ETV Bharat / state

ಹಂ.ಪ.ನಾಗರಾಜಯ್ಯ, ಸಿಎಂ ಸಿದ್ದರಾಮಯ್ಯ ಸೇರಿದಂತೆ ಗಣ್ಯರಿಗೆ ಮೈಸೂರು ದಸರಾ ಮಹೋತ್ಸವದ ಆಹ್ವಾನ - Mysuru Dasara Invitation - MYSURU DASARA INVITATION

ಮೈಸೂರು ದಸರಾ ಮಹೋತ್ಸವ ಸಮಿತಿ ಹಾಗೂ ಜಿಲ್ಲಾಡಳಿತ ಗುರುವಾರ ಹಲವು ಗಣ್ಯರನ್ನು ಗೌರವಿಸಿ ಮೈಸೂರು ದಸರಾ ಆಹ್ವಾನ ಪತ್ರಿಕೆ ನೀಡಿತು.

ಹಲವು ಗಣ್ಯರಿಗೆ ದಸರಾಗೆ ಆಹ್ವಾನ
ಗಣ್ಯರಿಗೆ ದಸರಾ ಮಹೋತ್ಸವದ ಆಹ್ವಾನ (ETV Bharat)
author img

By ETV Bharat Karnataka Team

Published : Sep 27, 2024, 8:08 AM IST

ಮೈಸೂರು: ಈ ಬಾರಿಯ ದಸರಾ ಉದ್ಘಾಟಕರಾದ ಹಿರಿಯ ಸಾಹಿತಿ ಹಂ.ಪ.ನಾಗರಾಜಯ್ಯ (ಹಂಪನಾ), ರಾಜ್ಯಪಾಲರು, ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರನ್ನು ಮೈಸೂರು ದಸರಾ ಮಹೋತ್ಸವ ಸಮಿತಿ ಹಾಗೂ ಜಿಲ್ಲಾಡಳಿತ ದಸರಾ ಮಹೋತ್ಸವಕ್ಕೆ ಆಹ್ವಾನಿಸಿದೆ.

ದಸರಾ ಉದ್ಘಾಟಕರಾದ ಹಂಪನಾ ಅವರಿಗೆ ಆಹ್ವಾನ: ಬೆಂಗಳೂರಿನ ಕ್ರಸೆಂಟ್ ರಸ್ತೆಯ ಅಮೆರಿಕನ್​ ಕಾಲೊನಿಯಲ್ಲಿರುವ ಹಂ.ಪ.ನಾಗರಾಜಯ್ಯ ಅವರ ನಿವಾಸಕ್ಕೆ ತೆರಳಿ, ಮೈಸೂರು ಪೇಟ ತೋಡಿಸಿ, ಫಲಪುಷ್ಪದೊಂದಿಗೆ ಆಮಂತ್ರಣ ನೀಡಲಾಯಿತು. ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ, ಮೈಸೂರು ನಗರ ಪೊಲೀಸ್​​ ಆಯುಕ್ತೆ ಸೀಮಾ ಲಾಟ್ಕರ್‌, ಜಿ.ಪಂ.ಸಿಇಒ ಕೆ.ಎಂ.ಗಾಯತ್ರಿ, ಎಸ್ಪಿ ವಿಷ್ಣುವರ್ಧನ್​, ಅಪರ ಜಿಲ್ಲಾಧಿಕಾರಿ ಡಾ.ಪಿ.ಶಿವರಾಜ್​​, ಚಾಮುಂಡಿ ಬೆಟ್ಟದ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎಂ.ಜೆ. ರೂಪಾ ಮತ್ತು ಸ್ವಾಗತ ಸಮಿತಿಯ ಎಲ್ಲ ಅಧಿಕಾರಿಗಳು ಈ ವೇಳೆ ಹಾಜರಿದ್ದರು.

ರಾಜ್ಯಪಾಲರಿಗೆ ಆಹ್ವಾನ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಮೈಸೂರು ಜಿಲ್ಲಾಡಳಿತದ ವತಿಯಿಂದ ದಸರಾ ಮಹೋತ್ಸವಕ್ಕೆ ಅಧಿಕೃತವಾಗಿ ಆಹ್ವಾನಿಸಲಾಯಿತು.

ಹಲವು ಗಣ್ಯರಿಗೆ ದಸರಾಗೆ ಆಹ್ವಾನ
ಗಣ್ಯರಿಗೆ ದಸರಾ ಮಹೋತ್ಸವದ ಆಹ್ವಾನ (ETV Bharat)

