ETV Bharat / state

ಉಳ್ಳಾಲ: ಡಿವೈಡರ್​ಗೆ ಗುದ್ದಿದ ಬೈಕ್​; ವಿವಾಹಿತೆ ಸಾವು, ಸವಾರನ ಸ್ಥಿತಿ ಗಂಭೀರ - Bike Accident - BIKE ACCIDENT

ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

Yathish And Nidhi
ಯತೀಶ್​ ಹಾಗೂ ನಿಧಿ
author img

By ETV Bharat Karnataka Team

Published : Mar 25, 2024, 1:05 PM IST

ಉಳ್ಳಾಲ(ದಕ್ಷಿಣ ಕನ್ನಡ): ನಾಟೆಕಲ್ ಸಮೀಪ ಭಾನುವಾರ ಮಧ್ಯಾಹ್ನ ಸಂಭವಿಸಿದ ಬೈಕ್ ಅಪಘಾತದಲ್ಲಿ ವಿವಾಹಿತ ಮಹಿಳೆ ಸಾವನ್ನಪ್ಪಿದ್ದು, ಬೈಕ್​ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಬೋಂದೇಲ್​ನ ದೀಕ್ಷಿತ್ ಎಂಬವರ ಪತ್ನಿ ನಿಧಿ (29) ಸಾವನ್ನಪ್ಪಿದವರು. ಗಂಭೀರವಾಗಿ ಗಾಯಗೊಂಡಿರುವ ಸಹಸವಾರ ಯತೀಶ್​ ದೇವಾಡಿಗ ಉಳ್ಳಾಲದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇಬ್ಬರು ಮುಡಿಪುವಿನಲ್ಲಿ ಭಾನುವಾರ ಸಂಬಂಧಿಕರ ಗೃಹಪ್ರವೇಶ ಕಾರ್ಯಕ್ರಮದಲ್ಲಿ ಭಾಗವಹಿಸಿ ವಾಪಸಾಗುವ ಸಂದರ್ಭ ಈ ದುರ್ಘಟನೆ ನಡೆದಿದೆ. ಬೈಕ್ ಸವಾರನ ನಿಯಂತ್ರಣ ತಪ್ಪಿ ನಾಟೆಕಲ್ ಗ್ರೀನ್ ಗ್ರೌಂಡ್ ಸಮೀಪ ಡಿವೈಡರ್​ಗೆ ಡಿಕ್ಕಿ ಹೊಡೆದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದರು. ಇಬ್ಬರನ್ನೂ ತಕ್ಷಣ ಆಸ್ಪತ್ರೆಗೆ ಸಾಗಿಸಲಾಗಿದ್ದು, ನಿಧಿ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ: ಬಂಟ್ವಾಳ: ಅಪಘಾತದಲ್ಲಿ ಸಹಾಯ ಮಾಡಲು ತೆರಳಿದವರ ಬೈಕ್​ಗಳ​ ಮೇಲೆ ಹರಿದ ಲಾರಿ - ROAD ACCIDENT

ETV Bharat Logo

Copyright © 2025 Ushodaya Enterprises Pvt. Ltd., All Rights Reserved.