ETV Bharat / state

150 ಕೋಟಿ ಆಮಿಷ ಆರೋಪ: ಬಿಎಸ್​ವೈ, ವಿಜಯೇಂದ್ರ ವಿರುದ್ಧ ಸಿಬಿಐ ತನಿಖೆಗೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ - MANIPPADI ALLEGATION

ಪ್ರಧಾನಿ ಮೋದಿ ಅವರು ಮಾಣಿಪ್ಪಾಡಿ ಅವರು ಮಾಡಿರುವ 150 ಕೋಟಿ ರೂ ಆರೋಪ ಸಂಬಂಧ ಪ್ರಕರಣ ದಾಖಲಿಸಿ, ಸಿಬಿಐ ತನಿಖೆಗೆ ವಹಿಸಬೇಕೆಂದು ಕಾಂಗ್ರೆಸ್ ಪ್ರತಿಭಟನೆ ನಡೆಸಿತು.

ಕಾಂಗ್ರೆಸ್ ಪ್ರತಿಭಟನೆ, ಸಿಬಿಐ ತನಿಖೆ
ಕಾಂಗ್ರೆಸ್ ಪ್ರತಿಭಟನೆ (ETV Bharat Bharat)
author img

By ETV Bharat Karnataka Team

Published : Dec 15, 2024, 4:00 PM IST

ಬೆಂಗಳೂರು: ಅನ್ವರ್ ಮಾಣಿಪ್ಪಾಡಿ ಅವರು ಆರೋಪ ಮಾಡಿರುವ 150 ಕೋಟಿ ಸಂಬಂಧ ಕೂಡಲೇ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಸಿಬಿಐ ತನಿಖೆಗೆ ವಹಿಸಬೇಕು ಎಂದು ರೇಸ್ ಕೋರ್ಸ್ ರಸ್ತೆಯ ಕಾಂಗ್ರೆಸ್ ಭವನದ ಮುಂದೆ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನೆಡೆಸಿದರು.

ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್.ಮನೋಹರ್, ಯಡಿಯೂರಪ್ಪ ಅವರು ಸಿಎಂ ಆಗಿದ್ದ ಅವಧಿಯಲ್ಲಿ ವಿಜಯೇಂದ್ರ ಅವರು ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಅನ್ವರ್ ಮಾಣಿಪ್ಪಾಡಿ ಅವರಿಗೆ ವಕ್ಫ್ ಅಕ್ರಮದ ಬಗ್ಗೆ ತನಿಖೆಯ ಮಾಹಿತಿಯನ್ನು ಬಹಿರಂಗಪಡಿಸದಂತೆ 150 ಕೋಟಿ ಆಮಿಷವೊಡ್ಡಿದ್ದರು ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ವಿಜಯೇಂದ್ರರನ್ನು ಕೂಡಲೇ ಬಂಧಿಸಬೇಕು ಮತ್ತು ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಒತ್ತಾಯಿಸಿದರು.

ಕಾಂಗ್ರೆಸ್ ಪ್ರತಿಭಟನೆ, ಸಿಬಿಐ ತನಿಖೆ
ಕಾಂಗ್ರೆಸ್ ಪ್ರತಿಭಟನೆ (ETV Bharat)

ಅನ್ವರ್ ಮಾಣಿಪ್ಪಾಡಿ ಅವರು ಬರೆದಿರುವ ಪತ್ರ ಇನ್ನೂ ಪ್ರಧಾನಿ ಮೋದಿಗೆ ತಲುಪಿಲ್ಲದಂತಿದೆ. ಒಂದು ವೇಳೆ ತಲುಪಿದ್ದರೆ ಈ ಭ್ರಷ್ಟಾಚಾರ ಪ್ರಕರಣವನ್ನು ಯಾಕೆ ಸಿಬಿಐ ತನಿಖೆಗೆ ವಹಿಸಿಲ್ಲ ಎಂಬುದನ್ನು ದೇಶದ ಜನತೆಗೆ ತಿಳಿಸಬೇಕಿದೆ. ಬಿಜೆಪಿ ಪಕ್ಷದ ವಕ್ತಾರರಾಗಿ ಹಾಗೂ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿರುವ ವ್ಯಕ್ತಿ ಪತ್ರ ಬರೆದಿರುವುದು ಬಹಿರಂಗವಾಗಿದ್ದರೂ ಪ್ರಕರಣವನ್ನು ಮುಚ್ಚಿ ಹಾಕುವ ಷಡ್ಯಂತ್ರ ನಡೆಸಲಾಗುತ್ತಿದೆ. 150 ಕೋಟಿ ಆರೋಪ ಮಾಡಿದರೂ ಸಹ ಸಿಬಿಐ, ಇಡಿ, ಆದಾಯ ತೆರಿಗೆ ಇಲಾಖೆಗಳು, ನಿದ್ರಿಸುತ್ತಿದ್ದಂತಿದೆ. ಕೇಂದ್ರ ಸರ್ಕಾರದ ಇಲಾಖೆಗಳು ವಿರೋಧ ಪಕ್ಷದ ನಾಯಕರ ವಿರುದ್ಧ ಮಾತ್ರ ತನಿಖೆಗೆ ಮುಂದಾಗುತ್ತವೆ. ಭ್ರಷ್ಟ ಬಿಜೆಪಿ ಸರ್ಕಾರದ ಸಚಿವರ ವಿರುದ್ಧ ಹಾಗೂ ನಾಯಕರ ವಿರುದ್ಧ ತನಿಖೆಗೆ ಮುಂದಾಗುವುದಿಲ್ಲ ಎಂದು ಆರೋಪಿಸಿದರು.

