ETV Bharat / state

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಬೃಹತ್ ಪ್ರತಿಭಟನೆ: ಸಿಎಂ ನಿವಾಸಕ್ಕೆ ಮುತ್ತಿಗೆ ಯತ್ನಿಸಿದ ಬಿಜೆಪಿ ನಾಯಕರು ಪೊಲೀಸ್​ ವಶಕ್ಕೆ - BJP Protest - BJP PROTEST

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಬಿಜೆಪಿ ಫ್ರೀಡಂಪಾರ್ಕ್​​ನಲ್ಲಿ ಬೃಹತ್ ಪ್ರತಿಭಟನೆ ನಡೆಸಿತು. ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಅವರನ್ನು ಪೊಲೀಸರು ವಶಕ್ಕೆ ಪಡೆದರು.

BJP PROTEST
ಫ್ರೀಡಂಪಾರ್ಕ್​​ನಲ್ಲಿ ಬೃಹತ್ ಪ್ರತಿಭಟನೆ ನಡೆಸಿದ ಬಿಜೆಪಿ (ETV Bharat)
author img

By ETV Bharat Karnataka Team

Published : Jun 17, 2024, 2:21 PM IST

ಬೆಂಗಳೂರು: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ ನಡೆಸಿತು. ಫ್ರೀಡಂಪಾರ್ಕ್​​ನಲ್ಲಿ ಇಂದು ಬೃಹತ್ ಪ್ರತಿಭಟನೆ ನಡೆಸಿದ ಬಿಜೆಪಿ ನಾಯಕರು, ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡಿರುವ ಸರ್ಕಾರದ ಜನ ವಿರೋಧಿ ನೀತಿಯನ್ನು ಖಂಡಿಸಿದರು.

Massive protest by BJP condemning petrol and diesel price hike in Bengluru
ಫ್ರೀಡಂಪಾರ್ಕ್​​ನಲ್ಲಿ ಬೃಹತ್ ಪ್ರತಿಭಟನೆ ನಡೆಸಿದ ಬಿಜೆಪಿ (ETV Bharat)

ಬಿಜೆಪಿ ನಾಯಕರನ್ನು ವಶಕ್ಕೆ ಪಡೆದ ಪೊಲೀಸರು: ಸಿಎಂ ಮನೆಗೆ ಮುತ್ತಿಗೆ ಹಾಕಲು ಎತ್ತಿನಗಾಡಿಯಲ್ಲಿ ತೆರಳುತ್ತಿದ್ದ ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರನ್ನು ಪೊಲೀಸರು ಮಾರ್ಗ ಮಧ್ಯೆಯೇ ತಡೆದರು. ನಂತರ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಪ್ರತಿಪಕ್ಷದ ನಾಯಕ ಆರ್.ಅಶೋಕ್, ಮಾಜಿ ಡಿಸಿಎಂ ಡಾ.ಸಿ.ಎನ್. ಅಶ್ವತ್ಥನಾರಾಯಣ, ವಿಧಾನಪರಿಷತ್ ಸದಸ್ಯರಾದ ಸಿ.ಟಿ.ರವಿ, ರವಿಕುಮಾರ್, ಮಾಜಿ ಸಂಸದ ಮುನಿಸ್ವಾಮಿ ಮತ್ತಿತರ ನಾಯಕರನ್ನು ಪೊಲೀಸರು ವಶಕ್ಕೆ ಪಡೆದು ಬಸ್​​ನಲ್ಲಿ ಕರೆದೊಯ್ದರು.

