ETV Bharat / state

ಬೆಂಗಳೂರಿನಲ್ಲಿ ಮಳೆಯಿಂದಾಗಿ ಲೇಔಟ್ ಜಲಾವೃತ : ಪಾಲಿಕೆ ವಿರುದ್ಧ ಸ್ಥಳೀಯರು ಗರಂ - Bengaluru rain

ತಡರಾತ್ರಿ ಸುರಿದ ಮಳೆಗೆ ಬೆಂಗಳೂರು ನಗರದ ಹಲವೆಡೆ ಜಲಾವೃತಗೊಂಡು ಜನಜೀವನ ಅಸ್ತವ್ಯಸ್ತವಾಗಿದೆ.

ಬೆಂಗಳೂರಿನಲ್ಲಿ ತಡರಾತ್ರಿ ಮಳೆ
ಬೆಂಗಳೂರಿನಲ್ಲಿ ತಡರಾತ್ರಿ ಮಳೆಗೆ ಮನೆ ಒಳಗೆ ನುಗ್ಗಿದ ನೀರು (ETV Bharat)
author img

By ETV Bharat Karnataka Team

Published : Aug 12, 2024, 9:17 AM IST

ಬೆಂಗಳೂರಿನಲ್ಲಿ ತಡರಾತ್ರಿ ಮಳೆಯ ಪರಿಣಾಮ (ETV Bharat)

ಬೆಂಗಳೂರು: ರಾಜ್ಯದ ಕರಾವಳಿ, ಮಲೆನಾಡು ಭಾಗದಲ್ಲಿ ಅಬ್ಬರಿಸಿ ಬೊಬ್ಬಿರಿದಿರುವ ಮಳೆ ಇದೀಗ ರಾಜಧಾನಿ ಬೆಂಗಳೂರಿನಲ್ಲೂ ಆರ್ಭಟಿಸಿದೆ. ಭಾನುವಾರ ತಡರಾತ್ರಿ ಸುರಿದ ಭಾರಿ ಮಳೆಯಿಂದ ಮನೆಗಳಿಗೆ ನೀರು ನುಗ್ಗಿರುವ ಘಟನೆ ಅಮೃತಹಳ್ಳಿಯ ಮುನಿಸ್ವಾಮಪ್ಪ ಲೇಔಟ್‌ನಲ್ಲಿ ನಡೆದಿದೆ. ರಾತ್ರಿ ಆರಂಭವಾದ ಅನಿರೀಕ್ಷಿತ ಮಳೆಯಿಂದಾಗಿ ತಗ್ಗು ಪ್ರದೇಶದಲ್ಲಿನ ಮನೆಗಳಿಗೆ ನೀರು ನುಗ್ಗಿದ್ದು, ಇಡೀ ರಾತ್ರಿ ಏರಿಯಾದ ನಿವಾಸಿಗಳು ನಿದ್ರೆಯಿಲ್ಲದೆ‌ ಕಳೆಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಮಳೆಗೆ ಮನೆ ಸಾಮಗ್ರಿಗಳನ್ನು ರಕ್ಷಿಸಿಕೊಳ್ಳಲು ಪರದಾಡಿದ ಏರಿಯಾದ ಜನ ಬೆಳಗ್ಗೆ ಮಳೆ ನಿಂತ ಬಳಿಕ ಕೆಸರುಮಯವಾದ ಮನೆಗಳನ್ನು ಸ್ವಚ್ಛಗೊಳಿಸುವುದರಲ್ಲಿ ತೊಡಗಿದ್ದಾರೆ.

ಪ್ರತಿ ಬಾರಿ ಮಳೆ ಬಂದಾಗ ಇದೇ ಸ್ಥಿತಿ; ಮತ್ತೊಂದೆಡೆ ಏರಿಯಾದ ಇಡೀ ರಸ್ತೆಗಳು ಜಲಾವೃತಗೊಂಡಿದ್ದು, ಮನೆಯಿಂದ ಹೊರಬರುವುದೇ ದುಸ್ತರವಾಗಿದೆ. ಪ್ರತೀ ಬಾರಿ ಮಳೆ ಬಂದಾಗಲೂ ಇದೇ ಪರಿಸ್ಥಿತಿ ನಿರ್ಮಾಣವಾಗುತ್ತದೆ. ಮನೆಯಲ್ಲಿರುವ ಸಾಮಗ್ರಿಗಳು ಹಾನಿಗೊಳಗಾಗುತ್ತಿವೆ. ಸಾಂಕ್ರಾಮಿಕ ರೋಗಗಳ ಭೀತಿ ಎದುರಾಗುತ್ತಿದೆ' ಎನ್ನುತ್ತಿರುವ ಜನರು, ಮಳೆಯ ಮುನ್ಸೂಚನೆ ಇದ್ದರೂ ಸಹ ಮುನ್ನೆಚ್ಚರಿಕೆ ವಹಿಸದ ಪಾಲಿಕೆಯ ವಿರುದ್ಧ ಹಿಡಿಶಾಪ ಹಾಕುತ್ತಿದ್ದಾರೆ.