ಬೆಳ್ತಂಗಡಿಯ ಬಿಜೆಪಿ ಶಾಸಕ ಹರೀಶ್ ಪೂಂಜಾ ಪ್ರಸ್ತುತ ಬೆಳಗಾವಿ ವಿಧಾನಸಭೆ ಅಧಿವೇಶನದಲ್ಲಿ ಆನೆಗಳನ್ನು ಕೊಲ್ಲಲು ಅನುಮತಿ ಬೇಕು ಎಂದು ಕೇಳಿರುವುದು ಅತ್ಯಂತ ದುರದೃಷ್ಟಕರ ಸಂಗತಿಯಾಗಿದೆ. ವನ್ಯಪ್ರಾಣಿಗಳನ್ನು ಕೊಲ್ಲಲು ಅನುಮತಿ ಕೇಳುವ ಮಟ್ಟಕ್ಕೆ ಕ್ರೂರ ಮನಸ್ಥಿತಿಯ ವ್ಯಕ್ತಿಗಳು ಬಂದಿರುವುದು ವನ್ಯಜೀವಿಗಳ ಸಂರಕ್ಷಣೆಗೆ ವಿರುದ್ಧವಾಗಿದೆ ಎಂದು ಮನೋಹರ್ ಹೇಳಿದರು.

ಪ್ರತಿಭಟನೆಯಲ್ಲಿ ವನ್ಯಜೀವಿಗಳನ್ನು ಕೊಲ್ಲಬೇಕೆಂದು ಬಹಿರಂಗವಾಗಿ ಮನವಿ ಮಾಡಿರುವ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ಕೂಡಲೇ ಅರಣ್ಯ ಇಲಾಖೆ ಸ್ವಯಂ ಪ್ರೇರಿತವಾಗಿ ಕ್ರಮ ಕೈಗೊಂಡು ಬಂಧಿಸಬೇಕೆಂದು ಆಗ್ರಹಿಸಿದರು. ಜೊತೆಗೆ ಪ್ರತಿಭಟನೆ ವೇಳೆ ಪ್ರತಿಕೃತಿ ದಹಿಸಿ ಆಕ್ರೋಶ ಹೊರಹಾಕಿದರು.

ಪ್ರಚಾರ ಸಮಿತಿಯ ಮುಖಂಡರಾದ ಎ. ಆನಂದ್, ಓಬಳೇಶ್, ಪುಟ್ಟರಾಜು, ಚಂದ್ರಶೇಖರ್, ನವೀನ್ ಸುಂಕದಕಟ್ಟೆ, ಕುಶಾಲ್ ಹಾರುವೇಗೌಡ, ಉಮೇಶ್, ರವಿ ಹಾಗೂ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಮುಖಂಡರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಇದನ್ನೂ ಓದಿ: '150 ಕೋಟಿ ರೂ ಆಫರ್ ಆರೋಪದಲ್ಲಿ ತರ್ಕವಿಲ್ಲ, ಕಾಂಗ್ರೆಸ್ ಪಕ್ಷವ​ನ್ನು ನಾನೇಕೆ ಬಚಾವ್ ಮಾಡಲಿ?'

ಇದನ್ನೂ ಓದಿ: ವಿಜಯೇಂದ್ರ ವಿರುದ್ಧ ಮಾಣಿಪ್ಪಾಡಿ 150 ಕೋಟಿ ರೂ. ಆಮಿಷದ ಆರೋಪ; ಸಿಬಿಐ ತನಿಖೆಗೆ ಸಿಎಂ ಆಗ್ರಹ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.