ETV Bharat / state

ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಇಂದು ಬಿಜೆಪಿ ಸೇರ್ಪಡೆ - Sumalatha Ambareesh - SUMALATHA AMBAREESH

ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರು ಇಂದು ಭಾರತೀಯ ಜನತಾ ಪಕ್ಷ ಸೇರ್ಪಡೆಗೊಳ್ಳಲಿದ್ದಾರೆ.

mandya-mp-sumalatha-ambarish-to-join-bjp-today
ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಇಂದು ಬಿಜೆಪಿ ಸೇರ್ಪಡೆ
author img

By ETV Bharat Karnataka Team

Published : Apr 5, 2024, 6:56 AM IST

ಬೆಂಗಳೂರು: ಮಂಡ್ಯ ಲೋಕಸಭಾ ಕ್ಷೇತ್ರದ ಹಾಲಿ ಪಕ್ಷೇತರ ಸಂಸದೆ ಸುಮಲತಾ ಅಂಬರೀಶ್ ಇಂದು ಬಿಜೆಪಿ ಸೇರಲಿದ್ದಾರೆ. ಬೆಳಗ್ಗೆ 11.30ಕ್ಕೆ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಸುಮಲತಾ ಬಿಜೆಪಿಯ ಹಿರಿಯ ಮುಖಂಡ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ನೇತೃತ್ವದಲ್ಲಿ ಕಮಲ ಪಕ್ಷ ಸೇರ್ಪಡೆ ಆಗಲಿದ್ದಾರೆ.

ಶುಕ್ರವಾರ ಬೆಳಗ್ಗೆ ಬಿಜೆಪಿ ಸೇರ್ಪಡೆ ಆಗುತ್ತಿರುವ ಬಗ್ಗೆ ಸುಮಲತಾ ತಮ್ಮ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ''ಮಂಡ್ಯದ ಅಭಿವೃದ್ಧಿಯನ್ನೇ ನನ್ನ ಮೂಲ ಮಂತ್ರವಾಗಿಸಿಕೊಂಡು ಹಾಗೂ ನಮ್ಮೆಲ್ಲರ ನೆಚ್ಚಿನ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿ ಆಗಲಿ ಎನ್ನುವ ಆಶಯದೊಂದಿಗೆ ಭಾರತೀಯ ಜನತಾ ಪಕ್ಷವನ್ನು ಬೆಂಬಲಿಸುವುದಾಗಿ ಘೋಷಿಸಿದ್ದೆ. ಅದರಂತೆಯೇ, ಬಿಜೆಪಿ ನಾಯಕರ ಸಮ್ಮುಖದಲ್ಲಿ ಏಪ್ರಿಲ್ 5ರ ಬೆಳಗ್ಗೆ 11.30ಕ್ಕೆ ಬೆಂಗಳೂರಿನ ಭಾರತೀಯ ಜನತಾ ಪಕ್ಷದ ಕಚೇರಿಯಲ್ಲಿ ಅಧಿಕೃತವಾಗಿ ಬಿಜೆಪಿ ಸೇರ್ಪಡೆ ಆಗುತ್ತಿರುವೆ. ನಮ್ಮ ಕರುನಾಡಿನ ಸಕ್ಕರೆಯ ನಾಡು ಮಂಡ್ಯದ ನನ್ನ ಸ್ವಾಭಿಮಾನಿ ಬಂಧುಗಳು, ಡಾ.ಅಂಬರೀಶ್ ಅಭಿಮಾನಿಗಳು ಹಾಗೂ ಹಿತೈಷಿಗಳ ಹಾರೈಕೆ ಮತ್ತು ಆಶೀರ್ವಾದ ಎಂದಿನಂತೆ ಇರಲಿ ಎಂದು ನನ್ನ ಸವಿನಯ ಕೋರಿಕೆ'' ಎಂದು ಬರೆದುಕೊಂಡಿದ್ದಾರೆ.