ಬಿಟಿಎಂ, ಸಿಟಿ ಮಾರ್ಕೆಟ್ ರಸ್ತೆಗಳು ಜಲಾವೃತ : ಮಳೆಗೆ ಬನಶಂಕರಿ, ಬಿಟಿಎಂ ಲೇಔಟ್, ಬಸವನಗುಡಿ ಕೆ.ಆರ್.ಮಾರ್ಕೆಟ್, ಜೆ.ಸಿ.ರಸ್ತೆ, ರಾಜಾಜಿನಗರ, ವಿಜಯನಗರ, ಕಾಮಾಕ್ಷಿಪಾಳ್ಯ, ಯಶವಂತಪುರ ಸೇರಿದಂತೆ ಬಹುತೇಕ ಏರಿಯಾಗಳಲ್ಲಿ ಭಾನುವಾರ ತಡರಾತ್ರಿ 2 ಗಂಟೆ ಸುಮಾರಿಗೆ ಆರಂಭವಾದ ಮಳೆ ಬೆಳಗ್ಗೆವರೆಗೂ ಸುರಿದಿದೆ. ಪರಿಣಾಮ ಕೆಲವೆಡೆ ಜನಜೀವನ ಅಸ್ತವ್ಯಸ್ತಗೊಂಡಿದೆ.

ಮಳೆಗೆ ಬೆಂಗಳೂರು ನಗರದ ಹಲವೆಡೆ ಜಲಾವೃತ
ಮಳೆಗೆ ಬೆಂಗಳೂರು ನಗರದ ಹಲವೆಡೆ ಜಲಾವೃತ (ETV Bharat)

ನಿರಂತರ ಮಳೆಯಿಂದಾಗಿ ಬಿಟಿಎಂ ಲೇಔಟ್​ನ 2ನೇ ಹಂತದ ಬಹುತೇಕ ಏರಿಯಾಗಳಲ್ಲಿ ರಸ್ತೆಗಳು ಜಲಾವೃತಗೊಂಡಿವೆ. ಚೆನ್ನೈ - ಬೆಂಗಳೂರು ರಾಷ್ಟ್ರೀಯ ಹೆದ್ದಾರಿ, ಸಿಲ್ಕ್​ ಬೋರ್ಡ್​, ಎಲೆಕ್ಟ್ರಾನಿಕ್​ ಸಿಟಿ ರಸ್ತೆಯಲ್ಲಿ ನೀರು ತುಂಬಿಕೊಂಡು ವಾಹನ ಸವಾರರು ಪರದಾಡಿದ್ದಾರೆ. ಇತ್ತ ಅಂಡರ್​​ಪಾಸ್​ನಲ್ಲಿ ನೀರು ನಿಂತ ಪರಿಣಾಮ ಆಂಬ್ಯುಲೆನ್ಸ್​​ ಕೆಟ್ಟು ನಿಂತ ಘಟನೆ ಓಕಳಿಪುರಂನಲ್ಲಿ ನಡೆದಿದೆ.

ಚಿಕ್ಕಪೇಟೆ ಮೆಟ್ರೋ ನಿಲ್ದಾಣದ ‌ಮುಂಭಾಗ ರಸ್ತೆ ‌ಸಂಪೂರ್ಣ ಜಲಾವೃತಗೊಂಡಿದ್ದು ವಾಹನ ಸವಾರರು ತೊಂದರೆ ಅನುಭವಿಸುತ್ತಿದ್ದಾರೆ. ಕೆ. ಆರ್. ಮಾರ್ಕೆಟ್ ಸುತ್ತಮುತ್ತಲಿನ ಚಿಕ್ಕಪೇಟೆ, ಸುಲ್ತಾನ್ ಪೇಟೆ, ಬಳೆಪೇಟೆ, ಕಾಟನ್ ಪೇಟೆ ಸಂಪರ್ಕಿಸುವ ರಸ್ತೆಗಳು ನೀರು ತುಂಬಿಕೊಂಡು ಸಂಚಾರ ಅಸ್ತವ್ಯಸ್ತವಾಗಿದೆ. ಮಳೆ ಸೃಷ್ಟಿಸಿರುವ ಅವಾಂತರದಿಂದಾಗಿ ಬೆಳಗ್ಗೆ ಕೆಲಸಕ್ಕೆ ತೆರಳುವವರೂ ಸಹ ಕಿರಿಕಿರಿ ಅನುಭವಿಸುವಂತಾಗಿದ್ದು, ಇಂದೂ ಸಹ ಮಳೆಯಾಗುವ ನಿರೀಕ್ಷೆಯಿದೆ ಎನ್ನಲಾಗಿದೆ.

ಇದನ್ನೂ ಓದಿ: ಮುಳ್ಳಯ್ಯನಗಿರಿ ಸೇರಿದಂತೆ 77 ಪ್ರದೇಶಗಳಲ್ಲಿ ಜಿಯೋಲಾಜಿಕಲ್ ಸರ್ವೇ ತಂಡ ಪರಿಶೀಲನೆ: ಏಕೆ ಗೊತ್ತೆ? - geological survey

ETV Bharat Logo

Copyright © 2024 Ushodaya Enterprises Pvt. Ltd., All Rights Reserved.