ್ಪತ್ರೆ ಕಟ್ಟಡ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದ್ದೇವೆ. ಈ ಆಸ್ಪತ್ರೆಯಿಂದ ಬಡ ಸಾರ್ವಜನಿಕರಿಗೆ ಅನುಕೂಲವಾಗುತ್ತದೆ. ಇಲ್ಲಿನ ಸಿಬ್ಬಂದಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಮುಂದಿನ ದಿನಗಳಲ್ಲೂ ಇದೇ ರೀತಿ ಉತ್ತಮವಾಗಿ ಕೆಲಸ ಮಾಡಿ. ಜನ ಕಷ್ಟದ ಸಮಯದಲ್ಲಿ ಬಹಳ ನಂಬಿಕೆಯಿಂದ ಆಸ್ಪತ್ರೆಗೆ ಬರುತ್ತಾರೆ. ಅವರಿಗೆ ಇಲ್ಲಿನ ಸಿಬ್ಬಂದಿ ಯಾವ ರೀತಿ ಮಾನಸಿಕವಾಗಿ ಧೈರ್ಯ ತುಂಬುತ್ತೀರಿ ಎಂಬುದರ ಮೇಲೆ ರೋಗಿಗಳ ಆರೋಗ್ಯ ಸುಧಾರಿಸುತ್ತದೆ. ನಿಮ್ಮ ಜತೆ ನಮ್ಮ ಸರ್ಕಾರ ಸದಾ ಸಿದ್ಧವಾಗಿರುತ್ತದೆ ಎಂದರು.

ರಾಜ್ಯದ ಎಲ್ಲಾ ಜಿಲ್ಲಾ ಆಸ್ಪತ್ರೆಗಳಲ್ಲಿ ಕಿಮೋಥೆರಪಿ ಕೇರ್ ಸೆಂಟರ್ : ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾತನಾಡಿ, ರಾಜ್ಯದ ಎಲ್ಲಾ ಜಿಲ್ಲಾ ಆಸ್ಪತ್ರೆಗಳಲ್ಲಿ ಕಿಮೋಥೆರಪಿ ಡೇ ಕೇರ್ ಸೆಂಟರ್​ಗಳನ್ನ ಮುಂಬರುವ ಒಂದು ತಿಂಗಳ ಒಳಗಾಗಿ ಪ್ರಾರಂಭಿಸುವುದಾಗಿ ಹೇಳಿದರು.

Minister Dinesh Gundurao
ಸಚಿವ ದಿನೇಶ್ ಗುಂಡೂರಾವ್ (ETV Bharat)

ಕೆ. ಸಿ ಜನರಲ್ ಆಸ್ಪತ್ರೆಯನ್ನ ಮೇಲ್ದರ್ಜೆಗೇರಿಸಲು ಎಂ.ಸಿ.ಹೆಚ್ ಆಸ್ಪತ್ರೆ, ಭೋದಕ ಕೊಠಡಿ, ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ 150 ಕೋಟಿಯ ಅನುದಾನವನ್ನ ಕೇಳಿದ್ದೆವು. ಸಿಎಂ ಸಿದ್ದರಾಮಯ್ಯ ಅವರು ನಮ್ಮ ಮನವಿಗೆ ಸ್ಪಂದಿಸಿ, ಅತಿ ಕಡಿಮೆ ಅವಧಿಯಲ್ಲೇ ಅನುದಾನ ಮಂಜೂರು ಮಾಡಿಕೊಟ್ಟಿದ್ದಾರೆ. ಭೂಮಿ ಪೂಜೆ ಕೂಡಾ ನೆರವೇರಿಸಲಾಗಿದೆ. ಇದರ ಸಂಪೂರ್ಣ ಸದುಪಯೋಗ ನಮ್ಮ ಜನಸಾಮಾನ್ಯರಿಗೆ ದೊರೆಯಲಿದೆ ಎಂದರು.‌

