ETV Bharat / state

ಬೆಂಗಳೂರು : ವಿವಾಹಿತ ಮಹಿಳಾ ಟೆಕ್ಕಿ ಶವವಾಗಿ ಪತ್ತೆ - female techie dead - FEMALE TECHIE DEAD

ವಿವಾಹಿತ ಮಹಿಳೆಯ ಶವ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ವಿವೇಕನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ.

married-female-techie-dead
ಮೃತ ಮೇಘನಾ ಶೆಟ್ಟಿ (ETV Bharat)
author img

By ETV Bharat Karnataka Team

Published : Oct 6, 2024, 7:19 PM IST

ಬೆಂಗಳೂರು : ವಿವೇಕನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಾಸವಾಗಿದ್ದ ಮಹಿಳೆಯ ಶವ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ತಮ್ಮ ಮಗಳನ್ನು ಕೊಲೆ ಮಾಡಿರುವುದಾಗಿ ಮಹಿಳೆಯ ಪೋಷಕರು ದೂರು ನೀಡಿದ ಮೇರೆಗೆ ಪೊಲೀಸರು ಆಕೆಯ ಪತಿಯನ್ನ ವಶಕ್ಕೆ ಪಡೆದುಕೊಂಡಿದ್ದಾರೆ.

ಕುಂದಾಪುರ ಮೂಲದ ಮೇಘನಾ ಶೆಟ್ಟಿ(27) ಶವವಾಗಿ ಪತ್ತೆಯಾಗಿರುವ ಮಹಿಳೆ. ಖಾಸಗಿ ಕಂಪನಿಯಲ್ಲಿ ಸಾಫ್ಟ್​ವೇರ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ ಮೇಘನಾ, ವಿವೇಕನಗರದಲ್ಲಿ ಪತಿ ಸುದೀಪ್ ಶೆಟ್ಟಿಯೊಂದಿಗೆ ವಾಸವಾಗಿದ್ದರು.

ಕಳೆದ ಎರಡು ವರ್ಷಗಳ ಹಿಂದೆ ತೀರ್ಥಹಳ್ಳಿ ಮೂಲದ ಸುದೀಪ್ ಶೆಟ್ಟಿಯೊಂದಿಗೆ ವಿವಾಹವಾಗಿದ್ದು, ದಂಪತಿಗೆ ಒಂದು ಹೆಣ್ಣು ಮಗುವಿದೆ. ಕೆಲ ತಿಂಗಳಿಂದ ಹಣಕಾಸಿನ ವಿಚಾರಕ್ಕಾಗಿ ಇಬ್ಬರ ನಡುವೆ ಜಗಳ ನಡೆಯುತಿತ್ತು. ಹಣಕ್ಕಾಗಿ ಪತಿ ಪತ್ನಿಯನ್ನ ಪೀಡಿಸುತ್ತಿದ್ದ. ಇದೇ ವಿಚಾರವಾಗಿ ಅ. 4 ರಂದು ಇಬ್ಬರೊಂದಿಗೆ ಜಗಳವಾಗಿತ್ತು. ಇದರಿಂದ ಮನನೊಂದಿದ್ದ ಮೇಘನಾ ನಿನ್ನೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸದ್ಯ ಆಕೆಯ ಪೋಷಕರು ನೀಡಿದ ದೂರಿನ ಮೇರೆಗೆ ವರದಕ್ಷಿಣೆ ಆರೋಪದಡಿ ಪ್ರಕರಣ ದಾಖಲಿಸಿಕೊಂಡು ಸುದೀಪ್ ಶೆಟ್ಟಿಯನ್ನ ವಶಕ್ಕೆ ಪಡೆದುಕೊಂಡು, ವಿಚಾರಣೆ ನಡೆಸುತ್ತಿರುವುದಾಗಿ ಹೇಳಿದ್ದಾರೆ.

ಇದನ್ನೂ ಓದಿ : ಬೆಂಗಳೂರಿನಲ್ಲಿ ಮಹಿಳೆಯ ಭೀಕರ ಕೊಲೆ ಪ್ರಕರಣ: ಹಂತಕನ ಪತ್ತೆಗೆ 6 ವಿಶೇಷ ಪೊಲೀಸ್ ತಂಡ ರಚನೆ - Bengaluru Woman Murder Case Update

ETV Bharat Logo

Copyright © 2024 Ushodaya Enterprises Pvt. Ltd., All Rights Reserved.