ETV Bharat / state

ತುಮಕೂರು: ತಾಯಿ-ಶಿಶು ಮರಣ ಪ್ರಮಾಣ ಏರಿಕೆ; ನಿಯಂತ್ರಣಕ್ಕೆ ಜಿಲ್ಲಾಡಳಿತದ ಕ್ರಮವೇನು? - MATERNAL AND INFANT MORTALITY RATES

ತುಮಕೂರಿನಲ್ಲಿ ತಾಯಿ-ಶಿಶು ಮರಣ ಪ್ರಮಾಣ ನಿಯಂತ್ರಣಕ್ಕೆ ತುಮಕೂರು ಜಿಲ್ಲಾಡಳಿತ ಹರಸಾಹಸಪಡುತ್ತಿದೆ.

Tumakuru District Hospital
ತುಮಕೂರು ಜಿಲ್ಲಾ ಆಸ್ಪತ್ರೆ (ETV Bharat)
author img

By ETV Bharat Karnataka Team

Published : Dec 20, 2024, 10:29 PM IST

ತುಮಕೂರು: ಜಿಲ್ಲೆಯಲ್ಲಿ ಈ ವರ್ಷದ ಏಪ್ರಿಲ್​ನಿಂದ ನವೆಂಬರ್​ವರೆಗೆ 16 ತಾಯಿ ಮರಣ ಹಾಗೂ 196 ಶಿಶುಗಳ ಮರಣ ಸಂಭವಿಸಿದ್ದು, ಇದನ್ನು ಶೂನ್ಯಕ್ಕಿಳಿಸಲು ಜಿಲ್ಲಾ ಆರೋಗ್ಯ ಇಲಾಖೆ ಕಾರ್ಯಪ್ರವೃತ್ತವಾಗಿದೆ.

ಅಂಕಿ-ಅಂಶಗಳ ಪ್ರಕಾರ, 2024ರ ಏಪ್ರಿಲ್​ನಿಂದ ನವೆಂಬರ್​ವರೆಗೆ 19,583 ಹೆರಿಗೆ ಪ್ರಕರಣಗಳು ವರದಿಯಾಗಿವೆ.

ಜಿಲ್ಲಾ ಆರೋಗ್ಯಾಧಿಕಾರಿ ಡಾ.ಚಂದ್ರಶೇಖರ್ ಮಾತನಾಡಿದರು. (ETV Bharat)

ಜಿಲ್ಲೆಯಲ್ಲಿ ಸಹಜ ಹೆರಿಗೆಗೆ ಆದ್ಯತೆ ನೀಡಬೇಕು. ಸಹಜ ಹೆರಿಗೆ ಸಾಧ್ಯವಾಗದಿದ್ದ ಸಂದರ್ಭದಲ್ಲಿ ಮಾತ್ರ ಸಿ-ಸೆಕ್ಷನ್(ಸಿಸೇರಿಯನ್) ಹೆರಿಗೆ ಮಾಡಬೇಕು. ಹೆರಿಗೆ ಮಾಡುವ ವೈದ್ಯರು ಹಾಗೂ ಹೆರಿಗೆಗೆ ಸಹಕರಿಸುವ ಶುಶ್ರೂಷಕರಿಗೆ ನೈಪುಣ್ಯತೆ ತರಬೇತಿ ನೀಡಲು ಜಿಲ್ಲಾಡಳಿತ ಮುಂದಾಗಿದೆ.

ಮರಣ ಹೊಂದಿದ 16 ತಾಯಂದಿರ ಪೈಕಿ ಮನೆಯಲ್ಲಿ 1, ಖಾಸಗಿ ಆಸ್ಪತ್ರೆಯಲ್ಲಿ 8, ಸರ್ಕಾರಿ ಆಸ್ಪತ್ರೆಯಲ್ಲಿ 3 ಹಾಗೂ ಮಾರ್ಗಮಧ್ಯೆ 4 ಪ್ರಕರಣಗಳು ವರದಿಯಾಗಿವೆ. ಅದೇ ರೀತಿ, ಆಸ್ಪತ್ರೆಯಲ್ಲಿ 127 ಹಾಗೂ ಮನೆಯಲ್ಲಿ 69 ಸೇರಿ ಒಟ್ಟು 196 ಶಿಶುಗಳ ಮರಣ ಸಂಭವಿಸಿದೆ.