ಜನವಿರೋಧಿ ನಿರ್ಧಾರ ಹಿಂಪಡೆಯುವ ವರೆಗೆ ಬಿಜೆಪಿ ಹೋರಾಟ - ಬಿ.ವೈ.ವಿಜಯೇಂದ್ರ: ಇದಕ್ಕೂ ಮುನ್ನ ಫ್ರೀಡಂಪಾರ್ಕ್​​ನಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು, ಪೆಟ್ರೋಲ್ ಬೆಲೆ ಲೀಟರ್​ಗೆ 3 ರೂ, ಡೀಸೆಲ್ ಬೆಲೆ 3.5 ರೂ. ಹೆಚ್ಚಳ ಅವಿವೇಕದ ಮತ್ತು ಜನವಿರೋಧಿ ನಿರ್ಧಾರವನ್ನು ಕಾಂಗ್ರೆಸ್ ಸರ್ಕಾರ ಕೈಗೊಂಡಿದೆ. ಏರಿಸಿದ ದರ ಹಿಂಪಡೆಯುವವರೆಗೆ ಬಿಜೆಪಿ ಹೋರಾಟ ಮಾಡಲಿದೆ ಎಂದು ಹೇಳಿದರು.

ನಾವು ವಿಪಕ್ಷವಾಗಿ ಜನರ ಪರವಾಗಿ ಧ್ವನಿ ಎತ್ತಬೇಕಿದೆ. ರಾಜ್ಯದ ರೈತರು, ಬಡವರು, ಜನಸಾಮಾನ್ಯರಿಗೆ ನ್ಯಾಯ ಕೊಡಿಸುವ ಕೆಲಸವನ್ನು ನಾವು-ನೀವೆಲ್ಲರೂ ಸೇರಿ ಮಾಡಬೇಕಿದೆ ಎಂದು ತಿಳಿಸಿದರು. ಜನವಿರೋಧಿ ಸರ್ಕಾರ ಮತ್ತು ಜನವಿರೋಧಿ ಮುಖ್ಯಮಂತ್ರಿಗಳ ವಿರುದ್ಧ ರಾಜ್ಯಾದ್ಯಂತ ಬಿಜೆಪಿ ಹೋರಾಟ ಕೈಗೆತ್ತಿಕೊಂಡಿದೆ ಎಂದು ತಿಳಿಸಿದರು.

ಲೋಕಸಭಾ ಚುನಾವಣೆಯಲ್ಲಿ 18 ರಿಂದ 20 ಸ್ಥಾನ ಗೆಲ್ಲುವ ನಿರೀಕ್ಷೆ ಇಟ್ಟುಕೊಂಡಿದ್ದ ಕಾಂಗ್ರೆಸ್ ಮುಖಂಡರು ಫಲಿತಾಂಶ ಬಂದ ಬಳಿಕ ಹತಾಶರಾಗಿದ್ದಾರೆ. ಇನ್ನೊಂದೆಡೆ ಕಾಂಗ್ರೆಸ್ ಪಕ್ಷದ ಶಾಸಕರೇ ಗ್ಯಾರಂಟಿ ವಿರುದ್ಧ ಧ್ವನಿ ಎತ್ತುತ್ತಿದ್ದಾರೆ ಎಂದ ಅವರು, ವಿರೋಧ ಪಕ್ಷದಲ್ಲಿ ಇದ್ದಾಗ ಸಿದ್ದರಾಮಯ್ಯ ಅವರಿಗೆ ಇದ್ದ ಜನಪರ ಕಾಳಜಿ ಮುಖ್ಯಮಂತ್ರಿಯಾದ ಬಳಿಕ ಎಲ್ಲಿ ಕಳೆದುಹೋಗಿದೆ? ರಾಜ್ಯ ದಿವಾಳಿ ಅಂಚಿಗೆ ಹೋಗಿದೆ. ಹಾಗಿದ್ದರೆ ಯಾವ ಪುರುಷಾರ್ಥಕ್ಕೆ ಆಡಳಿತ ನಡೆಸುತ್ತಿದ್ದೀರಿ? ಎಂದು ಪ್ರಶ್ನಿಸಿದರು.

