ETV Bharat / state

ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಆನ್‌ಲೈನ್​ನಲ್ಲಿ ಅರ್ಜಿ ಸಲ್ಲಿಸಲು ಮೇ 4 ಕೊನೆ ದಿನ - Village Administrative Officer

ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಮೇ 4ರವರೆಗೆ ಆನ್‌ಲೈನ್​ನಲ್ಲಿ ಅರ್ಜಿ ಸಲ್ಲಿಸಬಹುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.

Karnataka Examination Authority
ಕರ್ನಾಟಕ ಪರೀಕ್ಷಾ ಪ್ರಾಧಿಕಾರ
author img

By ETV Bharat Karnataka Team

Published : Apr 5, 2024, 10:05 PM IST

ಬೆಂಗಳೂರು: ಕಂದಾಯ ಇಲಾಖೆಯ 1,000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇರ ನೇಮಕಾತಿಗಾಗಿ ಏಪ್ರಿಲ್ 5ರಿಂದ ಮೇ 4ರವರೆಗೆ ಆನ್​ಲೈನ್​ನಲ್ಲಿ ಅರ್ಜಿ ಸಲ್ಲಿಸಬಹುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ತಿಳಿಸಿದೆ.

ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ ಅವರು ಶುಕ್ರವಾರ ಪತ್ರಿಕಾ ಪ್ರಕಟಣೆಯಲ್ಲಿ ಈ ವಿಷಯ ತಿಳಿಸಿದ್ದು, ಸಂಬಂಧಿಸಿದ ಅರ್ಜಿ ಶುಲ್ಕ ಪಾವತಿಸಲು ಮೇ 7ರ ಬ್ಯಾಂಕ್ ಅವಧಿಯವರೆಗೆ ಅವಕಾಶವಿರುತ್ತದೆ ಎಂದಿದ್ದಾರೆ.

ಈ ಮುಂಚೆ ಫೆ.20ರಂದು ಅಧಿಸೂಚನೆ ಹೊರಡಿಸಿ, ಆನ್​ಲೈನ್​ನಲ್ಲಿ ಅರ್ಜಿ ಸಲ್ಲಿಸಲು ಏಪ್ರಿಲ್ 3ರವರೆಗೆ ಅವಕಾಶ ಕೊಡಲಾಗಿತ್ತು. ಆದರೆ ಆನ್‌ಲೈನ್ ಅರ್ಜಿಯಲ್ಲಿ ಆದ ಕೆಲವು ಬದಲಾವಣೆಗಳ ಹಿನ್ನೆಲೆಯಲ್ಲಿ ಅರ್ಜಿ ಸಲ್ಲಿಸಲು ದಿನಾಂಕವನ್ನು ಮುಂದೂಡಲಾಗುವುದು ಎಂದು ತಿಳಿಸಲಾಗಿತ್ತು. ಅದರಂತೆ, ಈಗ ಪರಿಷ್ಕೃತ ದಿನಾಂಕವನ್ನು ಪ್ರಕಟಿಸಲಾಗಿದೆ ಎಂದು ಅವರು ವಿವರಿಸಿದ್ದಾರೆ.

ಕೆ-ಸೆಟ್-23 ಕೀ ಉತ್ತರ ಪ್ರಕಟ: ಕಳೆದ ಜನವರಿ 13ರಂದು 42 ವಿವಿಧ ವಿಷಯಗಳಿಗೆ ನಡೆಸಲಾಗಿದ್ದ ಕೆ-ಸೆಟ್-2023ರ ಎಲ್ಲಾ ವಿಷಯಗಳ ಅಂತಿಮ ಕೀ ಉತ್ತರಗಳನ್ನು ಅಭ್ಯರ್ಥಿಗಳ ಮಾಹಿತಿಗಾಗಿ ಕೆಇಎ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ ಎಂದು ಎಸ್.ರಮ್ಯಾ ಮತ್ತೊಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಇಂಡಿಯನ್​ ಮರ್ಚೆಂಟ್​ ನೇವಿಯಲ್ಲಿ 4,000 ಹುದ್ದೆಗಳು: ಅರ್ಹತೆ, ಅರ್ಜಿ ಸಲ್ಲಿಕೆಯ ವಿವರ - Indian Merchant Navy

ETV Bharat Logo

Copyright © 2024 Ushodaya Enterprises Pvt. Ltd., All Rights Reserved.