ETV Bharat / state

ಗುದನಾಳದಲ್ಲಿ ಬಚ್ಚಿಟ್ಟುಕೊಂಡು 54 ಲಕ್ಷ ಮೌಲ್ಯದ ಚಿನ್ನ ಅಕ್ರಮ ಸಾಗಣೆ; ಮಂಗಳೂರು ಏರ್​ಪೋರ್ಟ್​ನಲ್ಲಿ ಸಿಕ್ಕಿಬಿದ್ದ ಪ್ರಯಾಣಿಕ - Gold Seized

ಅಕ್ರಮವಾಗಿ ಸಾಗಿಸಲಾಗುತ್ತಿದ್ದ 54 ಲಕ್ಷ ರೂ. ಮೌಲ್ಯದ ಚಿನ್ನವನ್ನು ಮಂಗಳೂರು ಕಸ್ಟಮ್ಸ್​ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಅಕ್ರಮ ಚಿನ್ನ ಸಾಗಾಟ: ಮಂಗಳೂರು ಕಸ್ಟಮ್ಸ್​ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ಪ್ರಯಾಣಿಕ

author img

By ETV Bharat Karnataka Team

Published : Apr 29, 2024, 6:17 PM IST

ಮಂಗಳೂರು: ಅಕ್ರಮವಾಗಿ ಚಿನ್ನ ಸಾಗಣೆ ಮಾಡುತ್ತಿದ್ದ ಪ್ರಯಾಣಿಕನನ್ನು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಚಿನ್ನ ಸಹಿತ ಬಂಧಿಸಿದ್ದಾರೆ.

ಏ.27 ರಂದು ಪ್ರಯಾಣಿಕರೊಬ್ಬರ ಅನುಮಾನಾಸ್ಪದ ಚಲನವಲನವನ್ನು ಗಮನಿಸಿದ ಕಸ್ಟಮ್ಸ್ ಅಧಿಕಾರಿಗಳು ಆತನನ್ನು ತಡೆದು ವಿಚಾರಣೆ ನಡೆಸಿದಾಗ ಅಕ್ರಮ ಚಿನ್ನ ಸಾಗಿಸುತ್ತಿರುವುದು ಬೆಳಕಿಗೆ ಬಂದಿದೆ. ಈತ ಏರ್ ಇಂಡಿಯಾ ಎಕ್ಸ್‌ಪ್ರೆಸ್ ಫ್ಲೈಟ್ IX 886 ಮೂಲಕ ದಮಾಮ್‌ನಿಂದ ಮಂಗಳೂರಿಗೆ ಆಗಮಿಸಿದ್ದ. ವಿಚಾರಣೆ ನಡೆಸಿದಾಗ ಈತನ ಗುದನಾಳದಲ್ಲಿ 825 ಗ್ರಾಂ ತೂಕದ ಪೇಸ್ಟ್ ರೂಪದಲ್ಲಿ ಚಿನ್ನವನ್ನು ಬಚ್ಚಿಟ್ಟಿರುವುದು ಕಂಡುಬಂದಿದೆ. ಹೊರತೆಗೆಯುವಾಗ 750.000 ಗ್ರಾಂ ತೂಕದ 24 ಕ್ಯಾರೆಟ್ ಶುದ್ಧತೆಯ ಚಿನ್ನವು ಪತ್ತೆಯಾಗಿದೆ. ಇದರ ಮೌಲ್ಯ ರೂ. 54,30,000/- ಎಂದು ಅಂದಾಜಿಸಲಾಗಿದೆ. ಸದ್ಯ ಆರೋಪಿಯನ್ನು ಬಂಧಿಸಿರುವ ಅಧಿಕಾರಿಗಳು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಕಳೆದ ಎರಡು ದಿನಗಳ ಹಿಂದೆ ಅಂಡರ್​ ವೇರ್​ನಲ್ಲಿ ಚಿನ್ನವನ್ನು ಮರೆಮಾಚಿ ಅಕ್ರಮವಾಗಿ ಸಾಗಿಸುತ್ತಿದ್ದ ಪ್ರಯಾಣಿಕ ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದ. ಆರೋಪಿಯಿಂದ 55 ಲಕ್ಷ ಮೌಲ್ಯದ 799.37 ಗ್ರಾಂ ಚಿನ್ನವನ್ನು ವಶಕ್ಕೆ ಪಡೆಯಲಾಗಿತ್ತು. ಏಪ್ರಿಲ್ 25 ರಂದು ಸಿಂಗಾಪುರದಿಂದ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದ ಇಂಡಿಗೋ ವಿಮಾನ ಸಂಖ್ಯೆ 6E 1006ರ ಪ್ರಯಾಣಿಕನನ್ನು ಖಚಿತ ಮಾಹಿತಿ ಮೇರೆಗೆ ವಿಚಾರಣೆ ನಡೆಸಿ ತಪಾಸಣೆ ನಡೆಸಿದಾಗ ಅಕ್ರಮವಾಗಿ ಚಿನ್ನ ಸಾಗಿಸುತ್ತಿರುವುದು ಬೆಳಕಿಗೆ ಬಂದಿತ್ತು.

ಇದನ್ನೂ ಓದಿ: ಮುಂಬೈ ವಿಮಾನ ನಿಲ್ದಾಣದಲ್ಲಿ ₹10 ಕೋಟಿ ಮೌಲ್ಯದ ಚಿನ್ನ, ವಜ್ರ ಸೇರಿ ವಿದೇಶಿ ಕರೆನ್ಸಿ ವಶ - Customs Department

ETV Bharat Logo

Copyright © 2024 Ushodaya Enterprises Pvt. Ltd., All Rights Reserved.