ಮಂಡ್ಯ ಕ್ಷೇತ್ರದಲ್ಲಿ ಸ್ಪರ್ಧಿಸಲು ಬಿಜೆಪಿ ಟಿಕೆಟ್​​ಗಾಗಿ ಸುಮಲತಾ ಸಾಕಷ್ಟು ಹೋರಾಟ ನಡೆಸಿದ್ದರು. ಬಿಜೆಪಿ ಹೈಕಮಾಂಡ್ ಮಂಡ್ಯ ಕ್ಷೇತ್ರವನ್ನು ಮೈತ್ರಿ ಪಕ್ಷ ಜೆಡಿಎಸ್​​ಗೆ ಬಿಟ್ಟುಕೊಟ್ಟಿದ್ದಲ್ಲದೇ, ಬೇರೆ ಕ್ಷೇತ್ರಗಳಿಂದ ಸ್ಪರ್ಧೆ ಮಾಡುವಂತೆ ಸುಮಲತಾಗೆ ಆಫರ್ ನೀಡಲಾಗಿತ್ತು. ಆದರೆ, ಸುಮಲತಾ ಮಂಡ್ಯ ಹೊರತುಪಡಿಸಿ ಬೇರೆ ಯಾವ ಕ್ಷೇತ್ರದಿಂದಲೂ ಸ್ಪರ್ಧಿಸುವುದಿಲ್ಲ ಎನ್ನುವ ಅಚಲ ನಿರ್ಧಾರ ತೆಗೆದುಕೊಂಡಿದ್ದರು. ಮಂಡ್ಯದಲ್ಲಿ ಬಿಜೆಪಿ ಟಿಕೆಟ್ ಸಿಗದಿದ್ದಕ್ಕೆ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ ನಡೆಸಲಿದ್ದಾರೆ ಎನ್ನುವ ಮಾತುಗಳೂ ರಾಜಕೀಯ ವಲಯದಲ್ಲಿ ಕೇಳಿ ಬಂದಿದ್ದವು.

ಬಿಜೆಪಿ ಟಿಕೆಟ್ ಸಿಗದಿದ್ದಕ್ಕೆ ಬೇಸರಗೊಂಡಿದ್ದ ಸಂಸದೆ ಸುಮಲತಾ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮತ್ತು ಮಾಜಿ ಸಿಎಂ ಕುಮಾರಸ್ವಾಮಿ ಅವರು ಜೆಪಿ ನಗರದ ಮನೆಯಲ್ಲಿ ಭೇಟಿ ಮಾಡಿ, ಲೋಕಸಭೆ ಚುನಾವಣೆಯಲ್ಲಿ ಬೆಂಬಲ ಮತ್ತು ಸಹಕಾರ ಕೋರಿದ್ದರು. ಬಳಿಕ ಮಂಡ್ಯ ಕ್ಷೇತ್ರದ ಅಭಿಮಾನಿಗಳು ಮತ್ತು ಬೆಂಬಲಿಗರ ಅಭಿಪ್ರಾಯ ಪಡೆದು ತಮ್ಮ ನಿರ್ಧಾರ ಪ್ರಕಟಿಸುವುದಾಗಿ ತಿಳಿಸಿದ್ದ ಅವರು, ಮೊನ್ನೆ ಮಂಡ್ಯದಲ್ಲಿ ಸಭೆ ನಡೆಸಿ ಬಿಜೆಪಿ ಸೇರುವುದಾಗಿ ಪ್ರಕಟಿಸಿದ್ದರು. ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಿಲ್ಲ, ಹಾಗೆಯೇ ಮಂಡ್ಯ ಬಿಟ್ಟು ಬೇರೆ ಎಲ್ಲಿಯೂ ಚುನಾವಣೆಗೆ ನಿಲ್ಲುವುದಿಲ್ಲ ಎಂದು ನಿರ್ಧಾರ ಘೋಷಣೆ ಮಾಡಿದ್ದರು.

ಕಳೆದ ಲೋಕಸಭೆ ಚುನಾವಣೆಯಲ್ಲಿ ಸುಮಲತಾ ಸ್ವತಂತ್ರ ಅಭ್ಯರ್ಥಿಯಾಗಿ ಮಾಜಿ ಸಿಎಂ ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ವಿರುದ್ಧ ಸ್ಪರ್ಧಿಸಿ ಜಿದ್ದಾಜಿದ್ದಿನ ಚುನಾವಣೆಯಲ್ಲಿ ಗೆದ್ದು ದೇಶದ ಗಮನ ಸೆಳೆದಿದ್ದರು. ಆ ಸಂದರ್ಭದಲ್ಲಿ ಬಿಜೆಪಿಯು ಅಭ್ಯರ್ಥಿಯನ್ನು ಕಣಕ್ಕಿಳಿಸದೇ ಸುಮಲತಾಗೆ ಬೆಂಬಲ ನೀಡಿತ್ತು.

ಇದನ್ನೂ ಓದಿ: ಸ್ವಂತ ಬೈಕ್​, ಕಾರು, ಮನೆಯಿಲ್ಲದ ತೇಜಸ್ವಿ ಸೂರ್ಯ: ಒಟ್ಟು 4.10 ಕೋಟಿ ಆಸ್ತಿ ಒಡೆಯ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.