ರಾಜ್ಯದಲ್ಲಿ ನಮ್ಮ ಸರ್ಕಾರ ಬಂದ ಬಳಿಕ ಆರೋಗ್ಯ ಕ್ಷೇತ್ರದಲ್ಲಿ ಸಾಕಷ್ಟು ಸುಧಾರಣೆ ತರಲಾಗಿದೆ. ಡಯಾಲಿಸಿಸ್ ವ್ಯವಸ್ಥೆಯಲ್ಲಿ ಸುಧಾರಣೆ ತರಲಾಗಿದ್ದು, 750 ಕ್ಕೂ ಹೆಚ್ಚು ಏಕಬಳಕೆಯ ಡಯಾಲಿಸಿಸ್ ಹೊಸ ಯಂತ್ರಗಳನ್ನ ಅಳವಡಿಸಿದ್ದೇವೆ. ಸರ್ಕಾರಿ ಆಸ್ಪತ್ರೆಗಳಿಗೆ ಈ ಹಿಂದೆ ಶೇ. 30 ರಷ್ಟು ಮಾತ್ರ ಔಷಧಿ ನಿಗಮದಿಂದ ಔಷಧಿಗಳು ಸರಬರಾಜು ಆಗುತ್ತಿದ್ದವು. ಇದೀಗ ಶೇ. 70 ರಷ್ಟು ಔಷಧಿಗಳನ್ನ ನಿಗಮದಿಂದ ಖರೀದಿಸಿ ಸರ್ಕಾರಿ ಆಸ್ಪತ್ರೆಗಳಿಗೆ ಪೂರೈಸಲಾಗುತ್ತಿದೆ. ಮುಂಬರುವ ಕೆಲವೇ ದಿನಗಳಲ್ಲಿ ಶೇ. 90ರಷ್ಟು ಔಷಧಿಗಳು ದೊರಕಿಸುವತ್ತ ಆರೋಗ್ಯ ಇಲಾಖೆ ಹೆಜ್ಜೆಯಿಟ್ಟಿದೆ ಎಂದು ತಿಳಿಸಿದರು.

ಕ್ಯಾನ್ಸರ್ ರೋಗಿಗಳು ಕಿಮೋಥೆರಪಿಗಾಗಿ ಇಂದು ದೂರದ ನಗರಪ್ರದೇಶದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಿಗೆ ಬರುವ ಪರಿಸ್ಥಿತಿಯಿದೆ. ಜನರಿಗೆ ಅವರ ಜಿಲ್ಲೆಗಳಲ್ಲಿಯೇ ಕಿಮೋಥೆರಪಿ ಸೇವೆ ಒದಗಿಸುವ ನಿಟ್ಟಿನಲ್ಲಿ ಎಲ್ಲ ಜಿಲ್ಲಾ ಆಸ್ಪತ್ರೆಗಳಲ್ಲಿ ಕಿಮೋಥೆರಪಿ ಡೇ ಕೇರ್ ಸೆಂಟರ್​ಗಳನ್ನ ತೆರೆಯಲಾಗುವುದು. ಮುಂಬರುವ ಒಂದು ತಿಂಗಳ ಒಳಗಾಗಿ ಈ ಸೇವೆ ಲಭ್ಯವಾಗಲಿದೆ ಎಂದು ಹೇಳಿದರು.

ಅಪಘಾತ ಸಂಭವಿಸುವ ಹಾಟ್ ಸ್ಪಾಟ್​ಗಳಲ್ಲಿ ಪ್ರತ್ಯೇಕ ಆಂಬ್ಯುಲೆನ್ಸ್ : ಅಪಘಾತಕ್ಕೆ ಒಳಗಾಗುವವರಿಗೆ ತುರ್ತು ಆರೋಗ್ಯ ಸೇವೆಗಾಗಿ ಪ್ರತ್ಯೇಕ ಆಂಬ್ಯುಲೆನ್ಸ್ ಸೇವೆ ಶೀಘ್ರದಲ್ಲಿಯೇ ಪ್ರಾರಂಭಿಸುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.‌ 65 ನೂತನ ಪ್ರತ್ಯೇಕ ಆಂಬ್ಯುಲೆನ್ಸ್ ಸೇವೆಯನ್ನ ಅಪಘಾತಕ್ಕೀಡಾದವರ ನೆರವಿಗಾಗಿಯೇ ಒದಗಿಸಲಾಗುತ್ತಿದೆ. ಇದು ರಾಜ್ಯ ಸರ್ಕಾರದ ನೂತನ ಯೋಜನೆಯಾಗಿದ್ದು, ಶೀಘ್ರದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಆಂಬ್ಯುಲೆನ್ಸ್​ಗಳಿಗೆ ಚಾಲನೆ ನೀಡಲಿದ್ದಾರೆ ಎಂದರು.

ಇದನ್ನೂ ಓದಿ : ಭ್ರೂಣ ಹತ್ಯೆ ತಡೆಗೆ ರಾಜ್ಯ ಹಾಗೂ ಜಿಲ್ಲಾ ಮಟ್ಟದಲ್ಲಿ ಕಾರ್ಯಪಡೆ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ETV Bharat Logo

Copyright © 2025 Ushodaya Enterprises Pvt. Ltd., All Rights Reserved.