ಬೆಲೆ ಏರಿಕೆ, ಹಣದುಬ್ಬರದ ಕುರಿತು ತಿಳಿದಿದ್ದರೂ ಅನುಭವಿ ಮುಖ್ಯಮಂತ್ರಿಯಾದ ಸಿದ್ದರಾಮಯ್ಯನವರು ಲೋಕಸಭಾ ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ದರ ಹೆಚ್ಚಳದ ಈ ಜನವಿರೋಧಿ ನಿರ್ಧಾರ ಮಾಡಿದ್ದು, ಇದು ಅಕ್ಷಮ್ಯ ಅಪರಾಧ ಎಂದು ಅವರು ಆಕ್ಷೇಪ ವ್ಯಕ್ತಪಡಿಸಿದರು.

ಪ್ರತಿಪಕ್ಷದ ನಾಯಕ ಆರ್. ಅಶೋಕ್ ಮಾತನಾಡಿ, ಸಿದ್ದರಾಮಯ್ಯ ಅವರಿಗೆ ಎರಡು ನಾಲಿಗೆ ಎಂದು ಟೀಕಿಸಿದರು. ಹಿಂದೆ ಅವರು ವಿರೋಧ ಪಕ್ಷದಲ್ಲಿದ್ದಾಗ ಪೆಟ್ರೋಲಿಯಂ ಉತ್ಪನ್ನಗಳ ದರ ಏರಿಕೆಯನ್ನು ಖಂಡಿಸಿದ್ದರು ಎಂದು ಸಿದ್ದರಾಮಯ್ಯ ಅವರ ವಿಡಿಯೋ ಪ್ರದರ್ಶನ ಮಾಡಿದರು.

ಸಿದ್ದರಾಮಯ್ಯಗೆ ಮಾನಮರ್ಯಾದೆ ಇಲ್ಲದ ಕಾಂಗ್ರೆಸ್ಸಿಗೆ ಸೇರಿದವರು. ಸಿದ್ರಾಮಣ್ಣ ನುಂಗಣ್ಣ ಎಂದರಲ್ಲದೆ, ವಾಲ್ಮೀಕಿ ನಿಗಮಕ್ಕೆ ಸೇರಿದ 187 ಕೋಟಿ ನುಂಗಿದ ನಾಗೇಂದ್ರರ ವಿಕೆಟ್ ಪತನವಾಗಿದೆ. ಈಗ ಎರಡನೇ ವಿಕೆಟ್ ಸಿದ್ದರಾಮಯ್ಯ ಅವರದ್ದು ಎಂದು ತಿಳಿಸಿದರು.

ಏರಿಸಿದ ಪೆಟ್ರೋಲ್, ಡೀಸೆಲ್ ದರವನ್ನು ಇಳಿಸಲು ಒತ್ತಾಯಿಸಿದರು. ಗ್ಯಾರಂಟಿಗೆ ಸಂಬಂಧಿಸಿ ಖಜಾನೆಯಿಂದಲೇ ಹಣ ನೀಡುತ್ತಿದ್ದಾರೆ. ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್, ರಾಹುಲ್ ಗಾಂಧಿಯವರು, ಕಾಂಗ್ರೆಸ್ ಪಕ್ಷದಿಂದ ಹಣ ಕೊಡುತ್ತಿಲ್ಲ ಎಂದರು. ಮಾಜಿ ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ್ ಮಾತನಾಡಿ, ರಾಜ್ಯದ ಕಾಂಗ್ರೆಸ್ ಸರ್ಕಾರವು ಕಳೆದೊಂದು ವರ್ಷದಲ್ಲಿ ನಿರಂತರವಾಗಿ ಬೆಲೆ ಏರಿಕೆ, ದರ ಏರಿಕೆಯನ್ನು ಮಾಡುತ್ತಲೇ ಬಂದಿದೆ ಎಂದು ದೂರಿದರು. ಏರಿಸಿದ ಪೆಟ್ರೋಲ್, ಡೀಸೆಲ್ ದರ ಹಿಂಪಡೆಯಲು ಅವರು ಆಗ್ರಹಿಸಿದರು.

ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಮಾತನಾಡಿ, ಕರ್ನಾಟಕ ಸೇರಿ 3 ರಾಜ್ಯಗಳಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಪಕ್ಷವು ಜನರಿಗೆ ಮೂರು ನಾಮ ಹಾಕುತ್ತಿದೆ. ಸಿದ್ದರಾಮಯ್ಯ ತಾವು ಮಾತ್ರ ಟೋಪಿ ಹಾಕುವುದಲ್ಲ. ಜನರಿಗೆಲ್ಲ ಟೋಪಿ ಹಾಕುತ್ತಿದ್ದಾರೆ ಎಂದು ಟೀಕಿಸಿದರು. ಟೋಪಿ ಹಾಕಿ ನಾಮ ಹಾಕಿ ಜನರಿಗೆ ಚೆಂಬು ಕೊಡುತ್ತಿದ್ದಾರೆ ಎಂದು ಆಕ್ಷೇಪಿಸಿದರು.

ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್, ಮಾಜಿ ಸಚಿವ ಬೈರತಿ ಬಸವರಾಜ್, ವಿಧಾನಪರಿಷತ್ ಮುಖ್ಯ ಸಚೇತಕ ಎನ್.ರವಿಕುಮಾರ್, ಎಂಎಲ್‍ಸಿಗಳಾದ ಛಲವಾದಿ ನಾರಾಯಣಸ್ವಾಮಿ, ಗೋಪಿನಾಥ ರೆಡ್ಡಿ, ಶಾಸಕರಾದ ರವಿ ಸುಬ್ರಹ್ಮಣ್ಯ, ಉದಯ್ ಗರುಡಾಚಾರ್, ರಘು, ಎ.ಎಸ್.ಪಾಟೀಲ ನಡಹಳ್ಳಿ, ಧೀರಜ್ ಮುನಿರಾಜು, ಬೆಂಗಳೂರಿನ ಮಾಜಿ ಸಚಿವರು, ಸಂಸದರು, ಶಾಸಕರು, ವಿಧಾನಪರಿಷತ್ ಸದಸ್ಯರು, ಬಿಬಿಎಂಪಿ ಮಾಜಿ ಸದಸ್ಯರು, ಬಿಜೆಪಿ ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್. ಹರೀಶ್, ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷ ಸಪ್ತಗಿರಿ ಗೌಡ, ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷ ಸಿ.ಕೆ. ರಾಮಮೂರ್ತಿ, ಪಕ್ಷದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಪ್ರತಿಭಟನೆಗೂ ಮುನ್ನ ಅಶೋಕ್‌ ನೇತೃತ್ವದಲ್ಲಿ ಬಿಜೆಪಿ ಮುಖಂಡರು ಫ್ರೀಡಂಪಾರ್ಕ್‌ಗೆ ಎತ್ತಿನಗಾಡಿಯಲ್ಲಿ ಆಗಮಿಸಿದರು. ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿದ ಪ್ರತಿಭಟನೆ ನಿರತರು ಈ ಸರ್ಕಾರ ಆದಷ್ಟು ಬೇಗ ತೊಲಗಲಿ ಎಂದು ಕಿಡಿಕಾರಿದರು.

ಇದನ್ನೂ ಓದಿ: ಪೆಟ್ರೋಲ್ - ಡೀಸೆಲ್ ದರ ಏರಿಕೆ ಆರಂಭವಷ್ಟೇ, ರಾಜ್ಯದಲ್ಲಿ ಪ್ರತಿಯೊಂದು ವಸ್ತುಗಳ ಬೆಲೆಗಳೂ ಗಗನಕ್ಕೇರಲಿವೆ; ಬಿ.ವೈ.ವಿಜಯೇಂದ್ರ - BY Vijayendra slams

ETV Bharat Logo

Copyright © 2024 Ushodaya Enterprises Pvt. Ltd., All Rights Reserved.