ಮುಖ್ಯಮಂತ್ರಿಗೆ ಆಹ್ವಾನ: ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಅವರು ಮುಖ್ಯಮಂತ್ರಿಯವರ ಗೃಹ ಕಚೇರಿ ಕೃಷ್ಣಾಕ್ಕೆ ತೆರಳಿ ಮೈಸೂರು ದಸರಾ ಮಹೋತ್ಸವಕ್ಕೆ ಆಗಮಿಸಿ, ಕಾರ್ಯಕ್ರಮಗಳಲ್ಲಿ ಭಾಗಿಯಾಗುವಂತೆ ಆಹ್ವಾನಿಸಿದರು. ಶಾಸಕರಾದ ಡಿ.ರವಿಶಂಕರ್, ಅನಿಲ್ ಕುಮಾರ್, ವಿಧಾನ ಪರಿಷತ್ ಸದಸ್ಯರಾದ ಡಾ.ಯತೀಂದ್ರ, ಸಿ.ಎನ್.ಮಂಜೇಗೌಡ, ಡಾ.ತಿಮ್ಮಯ್ಯ, ಜಿಲ್ಲಾಧಿಕಾರಿ ಜಿ.ಲಕ್ಷ್ಮೀ ಕಾಂತ ರೆಡ್ಡಿ ಹಾಗೂ ಸ್ವಾಗತ ಸಮಿತಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಡಿಸಿಎಂ ಸೇರಿ ಹಲವು ಗಣ್ಯರಿಗೆ ಆಹ್ವಾನ: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್​​, ವಿಧಾನಸಭೆಯ ಸ್ಪೀಕರ್​​​​ ಯು.ಟಿ.ಖಾದರ್​​ ಹಾಗೂ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ, ಕಂದಾಯ ಸಚಿವ ಕೃಷ್ಣಭೈರೇಗೌಡ, ಸರಕಾರ ಮುಖ್ಯಕಾರ್ಯದರ್ಶಿ ಶಾಲಿನಿ ರಜನಿಶ್ ಅವರಿಗೆ ಜಿಲ್ಲಾಡಳಿತದ ವತಿಯಿಂದ ಆಹ್ವಾನ ನೀಡಲಾಯಿತು.

ಯುವ ಸಂಭ್ರಮ
ಯುವ ಸಂಭ್ರಮ (ETV Bharat)

ಯುವ ಸಂಭ್ರಮ:‌ ನಾಡ ಹಬ್ಬ ದಸರಾ ಪ್ರಯುಕ್ತ ನಡೆಯುವ ಯುವ ಸಂಭ್ರಮ ಕಾರ್ಯಕ್ರಮ ಮೈಸೂರಿನ ಮಾನಸ ಗಂಗೋತ್ರಿಯ ಬಯಲುರಂಗ ಮಂದಿರದಲ್ಲಿ ಆಯೋಜಿಸಲಾಗಿದೆ. ಗುರುವಾರ 3ನೇ ದಿನದ ಕಾರ್ಯಕ್ರಮದಲ್ಲಿ ಕನ್ನಡ ನಾಡು, ನುಡಿ, ಸಂಸ್ಕೃತಿಯನ್ನು ಎತ್ತಿಹಿಡಿಯುವ 57 ಕಲಾ ತಂಡಗಳ ಪ್ರದರ್ಶನ ನಡೆಯಿತು. ತಿಲಕ್​​ ನಗರ ಮೈಸೂರಿನ ಅಂಧ ಹಾಗೂ ಶ್ರವಣದೋಷವುಳ್ಳ ಮಕ್ಕಳ ಶಿಕ್ಷಕರ ತರಬೇತಿ ಕೇಂದ್ರದ ವತಿಯಿಂದ ಅಹಿಂದ ನಾಯಕ ಡಿ.ದೇವರಾಜ್ ಅರಸ್ ಅವರ ಸಾಧನೆಯ ಬಗೆಗಿನ ಪ್ರದರ್ಶನ ಎಲ್ಲರ ಗಮನಸೆಳೆಯಿತು. ಚಾಮರಾಜನಗರದ ವೈ.ಎಂ.ಮಲ್ಲಿಕಾರ್ಜುನ ಸ್ವಾಮಿ ಪ್ರಥಮ ದರ್ಜೆ ಕಾಲೇಜು ವತಿಯಿಂದ ಮಹಾನ್ ದೇಶಭಕ್ತ ನಾಡಪ್ರೇಮಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಕುರಿತು ಪ್ರದರ್ಶನ, ನಗರದ ಹುಣಸೂರ ತಾಲೂಕಿನ ವಿ.ಎಸ್.ಎಸ್ ಪ್ರಥಮ ದರ್ಜೆ ಕಾಲೇಜಿನಿಂದ ರಾಷ್ಟ್ರೀಯ ಭಾವೈಕ್ಯತೆ ವಿವಿಧತೆಯಲ್ಲಿ ಏಕತೆ ಹಾಗೂ ನಗರದ ಜಯಲಕ್ಷ್ಮಿಪುರಂನ ವಿವೇಕಾನಂದ ಪದವಿ ಪೂರ್ವ ಕಾಲೇಜುನಿಂದ ಸಂವಿಧಾನ ಮತ್ತು ಶಾಸನಹಕ್ಕು ಮತ್ತು ಕರ್ತವ್ಯಗಳ ಬಗ್ಗೆ ಪ್ರದರ್ಶನ ನಡೆಯಿತು.

ಇದನ್ನೂ ಓದಿ: ಅಂಬಾ ವಿಲಾಸ ಅರಮನೆಯ ದರ್ಬಾರ್‌ ಹಾಲ್​ನಲ್ಲಿ ನಾಳೆ ರತ್ನ ಖಚಿತ ಸಿಂಹಾಸನ ಜೋಡಣೆ - Jewelled throne Assembling

ETV Bharat Logo

Copyright © 2024 Ushodaya Enterprises Pvt. Ltd., All Rights Reserved.