ಏಪ್ರಿಲ್ ತಿಂಗಳಿನಿಂದ ನವೆಂಬರ್​ವರೆಗೆ ಹೃದಯ ಸಂಬಂಧಿತ, ಅಧಿಕ ರಕ್ತದೊತ್ತಡ, ಅಧಿಕ ರಕ್ತಸ್ರಾವ, ಉಸಿರಾಟದ ತೊಂದರೆ, ಅವಧಿ ಪೂರ್ವ ಹೆರಿಗೆ, ಡಯೇರಿಯಾ, ಆಸ್ಫಿಕ್ಸಿಯಾ, ಕಡಿಮೆ ತೂಕದ ಜನನ, ನಿಮೋನಿಯಾ, ಸೆಪ್ಸಿಸ್ ಸೇರಿದಂತೆ ಮತ್ತಿತರ ರೋಗಗಳಿಂದ ತಾಯಿ ಮತ್ತು ಶಿಶು ಮರಣ ಸಂಭವಿಸಿವೆ.

ಈ ಕುರಿತು ಆರೋಗ್ಯಾಧಿಕಾರಿ ಡಾ.ಚಂದ್ರಶೇಖರ್ ಮಾತನಾಡಿ, "ಗರ್ಭಿಣಿಯರಿಗೆ ತಮ್ಮ ಆರೋಗ್ಯದ ಬಗ್ಗೆ ಅರಿವು ಮೂಡಿಸುವ ಬಗ್ಗೆ ಬೇರು ಮಟ್ಟದಲ್ಲಿಯೇ ಕ್ರಮ ತೆಗೆದುಕೊಳ್ಳಲಾಗುತ್ತಿದೆ. ಅವರಿಗೆ ಅಂಗನವಾಡಿಗಳ ಮೂಲಕ ಕ್ಯಾಲ್ಸಿಯಂ ಮಾತ್ರೆ ಸೇರಿದಂತೆ ಪೌಷ್ಟಿಕಾಂಶಭರಿತ ಮಾತ್ರೆಗಳನ್ನು ವಿತರಿಸಲಾಗುತ್ತಿದೆ. ಜಿಲ್ಲೆಯಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ಮರಣ ಪ್ರಮಾಣ ಕ್ಷೀಣಿಸಿದೆ. ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ, ಆರೋಗ್ಯ ಇಲಾಖೆ ಅಧಿಕಾರಿಗಳು ಸದ್ದಿಲ್ಲದೆ ಕಾರ್ಯಪ್ರವೃತ್ತರಾಗಿದ್ದಾರೆ" ಎಂದರು.

"ಕಳೆದ ವರ್ಷ ಶೇ.14ರಷ್ಟಿದ್ದ ಮರಣ ಪ್ರಮಾಣ ಈ ವರ್ಷ ಶೇ.12 ರಷ್ಟಕ್ಕೆ ಬಂದಿದೆ. ಸರ್ಕಾರದಿಂದ ಗುಣಮಟ್ಟದ ಕಾರ್ಯಕ್ರಮಗಳು ಬರುತ್ತಿರುವುದರಿಂದ ಪ್ರತಿವರ್ಷವೂ ಜಾಗೃತಿ ಜಾಸ್ತಿಯಾಗುತ್ತಲೇ ಇದೆ. ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿಯೂ ಈ ಬಗ್ಗೆ ತಿಳಿಸುತ್ತಿದ್ದೇವೆ" ಎಂದು ಹೇಳಿದರು.

"ಜಿಲ್ಲೆಯ ಬಯಲುಸೀಮೆ ತಾಲೂಕುಗಳಾದ ಪಾವಗಡ ಮತ್ತು ಮಧುಗಿರಿ ತಾಲೂಕಿನಲ್ಲಿ ವಿಶೇಷವಾಗಿ ಮೆಟರ್​ನಿಟಿ ಹಾಸ್ಪಿಟಲ್​ಗಳನ್ನು ತೆರೆಯಲಾಗಿದೆ. ಅಲ್ಲಿ ಪ್ರತ್ಯೇಕವಾಗಿ ಆರೋಗ್ಯ ಸಿಬ್ಬಂದಿ ನೇಮಕ ಮಾಡಲಾಗಿದೆ. ಪ್ರಧಾನ ಮಂತ್ರಿ ಸುರಕ್ಷಾ ಯೋಜನೆಯಡಿ ವೈದ್ಯಕೀಯ ಪರೀಕ್ಷೆಗಳನ್ನು ಮಾಡಲಾಗುತ್ತಿದೆ" ಎಂದು ತಿಳಿಸಿದರು.

ಇದನ್ನೂ ಓದಿ: ಬಾಣಂತಿಯರ ಸಾವು ಪ್ರಕರಣ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ತನಿಖೆ: ಸಚಿವ ದಿನೇಶ್ ಗುಂಡೂರಾವ್ - MATERNAL DEATH CASE

ETV Bharat Logo

Copyright © 2025 Ushodaya Enterprises Pvt. Ltd., All Rights Reserved.